Homeಮುಖಪುಟ2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ

- Advertisement -
- Advertisement -

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ.

2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ.

ವಿಮೆ ಕಂಪೆನಿಗಳು ಬೆಳೆ ವಿಮೆ ಹಕ್ಕುಗಳನ್ನು ರೈತರಿಗೆ ನಿರಾಕರಿಸಿವೆಯೇ?

ಆ ನಿರ್ದಿಷ್ಟ ವರ್ಷಗಳಲ್ಲಿ ವಿವಿಧ ರಾಜ್ಯಗಳಿಂದ ವರದಿಯಾದ ಪ್ರಕರಣಗಳ ವಿವರಗಳು ಮತ್ತು ಈ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಮನಸ್ ರಂಜನ್ ಭುನಿಯಾ ಪ್ರಶ್ನೆ ಎತ್ತಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಕೃಷಿ ಸಚಿವ ತೋಮರ್ ಅವರು, ಪಿಎಂಎಫ್‌ಬಿವೈ ಅಡಿಯಲ್ಲಿ, ಬರ ಅಥವಾ ಪ್ರವಾಹದಂತಹ ವ್ಯಾಪಕವಾದ ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಬೆಳೆ ನಷ್ಟದ ಹಕ್ಕುಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಗಮನಸೆಳೆದರು, ಏಕೆಂದರೆ ಇಡೀ ಘಟಕದ ಇಳುವರಿಯಲ್ಲಿನ ಕೊರತೆಯ ಆಧಾರದ ಮೇಲೆ ಹಕ್ಕುಗಳನ್ನು ಲೆಕ್ಕ ಹಾಕಲಾಗುತ್ತದೆ. ಋತುವಿನ (ಹಂಗಾಮಿನ) ಕೊನೆಯಲ್ಲಿ, ಮಾಡಲಾಗದ ಬಿತ್ತನೆ ಮತ್ತು ಮಧ್ಯಕಾಲೀನ ಪ್ರತಿಕೂಲ ಹಕ್ಕುಗಳನ್ನು ಪ್ರದೇಶದ ವಿಧಾನದ ಆಧಾರದ ಮೇಲೆ ಇತ್ಯರ್ಥಪಡಿಸಲಾಗಿದೆ. ಇದನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಒದಗಿಸಿದ ಇಳುವರಿ ಡೇಟಾ ಮತ್ತು ಬೆಳೆ ಹಾನಿ ವರದಿಗಳನ್ನು ಪರಿಗಣಿಸಿ ನಿರ್ಣಯಿಸಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಹೇಗಾದರೂ, ಆಲಿಕಲ್ಲು ಮಳೆ, ಭೂಕುಸಿತಗಳು, ಪ್ರವಾಹ, ಮೋಡದ ಸಿಡಿತ ಅಥವಾ ನೈಸರ್ಗಿಕ ಬೆಂಕಿಯ ಸ್ಥಳೀಯ ಅಪಾಯಗಳಿಂದಾಗಿ ಸಣ್ಣ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಅಪಾಯಗಳು ಬಂದಾಗ ವಿಭಿನ್ನ ಪ್ರಕ್ರಿಯೆ ಅನುಸರಿಸಲಾಗಿದೆ. ಅಂತಹ ನಷ್ಟಗಳನ್ನು ವೈಯಕ್ತಿಕ ವಿಮೆ ಮಾಡಿದ ಜಮೀನು ಪರಿಗಣಿಸಿ, ಬೆಳೆ ನಷ್ಟದ ಮೌಲ್ಯಮಾಪನದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ. ರೈತರು ಅಂತಹ ಬೆಳೆ ನಷ್ಟವನ್ನು ಸಂಬಂಧಪಟ್ಟ ವಿಮಾ ಕಂಪನಿ, ರಾಜ್ಯ ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳಿಗೆ ತಿಳಿಸಿದ್ದಾರೆ ಮತ್ತು ಅವರ ಹಕ್ಕುಗಳನ್ನು (ಕ್ಲೈಮ್) ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳ ಜಂಟಿ ಸಮಿತಿಯು ನಿರ್ಣಯಿಸಿದೆ ಎಂದು ವಿವರಿಸಿದ್ದಾರೆ.

“ಆದ್ದರಿಂದ, ಈ ಕೆಲವು ಹಕ್ಕುಗಳನ್ನು ರೈತರು ತಡವಾಗಿ ತಿಳಿಸುವುದು, ವಿಮೆ ಮಾಡದ ರೈತರಿಗೆ ಅಥವಾ ವಿಮೆ ಮಾಡದ ಬೆಳೆಗಳಿಗೆ ಮತ್ತು ಅಪಾಯ ಸಂಭವಿಸದಿರುವುದು ಮುಂತಾದ ವಿವಿಧ ಕಾರಣಗಳಿಗಾಗಿ ವಿಮಾ ಕಂಪನಿಗಳು ಹಕ್ಕುಗಳನ್ನು ತಿರಸ್ಕರಿಸಬಹುದು” ಎಂದು ತೋಮರ್ ಹೇಳಿದರು. ನಂತರ ಅವರು ಹಕ್ಕುಗಳ ನಿರಾಕರಣೆಯ ಡೇಟಾವನ್ನು ನೀಡಿದರು, ಇದು ಎರಡು ವರ್ಷಗಳ ಅವಧಿಯಲ್ಲಿ 900% ಹೆಚ್ಚಳವನ್ನು ತೋರಿಸಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...