Homeಮುಖಪುಟಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಕ್ರಿಕೆಟಿಗರು, ಬಾಲಿವುಡ್ ತಾರೆಯರು ಸರ್ಕಾರದ ಪರವಾಗಿ ಟ್ವೀಟ್ ಮಾಡುತ್ತಿರುವ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಯಾವ ಅಳುಕೂ ಇಲ್ಲದೇ ಸರ್ಕಾರದ ವಿರುದ್ಧ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಎರಡು ತಿಂಗಳಿನಿಂದಲೂ ನಡೆಯುತ್ತಿರುವ ರೈತ ಪ್ರತಿಭಟನೆ ಮತ್ತು ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಭಾರತ ಸರ್ಕಾರದ ವಿರುದ್ಧ ಅಂತರರಾಷ್ಟ್ರೀಯ ಟೀಕೆಗಳು ಕೇಳಿಬಂದಿವೆ. ಆದರೆ ಅವುಗಳ ವಿರುದ್ಧ ಇಲ್ಲಿನ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದಾರೆ. ಆದರೆ ನಟಿ ಸೋನಾಕ್ಷಿ ಸಿನ್ಹಾ ಈ ಸಂಘಟಿತ ಅಭಿಯಾನದ ವಿರುದ್ಧ ಮಾತನಾಡಿದ ಸಾರ್ವಜನಿಕ ವ್ಯಕ್ತಿಗಳೊಂದಿಗೆ ಸೇರಿಕೊಂಡಿದ್ದಾರೆ.

‘ಹಸ್ತಕ್ಷೇಪ ಎನ್ನುತ್ತೀರಿ ಏಕೆ? ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ ಇದು’ ಎಂದಿರುವ ಸೋನಾಕ್ಷಿ, ರಿಹಾನ್ನ, ಗ್ರೇಟಾ ಅವರ ನಿಲುವನ್ನು ಸಮರ್ಥಿಸಿದ್ದಾರೆ.

“ಮಾನವ ಹಕ್ಕುಗಳ ಉಲ್ಲಂಘನೆ, ಇಂಟರ್ನೆಟ್ ಸ್ಥಗಿತ ಮತ್ತು ಅಭಿವ್ಯಕ್ತಿಯ ನಿಗ್ರಹಗಳು, ಪ್ರಭುತ್ವದ ಪ್ರೊಪಗಂಡಾ, ದ್ವೇಷದ ಮಾತು ಮತ್ತು ಅಧಿಕಾರ ದುರುಪಯೋಗದ ವಿರುದ್ಧ ಈ ಧ್ವನಿಗಳು ವ್ಯಕ್ತವಾಗಿವೆ” ಎಂದು ಸೋನಾಕ್ಷಿ ಸಿನ್ಹಾ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದಾರೆ.

ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ.. ಎಂದು ಸೋನಾಕ್ಷಿ ಬರೆದಿದ್ದಾರೆ.

“ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಅಂತರ್ಜಾಲವನ್ನು ನಿಷೇಧಿಸಲಾಗಿದೆ. ಪ್ರಭುತ್ವ ಮತ್ತು ಮಾಧ್ಯಮಗಳ ಪ್ರೊಪಗಂಡಾ ಮೂಲಕ ಪ್ರತಿಭಟನಾಕಾರರನ್ನು ಕೆಣಕಲಾಗುತ್ತಿದೆ. ದ್ವೇಷದ ಮಾತು (ದೇಶ್ ಕೆ ಗದ್ದಾರೊಂ ಕೊ, ಗೋಲಿ ಮಾರೊ ಸರ್ದಾರೊ ಕೊ ಈಗ ಚಾಲ್ತಿಗೆ ಬಂದಿದೆ) ಪ್ರವರ್ಧಮಾನಕ್ಕೆ ಬರುತ್ತಿದೆ. ಈ ವಿಷಯವೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ನಟರು, ಕ್ರಿಕೆಟಿಗರು, ಮಂತ್ರಿಗಳು, ವಿದೇಶದಲ್ಲಿರುವ ಭಾರತೀಯ ನಿಯೋಗಗಳು ಮತ್ತು ಆಡಳಿತರೂಢ ಬಿಜೆಪಿಯ ನಾಯಕರು ಮತ್ತು ಬೆಂಬಲಿಗರು ಮಾಡಿದ ಟ್ವೀಟ್‌ಗಳ ಹಿಮಪಾತಕ್ಕೆ ಪ್ರತಿಕ್ರಿಯೆಯಾಗಿ ಸೋನಾಕ್ಷಿ ಅವರು ತಮ್ಮ ಪೋಸ್ಟ್ ಹಾಕಿದ್ದಾರೆ.

ಇಂಟರ್ನೆಟ್ ಸ್ಥಗಿತಗೊಳಿಸುವಿಕೆ, ಮುಳ್ಳುತಂತಿ, ಕಾಂಕ್ರೀಟ್ ಗೋಡೆಗಳು ಮತ್ತು ಮಾಧ್ಯಮ ದಿಗ್ಬಂಧನದೊಂದಿಗೆ ರೈತರ ಪ್ರತಿಭಟನೆಯನ್ನು ನಿಲ್ಲಿಸುವ ಸರ್ಕಾರದ ಪ್ರಯತ್ನಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಒಳಗಾದ ನಂತರ ಸರ್ಕಾರವನ್ನು ಬೆಂಬಲಿಸುವ ಟ್ವೀಟ್ ಅಭಿಯಾನ ಶುರುವಾಗಿದೆ. ಈ ಅಭಿಯಾನವು ಪ್ರಮುಖವಾಗಿ ಪಾಪ್ ತಾರೆ ರಿಹಾನ್ನಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ನಡೆದಿದೆ.

ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಎರಡು ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರವು ಈ ಪ್ರತಿಭಟನೆಯನ್ನು ಮುರಿಯಲು ವಾಮಮಾರ್ಗಗಳನ್ನು, ದೌರ್ಜನ್ಯದ ಕ್ರಮಗಳನ್ನು ಅನುಸರಿಸುತ್ತಿದೆ ಎಂಬ ಟೀಕೆಗಳು ವ್ಯಾಪಕವಾಗಿ ವ್ಯಕ್ತವಾಗಿವೆ.

ಭಾರತದ ಅಧಿಕಾರಸ್ಥರ ಕ್ರಮ, ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆಗಳು ಮತ್ತು ಅಶ್ಲೀಲತೆಗಳಿಗೆ ಗುರಿಯಾಗುವ ಸಾಧ್ಯತೆ, ಸರ್ಕಾರದ ಮತಾಂಧ ಬೆಂಬಲಿಗರ ಪ್ರತೀಕಾರದ ನಿಲುವಿನ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಗಣ್ಯರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ವಿರುದ್ಧ ನಿಲುವು ಪ್ರಕಟಿಸದೇ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಧೈರ್ಯ ಮೆರೆದಿದ್ದಾರೆ.


ಇದನ್ನೂ ಓದಿ; ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...