Homeಮುಖಪುಟಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

- Advertisement -
- Advertisement -

ಮಧ್ಯಪ್ರದೇಶದ ಸರ್ಕಾರಿ ಕಚೇರಿಗಳನ್ನು ಇನ್ನುಮುಂದೆ ಗೋ ಮೂತ್ರದಿಂದ ತಯಾರಿಸಿದ ಫಿನಾಯಿಲ್‌ನಿಂದ ಸ್ವಚ್ಚಗೊಳಿಸಲಾಗುವುದು ಎಂದು ಭಾನುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಕಛೇರಿಗಳ ಆವರಣವನ್ನು ಸ್ವಚ್ಚಗೊಳಿಸಲು ರಾಸಾಯನಿಕ ಫಿನಾಯಿಲ್‌ಗೆ ಬದಲಾಗಿ ಗೋಮೂತ್ರದಿಂದ ತಯಾರಿಸಿದ ಫಿನಾಯಿಲ್‌ ಅನ್ನೇ ಬಳಸಬೇಕು ಎಂಬುದಾಗಿ ರಾಜ್ಯದ ಸಾಮಾನ್ಯ ಆಡಳಿತ ಇಲಾಖೆ (GAD) ಆದೇಶ ಹೊರಡಿಸಿದೆ ಎಂದು GAD ಕಾರ್ಯದರ್ಶಿ ನಿವಾಸ್ ಶರ್ಮಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಸುಗಳ ರಕ್ಷಣೆಗಾಗಿ ನವೆಂಬರ್‌ನಲ್ಲಿ ನಡೆದ ಮೊದಲ ‘ಗೋವು ಕ್ಯಾಬಿನೆಟ್‌’ನಲ್ಲಿ ಗೋಮೂತ್ರ ಫಿನಾಯಿಲ್ ಬಳಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

“ಗೋ ಮೂತ್ರದ ಸ್ಥಾವರವನ್ನು ಸ್ಥಾಪಿಸಲು ಮತ್ತು ಗೋಮೂತ್ರದ ಫಿನಾಯಿಲ್‌ ಕಾರ್ಖಾನೆಗಳನ್ನು ಸ್ಥಾಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ಪಾದನೆಗಿಂತ ಮೊದಲು ಬೇಡಿಕೆಯನ್ನು ಸೃಷ್ಟಿಸಲಾಗಿದೆ. ಈಗ, ಹಾಲುಕರೆಯದ ಹಸುಗಳನ್ನು ಜನರು ತ್ಯಜಿಸುವುದಿಲ್ಲ” ಎಂದು ಪಶುಸಂಗೋಪನಾ ಇಲಾಖೆ ಸಚಿವ ಪ್ರೇಮ್ ಸಿಂಗ್ ಪಟೇಲ್ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಕುನಾಲ್ ಚೌಧರಿ, “ಯಾವುದೇ ಮೂಲಭೂತ ಸೌಕರ್ಯಗಳನ್ನು ಸ್ಥಾಪಿಸದೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಹಸುಗಳ ಸ್ಥಿತಿಯನ್ನು ಸುಧಾರಿಸಲು ರಾಜ್ಯ ಸರ್ಕಾರ ಬಯಸಿದರೆ, ಅವರು ರಾಜ್ಯದಲ್ಲಿ ಕನಿಷ್ಠ ಕೆಲವು ಕಾರ್ಖಾನೆಗಳನ್ನು ಪ್ರಾರಂಭಿಸಿರಬೇಕಿತ್ತು” ಎಂದು ಟೀಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಹುಲ್ ಕೊಠಾರಿ, “ಇದು ಕಾಂಗ್ರೆಸ್ ನಾಯಕರ ಅಸ್ಪಷ್ಟ ಚಿಂತನೆ. ಯಾವುದೇ ಬೇಡಿಕೆಯಿಲ್ಲದೆ ಕಾರ್ಖಾನೆಯನ್ನು ಏಕೆ ಸ್ಥಾಪಿಸುತ್ತಾರೆ? ರಾಜ್ಯ ಸರ್ಕಾರ ಉತ್ತಮ ನಿರ್ಧಾರ ತೆಗೆದುಕೊಂಡಿದ್ದು, ಇತರ ರಾಜ್ಯಗಳೂ ಇದನ್ನು ಅನುಸರಿಸುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...