Homeಮುಖಪುಟಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಗುದ್ದಲಿ ಕೈಗೆತ್ತಿಕೊಂಡ ರಾಕೇಶ್ ಟಿಕಾಯತ್ ಹೂವಿನ ಗಿಡಗಳನ್ನು ನೆಡುವ ಮೂಲಕ ನಾವು ಕೃಷಿಕರು ನಮಗೆ ಅನ್ನ ಮತ್ತು ಪ್ರೀತಿ ಬೆಳೆಯುವುದಷ್ಟೇ ಗೊತ್ತು ಎಂಬ ಸಂದೇಶ ಸಾರಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ರಸ್ತೆಗಳಿಗೆ ಮುಳ್ಳಿನ ಸರಳುಗಳನ್ನು ನೆಡುವುದು, ಕಾಂಕ್ರೀಟ್ ಗೋಡೆಗಳನ್ನು ಕಟ್ಟುವುದು, ಮುಳ್ಳು ತಂತಿ ಬೇಲಿ ಮತ್ತು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸರ್ಕಾರದ ಈ ದಮನ ಕ್ರಮಕ್ಕೆ ಪ್ರಪಂಚಾದ್ಯಂತ ಟೀಕೆ ವ್ಯಕ್ತವಾಗಿತ್ತು. ಗಾಜಿಪುರ್ ಗಡಿಯಲ್ಲಿ ಮುಳ್ಳುಬೇಲಿ ಹಾಕಿದ್ದ ಜಾಗದಲ್ಲಿಯೇ ರೈತನಾಯಕ ರಾಕೇಶ್ ಟಿಕಾಯತ್ ಹೂವಿನ ಗಿಡವೊಂದನ್ನು ನೆಡುವ ಮೂಲಕ ಗಮನ ಸೆಳೆದಿದ್ದಾರೆ.

ಸುಕ್ರವಾರ ಸಂಜೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ಸುರಿಸಿ, ಗುದ್ದಲಿ ಕೈಗೆತ್ತಿಕೊಂಡ ರಾಕೇಶ್ ಟಿಕಾಯತ್ ಹೂವಿನ ಗಿಡಗಳನ್ನು ನೆಡುವ ಮೂಲಕ ನಾವು ಕೃಷಿಕರು ನಮಗೆ ಅನ್ನ ಮತ್ತು ಪ್ರೀತಿ ಬೆಳೆಯುವುದಷ್ಟೇ ಗೊತ್ತು ಎಂಬ ಸಂದೇಶ ಸಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು ಇದು ರೈತರ ಸಂಸ್ಕೃತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೆಯಾಗುತ್ತಿದೆ.

ಸರ್ಕಾರದ ಇಂಟೆರ್ನೆಟ್ ಕಡಿತ, ಮುಳ್ಳು ಸರಳುಗಳ ನೆಡುವಿಕೆಗೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗಿದೆ. ಪಾಪ್ ತಾರೆ ರಿಹಾನ್ನ, ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್, ಬಾಲಿವುಡ್ ನಟಿಯರಾದ ತಾಪ್ಸಿ ಪನ್ನು, ಸ್ವರ ಭಾಸ್ಕರ್, ಫರಾನ್ ಅಲಿ ಖಾನ್ ಮೊದಲಾದವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಈ ಕ್ರಮವನ್ನು ಕಟುಶಬ್ದಗಳಲ್ಲಿ ಖಂಡಿಸಿವೆ. ಆದರೆ ಜನವರಿ 26 ರ ತರಹದ ಮತ್ತೊಂದು ಹಿಂಸಾಚಾರವನ್ನು ತಡೆಗಟ್ಟಲು ಇದು ಅಗತ್ಯ ಎಂದು ಕೇಂದ್ರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.

ಫೆಬ್ರವರಿ 02 ರಂದು ಸಹ ದೆಹಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದ ಜಾಗದಲ್ಲಿಯೇ ರಾಕೇಶ್ ಟಿಕಾಯತ್ ಕುಳಿತು ಊಟ ಮಾಡುವ ಮೂಲಕ ತಮ್ಮ ಪ್ರತಿರೋಧ ತೋರಿದ್ದರು.

 


ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...