Homeಕರ್ನಾಟಕಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

ಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿನನ್ವಯ ಇದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ತೆರವು ಮಾಡಿದೆ.
ತೇಜಸ್ವಿ ಅವರು ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಕೆಲವರು ಅವರನ್ನು ಟ್ವಿಟ್ಟರ್‍ನಲ್ಲಿ ಅಭಿನಂದಿಸಿದ್ದರು. ಆಗ ಮಹಿಳಾ ಉದ್ಯಮಿಯೊಬ್ಬರು ಅವರಿಗೆ, ಈ ವ್ಯಕ್ತಿಯ ಚಾರಿತ್ರ್ಯ ಸರಿ ಇಲ್ಲ, ಧರ್ಮದ ಕುರಿತು ಮಾತನಾಡುವವರೆಲ್ಲರೂ ಒಳ್ಳೆಯವರೇನೂ ಆಗಿರುವುದಿಲ್ಲ. ಬೇಕಾದರೆ ನಿಮಗೆ ಸಾಕ್ಷಿ ಒದಗಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲೇ ಹೇಳಿದ್ದರು. ಆ ನಂತರ ತನಗೇ ಆತನಿಂದ ಆದ ಮೋಸದ ಬಗ್ಗೆ ಟ್ವೀಟ್ ಮಾಡಿದ್ದರು.

ಇದು ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ಬಿಜೆಪಿಯ ವಲಯಗಳಿಂದಲೇ ತೇಜಸ್ವಿಯ ಇನ್ನೂ ಹಲವು ಹಗರಣಗಳ ಕುರಿತ ವಿವರಗಳು ಮತ್ತು ಸ್ಕ್ರೀನ್‍ಷಾಟ್‍ಗಳು, ವಿಡಿಯೋಗಳು ಮಾಧ್ಯಮ ಸಂಸ್ಥೆಗಳಿಗೆ ತಲುಪಿದ್ದವು. ಆದರೆ ಅಷ್ಟರಲ್ಲಿ ತೇಜಸ್ವಿಯವರು ನಗರದ ಸಿವಿಲ್ ಕೋರ್ಟಿನಲ್ಲಿ ತಮ್ಮ ವಿರುದ್ಧ ಈ ಪ್ರಕರಣ ಅಥವಾ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸಬಾರದೆಂದು ನಿರ್ಬಂಧ ಆದೇಶ ತಂದಿದ್ದರು.
ಈ ನಿರ್ಬಂಧ ಆದೇಶ ಸಹಾ ಟೀಕೆಗೊಳಗಾಗಿತ್ತು. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ನಂತರ ಡೆಕ್ಕನ್ ಹೆರಾಲ್ಡ್ ಪ್ರಜಾವಾಣಿಗಳು ಅದರ ಬಗ್ಗೆ ಸಂಪಾದಕೀಯಗಳನ್ನೂ ಬರೆದಿದ್ದವು.

ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ ಶಾಸ್ತ್ರಿಯವರು ಹಾಕಿದ ಮೊಕದ್ದಮೆಯ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಏನು ಹೇಳಲಾಗಿದೆ?
ಅರ್ಜಿದಾರರ ವಾದದ ಅಂಶಗಳು ಸರಿಯಾಗಿವೆ

ಮತದಾರರು ಸ್ಪರ್ಧಿಸಿರುವ ಅಭ್ಯರ್ಥಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕುಳ್ಳವರಾಗಿದ್ದಾರೆ.

ಸಂವಿಧಾನದ 19(1)ಎ ಕಲಂ ನಮಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಕೊಟ್ಟಿದೆ.

ಮಾನಹಾನಿ ಸುದ್ದಿ ಪ್ರಕಟವಾದ ನಂತರವೇ ಅದು ಹೌದೇ ಅಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯ.

ಆ ರೀತಿ ಮಾನಹಾನಿ ಆಗಿದೆ ಎಂದು, ಅಂತಹ ಕ್ರಿಯೆ ನಡೆದ ನಂತರ ಸಂಬಂಧಪಟ್ಟವರಿಗೆ ಅನಿಸಿದರೆ ಅವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು.

ಈ ಹಂತದಲ್ಲಿ ಪ್ರತಿವಾದಿಗೆ ಮಾನಹಾನಿ ಸುದ್ದಿ ಪ್ರಕಟವಾಗಿದೆ ಎಂದರೆ ಅದನ್ನು ಚುನಾವಣಾ ಆಯೋಗದ ಮುಂದೆ ತೆಗೆದುಕೊಂಡು ಹೋಗಿ ಪರಿಹಾರ ಪಡೆಯಬಹುದು.

ಈ ತೀರ್ಪಿನ ಮುಖಾಂತರ ತೇಜಸ್ವಿಯವರ ಕುರಿತ ಇತರ ವರದಿಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದಾಗಿದೆ. ಸ್ವತಃ ವಕೀಲರಾಗಿರುವ ತೇಜಸ್ವಿ ವಾಟ್ಸಾಪ್, ಗೂಗಲ್, ಫೇಸ್‍ಬುಕ್ ಮತ್ತು ಯಾಹೂ ಸಂಸ್ಥೆಗಳ ಮೇಲೂ ಇಂತಹ ಮೊಕದ್ದಮೆಯನ್ನು ಹೂಡಿ ಗೇಲಿಗೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಂತೂ ಇದು ಬಹಳ ತಮಾಷೆಯ ಸಂಗತಿಯಾಗಿತ್ತು.
ಅಂತಿಮವಾಗಿ ತ್ರಿಲೋಚನಾ ಶಾಸ್ತ್ರಿಯವರು ಹೂಡಿದ ಮೊಕದ್ದಮೆಯ ಕಾರಣದಿಂದ ಸದರಿ ಆದೇಶವು ರದ್ದಾಗಿದೆ. ಈಗ ತೇಜಸ್ವಿಯವರ ಮುಂದಿನ ನಡೆಯೇನು ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...