ಕಳೆದ 3 ತಿಂಗಳಿನಿಂದ ಟೊಯೊಟಾ ಕಾರ್ ಕಂಪನಿಯ ಆಳಿತದ ವಿರುದ್ಧ ಅಲ್ಲಿನ ಕಾರ್ಮಿಕರು ಹೋರಾಟ ಮಾಡುತ್ತಿದ್ದು, ಅವರನ್ನು ಬೆಂಬಲಿಸಿ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಜನವರಿ 31) ಕಾರ್ಮಿಕರ ಪ್ರತಿಬಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ “ವಿದೇಶಿ ಕಂಪನಿಗಳು ಈ ನೆಲದ ಕಾನೂನಿನ ಅನ್ವಯ ನಡೆದುಕೊಳ್ಳಲಿ” ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ. 1/5#Toyota pic.twitter.com/vfy3c2TMSH
— Siddaramaiah (@siddaramaiah) January 31, 2021
ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು
“ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. 2/5#Toyota
— Siddaramaiah (@siddaramaiah) January 31, 2021
“ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು” ಎಂದು ಹೇಳಿದ್ದಾರೆ.
ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ @CMofKarnataka ಅವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು. 3/5#Toyota
— Siddaramaiah (@siddaramaiah) January 31, 2021
ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!
“ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ್ ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ @drashwathcn ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ? 4/5#Toyota
— Siddaramaiah (@siddaramaiah) January 31, 2021
“ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಯವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ” ಎಂದು ಹೇಳಿದ್ದಾರೆ.
ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ @CMofKarnataka ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ. 5/5#Toyota
— Siddaramaiah (@siddaramaiah) January 31, 2021
ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!


