Homeಮುಖಪುಟತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ಎಫ್‌ಐಆರ್‌ನಲ್ಲಿ ಥನ್‌ಬರ್ಗ್ ಸೇರಿದಂತೆ ಯಾರ ಹೆಸರೂ ಇಲ್ಲ. ಖಲಿಸ್ತಾನಿ ಗುಂಪೊಂದು ಟೂಲ್‌ಕಿಟ್ ಸಿದ್ಧಪಡಿಸಿರುವ ಶಂಕೆ ಇದ್ದು ಅದನ್ನು ಪತ್ತೆ ಮಾಡುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

“ಸಾಗರೋತ್ತರ ಪಿತೂರಿ”ಯ ತನಿಖೆಯು ಗ್ರೇಟಾ ಥನ್‌ಬರ್ಗ್ ವಿರುದ್ಧವಲ್ಲ, ಆದರೆ ಅವರು ಹಂಚಿಕೊಂಡ ಟೂಲ್‌ಕಿಟ್ ಸಿದ್ಧಪಡಿಸಿದವರ ವಿರುದ್ಧ. “ಖಲಿಸ್ತಾನಿ ಗುಂಪು” ಒಂದಕ್ಕೆ ಇದು ಸಂಬಂಧಿಸಿದ್ದು ಎಂಬ ಅನುಮಾನವಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

“ಜನವರಿ 26 ರ ಕೆಂಪೊಕೋಟೆ ಹಿಂಸಾಚಾರದ ಹಿಂದಿನ ಪಿತೂರಿಯ ಕಾರ್ಯಸೂಚಿಯನ್ನು ವಿವರಿಸುವ ಟೂಲ್‌ಕಿಟ್ ಡಾಕ್ಯುಮೆಂಟ್ ಅನ್ನು ದೆಹಲಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಭಾರತದ ವಿರುದ್ಧ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಯುದ್ಧವನ್ನು ನಡೆಸುವುದು ಇದರ ಉದ್ದೇಶವಾಗಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಆಯುಕ್ತ ಪ್ರವೀರ್ ರಂಜನ್ ತಿಳಿಸಿದ್ದಾರೆ.

ಆದರೆ, ಥನ್‌ಬರ್ಗ್ ಹಳೆಯ ಟೂಲ್‌ಕಿಟ್ ಡಿಲೀಟ್ ಮಾಡಿ, ನವೀಕೃತ ಟೂಲ್‌ಕಿಟ್ ಹಂಚಿಕೊಂಡಿದ್ದು, ಅದರಲ್ಲಿ ಜನವರಿ 26ರ ಪ್ರಸ್ತಾಪವಿಲ್ಲ.

‘ಭಾರತ ಸರ್ಕಾರದ ವಿರುದ್ಧ ಅಸಮಾಧಾನವನ್ನು ಹರಡುವ ಯತ್ನಕ್ಕಾಗಿ ಒಂದು ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದೇವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಯ ಮೂಡಿಸುವ ಕ್ರಿಮಿನಲ್ ಪಿತೂರಿ ಇದಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

18 ವರ್ಷದ ಗ್ರೆಟಾ ಥನ್‌ಬರ್ಗ್‌ರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆಯೇ ಎಂದು ಕೇಳಿದಾಗ, “ನಾವು ಎಫ್‌ಐಆರ್‌ನಲ್ಲಿ ಯಾರನ್ನೂ ಹೆಸರಿಸಿಲ್ಲ. ಇದು ಟೂಲ್‌ಕಿಟ್‌ನ ಸೃಷ್ಟಿಕರ್ತರ ವಿರುದ್ಧ ಮಾತ್ರ” ಎಂದು ಅವರು ಉತ್ತರಿಸಿದ್ದಾರೆ.

ಟೂಲ್‌ಕಿಟ್ ಅನ್ನು ಯಾರು ಹಂಚಿಕೊಂಡಿದ್ದಾರೆಂದು ಸೂಚಿಸಲು ವರದಿಗಾರರು ಒತ್ತಾಯಿಸಿದಾಗ, “ನಿಮಗೆ ಇದರ ಬಗ್ಗೆ ತಿಳಿದಿದೆ, ನಾನು ಅದನ್ನು ಇಲ್ಲಿ ಹೆಸರಿಸಲು ಬಯಸುವುದಿಲ್ಲ” ಎಂದು ರಂಜನ್ ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಕಳೆದ ವಾರ ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

‘ತನ್ನನ್ನು “ಪೊಯೆಟಿಕ್ ಜಸ್ಟೀಸ್ ಫೌಂಡೇಶನ್” ಎಂದು ಕರೆದುಕೊಳ್ಳುವ ಖಲಿಸ್ತಾನಿ ಗುಂಪು ಈ ಟೂಲ್‌ಕಿಟ್ ಸೃಷ್ಟಿಸಿದೆ ಎಂಬ ಮಾಹಿತಿಯಿದೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
“ನೀವು ಜನವರಿ 26 ರ ಘಟನೆಗಳನ್ನು ನೋಡಿದರೆ ಅದು ಟೂಲ್‌ಕಿಟ್‌ನ ಕ್ರಿಯಾ ಯೋಜನೆಯ ಕಾಪಿ ಕ್ಯಾಟ್ ಎಂಬುದನ್ನು ಬಹಿರಂಗಪಡಿಸುತ್ತದೆ. ಇದು ದೆಹಲಿ ಪೊಲೀಸರಿಗೆ ಕಳವಳಕಾರಿ ಸಂಗತಿಯಾಗಿದೆ. ಖಂಡಿತವಾಗಿಯೂ ಟೂಲ್‌ಕಿಟ್‌ನ ಸೃಷ್ಟಿಕರ್ತರ ಉದ್ದೇಶವು ವಿವಿಧ ಸಾಮಾಜಿಕ , ಧಾರ್ಮಿಕ ಗುಂಪುಗಳ ನಡುವೆ ವೈಮನಸ್ಸು ಮೂಡಿಸುವುದಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ,

ನಿನ್ನೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ’ ಎಂದಿದ್ದರು.
ಕಳೆದ ಎರಡು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತರರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್‌ಟ್ಯಾಗ್‌ಗಳು ಮತ್ತು ಕಾಮೆಂಟ್‌ಗಳ ಪ್ರಲೋಭನೆ” ವಿರುದ್ಧ ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.


ಇದನ್ನೂ ಓದಿ: ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...