ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪೂರಕ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರೈತರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಯುವಕರಿಗಾಗಿಯೇ ‘ತರುಣರ ಸ್ವಪ್ನ’ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಹೊಸ ಯೋಜನೆಗಳು ಏಪ್ರಿಲ್ ತಿಂಗಳ ನಂತರ ಜಾರಿಗೆ ಬರಲಿವೆ.
2.99 ಲಕ್ಷ ಕೋಟಿ ಮೊತ್ತ ಪೂರಕ ಬಜೆಟ್ ಮಂಡಿಸಿರುವ ಮಮತ ಬಜೆಟ್ ಅನ್ನು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರಭೋಷ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಸುಭಾಷ್ ಚಂದ್ರರ ಮಾತುಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಉಲ್ಲೇಖಿಸಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಸುಭಾಷ್ ಮಾತುಗಳಲ್ಲೇ ಹೇಳುವುದಾದರೆ ‘ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ’ ಸುಭಾಷ್ ಚಂದ್ರ ಭೋಸರ 125ನೇ ವರ್ಷಾಚರಣೆ ಸಂದರ್ಭದಲ್ಲಿ ಅವರ ನೆನಪು ಸದಾ ಉಳಿಯುವಂತೆ ಮಾಡಬೇಕಾಗಿದೆ. ಅದಕ್ಕಾಗಿ ನಾನು ರಾಜ್ಯದ ಜನರ ಮುಂದೆ ಹೇಳುತ್ತಿದ್ದೇನೆ. ‘ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?
ಸುಭಾಷ್ ಚಂದ್ರಭೋಸರ ನೆನಪು ಸದಾ ಉಳಿಯುವಂತಾಗಲು ಸ್ಮಾರಕ ನಿರ್ಮಾಣ ಮಾಡಬೇಕು. ಅದಕ್ಕಾಗಿ ‘ತರುಣರ ಕನಸು’ ಯೋಜನೆ ರೂಪಿಸುತ್ತಿದ್ದೇನೆ. ಅಷ್ಟೇ ಅಲ್ಲ ರಾಜ್ಯ ಯೋಜನಾ ಆಯೋಗವನ್ನು ಮರು ರಚನೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಜೈಹಿಂದ್ ಭವನ ನಿರ್ಮಾಣ ಮಾಡುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 20 ಲಕ್ಷ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು. ಇದಕ್ಕಾಗಿ 1500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು.
ಅನುದಾನರಹಿತ ಮದ್ರಸಾಗಳನ್ನು ಅನುದಾನಿತಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ ಅವರು, ಟೀ ಗಾರ್ಡನ್ ಪ್ರದೇಶದಲ್ಲಿ 100 ಹೊಸ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು, ಪರಿಶಿಷ್ಟ ಸಮುದಾಯ ಹೆಚ್ಚಿರುವ ಕಡೆಗಳಲ್ಲಿ 100 ಹೊಸ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು 300 ಪ್ಯಾರಾ ಶಿಕ್ಷಕರನ್ನು ನೇಮಕ ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮೋದಿ ಸರ್ಕಾರದಿಂದ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ‘ಭವ್ಯ’ ಅವಮಾನ! -ಬೃಂದಾ ಕಾರಟ್


