ಫೆಬ್ರವರಿ 26 ರಿಂದ 28 ರವರೆಗೆ ಹಾವೇರಿ ಜಿಲ್ಲೆಯಲ್ಲಿ ನಿಗದಿ ಮಾಡಲಾಗಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ತಿಳಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳವನ್ನು ತಾತ್ಕಾಲಿಕವಾಗಿ ಮುಂದುಡಲು ನಿರ್ಧರಿಸಲಾಯಿತು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: “ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ
ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳವನ್ನು ತಾತ್ಕಾಲಿಕವಾಗಿ ಮುಂದುಡಲು ನಿರ್ಧರಿಸಲಾಯಿತು. 1/3 pic.twitter.com/yIpPuyHcvP— Aravind Limbavali (@ArvindLBJP) February 5, 2021
ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳಕ್ಕೆ ನಡೆದ ಸಿದ್ಧತೆಗಳು ಇನ್ನೂ ಅಪೂರ್ಣವಾಗಿದೆ ಎಂದಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಸಾಹಿತ್ಯ ಆಸಕ್ತರು ಸೇರುವುದರಿಂದ ಕೊರೊನಾ ನಿಯಮಗಳ ಪಾಲನೆಯು ಕಷ್ಟಕರವಾಗುತ್ತದೆ” ಎಂದು ಹೇಳಿದ್ದಾರೆ.
“ಫೆಬ್ರವರಿ ಅಂತ್ಯಕ್ಕೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆಯಿರುವುದರಿಂದ ಆನಂತರ ಮಾರ್ಚ್ 09 ಕ್ಕೆ ಮತ್ತೊಂದು ಸಭೆ ನಡೆಸಿ ಸಮ್ಮೇಳನ ನಡೆಸುವ ದಿನಾಂಕ ನಿರ್ಧರಿಸಲಾಗುವುದು” ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದರು.
ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ದೊಡ್ಡರಂಗೇಗೌಡ


