Homeಕರ್ನಾಟಕಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಕೂಡಲೇ ಫೆಲೋಶಿಪ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರವು ಹಿಂದುಳಿದ ಜಾತಿಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌‌ ಅನ್ನು ಕಳೆದ 13 ತಿಂಗಳಿನಿಂದ ನೀಡದೆ ಇರುವುದನ್ನು ವಿರೋಧಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಸೋಮವಾರ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಾದ್ಯಂತ ಸುಮಾರು ಹನ್ನೊಂದು ವಿಶ್ವವಿದ್ಯಾಲಯಗಳು ಸೇರಿದಂತೆ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ಏಳುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಲೊಶಿಪ್‌ನಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.‌

ಪ್ರತಿಭಟನೆಯ ಕುರಿತು ಮಾತನಾಡಿದ ಸಂಶೋಧನಾ ವಿದ್ಯಾರ್ಥಿಯೊಬ್ಬರು, “ಈ ಹಿಂದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮಾಸಿಕ 5 ಸಾವಿರ ರೂ. ವಿದ್ಯಾರ್ಥಿವೇತನವನ್ನು ನೀಡುತ್ತಿತ್ತು. 2018 ರಲ್ಲಿ ಈ ಮೊತ್ತವನ್ನು ದ್ವಿಗುಣಗೊಳಿಸಲಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳು ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪಡೆಯಬೇಕಾಗಿತ್ತು. ಆದರೆ ಡಿಸೆಂಬರ್ 2019 ರಿಂದ ಯಾವುದೇ ಫೆಲೋಶಿಪ್ ಸಿಕ್ಕಿಲ್ಲ’’ ಎಂದು ಹೇಳಿದ್ದಾರೆ.

“ಫೆಲೋಶಿಪ್ ಸಿಗದೆ ಇರುವುದರಿಂದ ನಮ್ಮ ಅಧ್ಯಯನಕ್ಕೆ ಭಾರಿ ಹೊಡೆತ ಬೀಳುತ್ತಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌‌ಗಳ ಬಿಲ್ ಕಟ್ಟಲು ಕಷ್ಟಪಡುತ್ತಿದ್ದಾರೆ. ದೈನಂದಿನ ಜೀವನವ ಕೂಡಾ ಕಷ್ಟಕರವಾಗಿದೆ. ಫೆಲೋಶಿಪ್ ಸಿಗುತ್ತಿಲ್ಲವಾದ್ದರಿಂದ ಕೆಲವು ವಿದ್ಯಾರ್ಥಿಗಳು ತಮ್ಮ ಸಂಶೋಧನೆಯನ್ನು ನಿಲ್ಲಿಸುವ ಹಂತದಲ್ಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ವಿದ್ಯಾರ್ಥಿಗಳು ತಮ್ಮ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಆಯುಕ್ತರಿಗೆ ಈ ಹಿಂದೆಯೆ ಪತ್ರಗಳನ್ನು ಬರೆದಿದ್ದರು. ತಮ್ಮ ಫೆಲೋಶಿಪ್ ಹಣವನ್ನು ಬಿಡುಗಡೆಗೊಳಿಸುವಂತೆ ಇನ್ನೂರಕ್ಕೂ ಹೆಚ್ಚು ಮನವಿಗಳನ್ನು ಅಂಚೆ ಮೂಲಕ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ಆದರೆ ನಮ್ಮ ಪತ್ರಕ್ಕೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ. ಸಚಿವ ಕೋಟಾ ಶ್ರೀನಿವಾಸ ಪೂಜರಿಯ ಪಿಎ, ’ಸಚಿವರು ವಿಧಾನಸಭೆಯ ಊಟದ ವಿರಾಮದ ಸಮಯದಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ’ ಎಂದು ತಿಳಿಸಿದ್ದರು. ಆದರೆ ಈಗ ಪಿಎ ಫೋನ್ ಈಗ ಸ್ವಿಚ್ ಆಗಿದ್ದು, ಅವರು ಇನ್ನು ಬರುವುದಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ನಾನುಗೌರಿಗೆ ಸೋಮವಾರ ಹೇಳಿದ್ದಾರೆ.

ಸಂಶೋಧನಾ ನಿರತ ವಿದ್ಯಾರ್ಥಿಗಳ ನಿಯೋಗವೊಂದು ಹಿಂದುಳಿದ ವರ್ಗಗಳ ಆಯೋಗದ ಆಯುಕ್ತ ವಸಂತ್ ಕುಮಾರ್ ಅವರೊಂದಿಗೆ ಮಾತನಾಡಿದ್ದು, ಆಯುಕ್ತರು ಫೆಲೋಶಿಪ್‌ ಪಾವತಿಸಲು ಹಣವಿಲ್ಲ. ಸರ್ಕಾರವು ಹಣವನ್ನು ಬಿಡುಗಡೆ ಮಾಡಿದರೆ ಎಲ್ಲಾ ಬಾಕಿಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಕೆ ಟಾಕೀಸ್ 02: ಅರ್ಥಕ್ಕಿಂತಲೂ ಅನುಭವಕ್ಕೆ ಸಿಕ್ಕುವ – ಮಾನವೀಯತೆಯನ್ನು ಕಲಕುವ ಥಿಯೋಡೊರಸ್ ಸಿನಿಮಾಗಳು

‘‘ನಮಗೆ ಕೇವಲ ಆರು ತಿಂಗಳ ಬಾಕಿ ಪಾವತಿಸಬಹುದೆಂದು ಆಯುಕ್ತರು ಹೇಳಿದ್ದು, ಉಳಿದ ಹಣವನ್ನು ನೀಡುವ ಬಗ್ಗೆ ತಿಳಿಸಿಲ್ಲ. ಅಲ್ಲದೆ ಆರು ತಿಂಗಳ ಹಣವನ್ನು ಕೂಡಾ ಯಾವಾಗ ಪಾವತಿಸುತ್ತೇವೆ ಎಂದು ಹೇಳಿಲ್ಲ. ನಾವು ಅವರಿಗೆ ಫೆಬ್ರವರಿ 25, 2021 ರವರೆಗೆ ಕಾಲಾವಕಾಶ ನೀಡಿದ್ದೇವೆ. ಈ ಗಡುವಿನ ನಂತರ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ನಾನುಗೌರಿ.ಕಾಂಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಫೆಲೋಶಿಪ್ ಬಿಡುಗಡೆ ಮಾಡಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಆಗ್ರಹ

ಮಾಜಿ ಮುಖ್ಯಮಂತ್ರಿಗಳಾದ ದಿವಗಂತ ದೇವರಾಜು ಅರಸುರವರ ಸ್ಮರಣಾರ್ಥ “ವಿದ್ಯಾಸಿರಿ”ಯೋಜನೆಯಲ್ಲಿ ಪಿ.ಹೆಚ್‌.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌ ಅನ್ನು 14 ತಿಂಗಳುಗಳಿಂದ ನೀಡದೆ ಹಿ೦ದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅನ್ಯಾಯ ಮಾಡಿದಂತಾಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್‌‌ ಖರ್ಗೆ, ಫೆಲೋಶಿಪ್ ವಂಚಿತ ವಿದ್ಯಾರ್ಥಿಗಳು ಬಡ ಮತ್ತು ರೈತಾಪಿ ಕುಟುಂಬದಿಂದ ಬಂದು ಪಿ.ಹೆಚ್‌.ಡಿ ವ್ಯಾಸಂಗ ಮಾಡುತಿದ್ದಾರೆ. ಅಲ್ಲದೆ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕುಟುಂಬದ ಆದಾಯವು ಕ್ಷೀಣಗೊಂಡಿರುತ್ತದೆ. ಹಲವಾರು ವಿದ್ಯಾರ್ಥಿಗಳು
ಪಿ.ಹೆಚ್‌.ಡಿ ವ್ಯಾಸಂಗವನ್ನು ಕೈ ಬಿಡುವ ನಿರ್ಧಾರ ಬಂದಿರುವುದು ಗಮನಕ್ಕೆ ಬಂದಿರುತ್ತದೆ. ಆದ್ದರಿ೦ದ ಸರ್ಕಾರವು ಪಿ.ಹೆಚ್‌.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಅರಿತು ತಕ್ಷಣವೇ ಬಾಕಿ ಇರುವ ಫೆಲೋಶಿಪ್‌ ಅನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...