Homeಮುಖಪುಟಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

- Advertisement -
- Advertisement -

ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕುರಿತು ವ್ಯಂಗ್ಯ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತನಾಗಿದ್ದ ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ ತಮ್ಮ ಒಂದು ತಿಂಗಳ ಬಂಧನದಿಂದ ಭಾನುವಾರ ಬಿಡುಗಡೆಗೊಂಡರು.

ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಬಿಡುಡೆಗೂ ಮೊದಲು ಇಂದೋರ್‌ ಜೈಲಿನ ಅಧಿಕಾರಿಗಳು, ನಾವು ಇನ್ನಷ್ಟೇ ಸುಪ್ರೀಂಕೋರ್ಟ್ ಆದೇಶವನ್ನು ಸ್ವೀಕರಿಸಬೇಕಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ಮಧ್ಯರಾತ್ರಿಯ ನಂತರ ಮುನಾವರ್ ಬಿಡುಗಡೆಗೊಂಡಿದ್ದು‌, “ನನಗೆ ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಇದೆ. ಪ್ರಕರಣವು ನ್ಯಾಯಾಲಯದ ಮುಂದೆ ಇರುವುದರಿಂದ, ಈ ಸಂದರ್ಭದಲ್ಲಿ ಯಾವುದೆ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಶುಕ್ರವಾರದಂದು ಸುಪ್ರೀಂಕೋಟ್, ಮುನಾವರ್‌ ಫಾರೂಕಿಯ ಬಂಧನಕ್ಕೂ ಮುನ್ನ ನಿಯಮಾವಳಿಗಳನ್ನು ಅನುಸರಿಸಲಾಗಿಲ್ಲ ಮತ್ತು ಎಫ್‌ಐಆರ್ ಅಸ್ಪಷ್ಟವಾಗಿದೆ ಎಂದು ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ. ಅಲ್ಲದೆ ಉತ್ತರ ಪ್ರದೇಶ ಪೊಲೀಸರು ಅವರ ವಿರುದ್ಧ ಹೊರಡಿಸಿದ ಪ್ರೊಡಕ್ಷನ್ ವಾರಂಟ್ ಅನ್ನು ಸಹ ತಡೆಹಿಡಿದಿತ್ತು.

ಮುನಾವರ್‌ ಫಾರೂಕಿ ಮತ್ತು ಸಹ ಆರೋಪಿ ನಳಿನ್ ಯಾದವ್ ಅವರು ಮೂರು ಬಾರಿ ಜಾಮೀನು ಅರ್ಜಿ ಹಾಕಿದ್ದರೂ ಸಹ ತಿರಸ್ಕೃತಗೊಂಡಿದ್ದವು. ಜನವರಿ 28 ರಂದು ಜಾಮೀನು ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್‌ನ ಇಂದೋರ್ ನ್ಯಾಯಪೀಠ ಗುರುವಾರ ತಿರಸ್ಕರಿಸಿತ್ತು.

ಇದನ್ನೂ ಓದಿ: ಹಿಂದೂ ಭಾವನೆಗೆ ಧಕ್ಕೆ ಆರೋಪ: ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ ಜಾಮೀನು ತಿರಸ್ಕೃತ

ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳನ್ನು ಹಾಗೂ ಒಕ್ಕೂಟದ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಪೊಲೀಸರು ಜನವರಿ 2 ರಂದು ಬಂಧಿಸಿದ್ದರು. ಬಂಧನದ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರು ಥಳಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ ಭಾರಿ ಆಕ್ರೋಶ ಉಂಟು ಮಾಡಿತ್ತು.

ಮುನಾವರ್‌ ಫಾರೂಕಿ ಸ್ಥಳೀಯ ರೆಸ್ಟೋರೆಂಟ್‌ವೊಂದರಲ್ಲಿ ತಮ್ಮ ಪ್ರದರ್ಶನವನ್ನು ಪ್ರಾರಂಭಿಸುವ ಮುನ್ನ ಇಂದೋರ್‌ನ ಬಿಜೆಪಿ ಶಾಸಕ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ, ಹಿಂದೂ ರಕ್ಷಕ ಸಂಘಟನ್ ಮುಖ್ಯಸ್ಥ ಏಕಲವ್ಯ ಸಿಂಗ್ ಗೌಡ್ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...