ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ಅಹಿತಕರ ಘಟನೆ ನಡೆಯಲು ಕಾರಣಕರ್ತ ಎಂದು ಆರೋಪಿಸಲಾಗಿರುವ ನಟ ದೀಪ್ ಸಿಧುವನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೀಪ್ ಸಿಧು ಕೆಂಪು ಕೋಟೆಯಲ್ಲಿ ಅಹಿತಕರ ಘಟನೆಯ ನಂತರ ನಾಪತ್ತೆಯಾದ್ದನು. ಆರೋಪಿಯ ಪತ್ತೆಗಾಗಿ ದೆಹಲಿ ಪೊಲೀಸರು ಬಲೆ ಬೀಸಿದ್ದರು. ನಟ ದೀಪ್ ಸಿಧು ಸೇರಿದಂತೆ ಇತರ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡಿದವರಿಗೆ 1 ಲಕ್ಷ ರೂ. ನಗದು ಬಹುಮಾನ ನೀಡುತ್ತೇವೆ ಎಂದು ಪೊಲೀಸರು ಹೇಳಿದ್ದರು.
ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?
ಇದೀಗ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
Delhi Police have arrested Deep Sidhu, an accused in 26th January violence case.
(Picture taken after arrest; source: Delhi Police) pic.twitter.com/RBLYbrGfik
— ANI (@ANI) February 9, 2021
ಜನವರಿ 26 ರಂದು ನಡೆದ ಅಹಿತಕರ ಘಟನೆಯ ಬಗ್ಗೆ ದೆಹಲಿಯ ಗಡಿಗಳಲ್ಲಿ ಹೋರಾಟ ನಿರತ ರೈತ ಮುಖಂಡರು ಅಂತರ ಕಾಯ್ದುಕೊಂಡಿದ್ದರು. “ಅಹಿತಕರ ಘಟನೆಗೆ ಮತ್ತು ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿರುವುದಕ್ಕೆ ಪಂಜಾಬಿ ನಟ ದೀಪ್ ಸಿಧುವಿನ ಪ್ರಚೋದನೆಯೇ ಕಾರಣ. ದೀಪ್ ಸಿಧು ಸರ್ಕಾರದ ಪರವಾಗಿರುವ ವ್ಯಕ್ತಿ. ಕೆಂಪುಕೋಟೆಯವರೆಗೆ ಹೋಗಲು ಪೊಲೀಸರು ಬಿಟ್ಟಿದ್ದೇಕೆ? ಇದು ರೈತ ಹೋರಾಟವನ್ನು ಒಡೆಯಲು ಸರ್ಕಾರ ಮಾಡಿರುವ ಸಂಚಿನ ಭಾಗ” ಎಂದು ರೈತ ಆರೋಪಿಸಿದ್ದರು.
ಘಟನೆಗೆ ಕಾರಣರಾದವರ ವಿರುದ್ಧ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಾದ ಮಾಹಿತಿ ತಿಳಿಯುತ್ತಿದ್ದಂತೆಯೇ, ನಟ ದೀಪ್ ಸಿಧು ತಲೆಮರೆಸಿಕೊಂಡಿದ್ದನು. ಇದರ ನಂತರ ಆತ ಬಿಜೆಪಿ ಜೊತೆಗೆ ಒಡನಾಟ ಇಟ್ಟುಕೊಂಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ಬಹಿರಂಗ ಪಡಿಸಿದ್ದರು. ಆರೋಪಿಯು ಪ್ರಧಾನಿ ಮೋದಿ ಮತ್ತು ಅಮಿತ್‍ಶಾ ಅವರೊಂದಿಗೆ ಇರುವ ಫೋಟೋಗಳು ವೈರಲ್ ಆಗಿದ್ದವು.
ಇದನ್ನೂ ಓದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು


