Homeಮುಖಪುಟಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು ಶಾ ವಿರುದ್ದ ಹರಿಹಾಯ್ದ ಮಮತಾ ಬ್ಯಾನರ್ಜಿ, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ “ಹೊರಗಿನವರ ವಿರುದ್ಧ ಒಳಗಿನವರು” ಎಂಬ ಚರ್ಚೆಯನ್ನು ಹುಟ್ಟು ಹಾಕಿರುವ ಮಮತಾ ಬ್ಯಾನರ್ಜಿ ಇಂದು ಅದಕ್ಕೆ ಮೇಲಿನಂತೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

“ಅಸ್ಸಾಂ ಮತ್ತು ತ್ರಿಪುರದಲ್ಲಿ ಏನು ನಡೆಯುತ್ತಿದೆ ನೋಡಿ. ಎನ್‌ಆರ್‌ಸಿ ಹೆಸರಿನಲ್ಲಿ ಅವರು ಎಲ್ಲರನ್ನೂ ಹೆದರಿಸಿದ್ದಾರೆ. ಎನ್‌ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಕೂಡ ಇದೆ. ಪ್ರತಿ ರಾಜ್ಯವೂ ಇದನ್ನು ಮಾಡುತ್ತಿದೆ, ಆದರೆ ನಾವು ಅದನ್ನು ಮಾಡಿಲ್ಲ. ನಾವು ಅವರನ್ನು ಮಾಡಲು ಬಿಡುವುದೂ ಇಲ್ಲ” ಎಂದು ಅವರು ಹೇಳಿದ್ದಾರೆ.

ನೆರೆಯ ರಾಜ್ಯಗಳ ಜನರನ್ನು ಸ್ವೀಕರಿಸುವುದು ಬಂಗಾಳಿ ಸಂಸ್ಕೃತಿಗೆ ಹೊಸದೇನಲ್ಲ ಎಂದು ಸಾಬೀತುಪಡಿಸುವ ಪ್ರಯತ್ನವನ್ನು ಬಿಜೆಪಿ ಮುಂದುವರಿಸಿದೆ. ಆದರೆ ಮಮತಾ ಎನ್‌ಆರ್‌ಸಿ, ಎನ್‌ಪಿಆರ್ ಉಲ್ಲೇಖಿಸುತ್ತ, ಬಂಗಾಳದಲ್ಲಿರವವರೆಲ್ಲ ಬಂಗಾಳಿಗಳೇ ಎಂದು ಹೇಳುತ್ತ ಬಂದಿದ್ದಾರೆ.

ಸೋಮವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣವನ್ನು ಬಂಗಾಳದ ಸಾಂಸ್ಕೃತಿಕ ಅಸ್ಮಿತೆ ಎಂದು ಪರಿಗಣಿಸಲಾದ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಉಲ್ಲೇಖದೊಂದಿಗೆ ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಳೆದ ತಿಂಗಳುಗಳಿನಿಂದ ಬಿಜೆಪಿಯು ರಾಜ್ಯದ ಸಾಂಸ್ಕೃತಿಕ ಐಕಾನ್‌ಗಳ ಮೇಲೆ ವ್ಯಾಪಕವಾಗಿ ಗಮನ ಹರಿಸಿದೆ. ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆಯನ್ನು ಜೋರಾಗಿ ಆಚರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತಾಜಿ ಜನ್ಮದಿನ ಆಚರಣೆಗೆ ಕೊಲ್ಕೊತ್ತಕ್ಕೆ ಬಂದಿದ್ದರು.

ಆದರೆ ಟ್ಯಾಗೋರ್ ಅವರ ಜನ್ಮಸ್ಥಳ ಇತ್ಯಾದಿ ವಿಷಯಗಳನ್ನು ಉಲ್ಲೇಖಿಸುವಾಗ ಬಿಜೆಪಿ ನಾಯಕರು ಹಲವಾರು ತಪ್ಪುಗಳನ್ನು ಮಾಡುತ್ತಾ ಬಂದಿದ್ದಾರೆ. ನೇತಾಜಿಯ ಜನ್ಮದಿನವನ್ನು ಆಚರಿಸುವ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಬೆಂಬಲಿಗರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕೆ, ಸರ್ಕಾರಿ ಕಾರ್ಯಕ್ರಮದಲ್ಲಿ ಧಾರ್ಮಿಕ ಘೋಷಣೆ ಸಲ್ಲದು ಎಂದು ಮುಖ್ಯಮಂತ್ರಿ ಮಮತಾ ಪ್ರಧಾನಿಯಿದ್ದ ವೇದಿಕೆಯಿಂದ ಹೊರ ನಡೆದು ಪ್ರತಿಭಟನೆ ದಾಖಲಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ನಲ್ಲಿ ರಾಜ್ಯ ಚುನಾವಣೆ ನಡೆಯಲಿದ್ದು ಟಿಎಂಸಿ ಮತ್ತು ಬಿಜೆಪಿ ನಡುವೆ ವಿಪರೀತ ಜಿದ್ದಾಜಿದ್ದಿ ನಡೆಯುತ್ತಿದೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...