Homeಮುಖಪುಟಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಸರ್ಕಾರವು ಇತ್ತೀಚೆಗಷ್ಟೆ ಸಚಿವ ಸಂಪುಟ ವಿಸ್ತರಣೆ ನಡೆಸಿದ್ದು ಸರ್ಕಾರವು ಒಟ್ಟು 31 ಮಂತ್ರಿಗಳನ್ನು ಹೊಂದಿದೆ. ಇವರಲ್ಲಿ 18 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಎಲೆಕ್ಷನ್ ವಾಚ್ ವರದಿಯಲ್ಲಿ 28 ಸಚಿವರು ನೀಡಿರುವ ಅಫಿಡವಿಟ್‌ಗಳ ಆಧಾರದ ಮೇಲೆ ತಿಳಿಸಲಾಗಿದೆ. ಈ ಸಚಿವರಲ್ಲಿ 14 ಮಂದಿ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅದು ತಿಳಿಸಿದೆ.

ಉಳಿದ ಮೂವರು ಸಚಿವರಲ್ಲಿ ಅಶೋಕ್ ಚೌಧರಿ ಮತ್ತು ಜನಕ್ ರಾಮ್ ಎಂಬ ಇಬ್ಬರು ಸಚಿವರು ಈವರೆಗೆ ರಾಜ್ಯ ವಿಧಾನಸಭೆಯ ಸದಸ್ಯರಾಗಿಲ್ಲದ್ದರಿಂದ, ಅವರ ವಿವರಗಳು ಲಭ್ಯವಿಲ್ಲ. ಮತ್ತೊಬ್ಬ ಬಿಜೆಪಿಯ ಸಚಿವ ರಾಮ್ ಸೂರತ್ ಕುಮಾರ್ ಅವರು ನೀಡಿರುವ ಅಫಿಡವಿಟ್ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪೂರ್ಣವಾಗಿದ್ದರಿಂದ ಅದನ್ನು ವಿಶ್ಲೇಷಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಸರ್ಕಾರದ ಮೈತ್ರಿಕೂಟವಾದ ಬಿಜೆಪಿಯ 16 ಮಂತ್ರಿಗಳಲ್ಲಿ 11 ಮಂದಿ, ಜೆಡಿಯು ಪಕ್ಷದ 4 ಮಂತ್ರಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇತರ ಮೂವರು ಹಿಂದೂಸ್ತಾನಿ ಅವಮ್ ಮೋರ್ಚಾ (ಜಾತ್ಯತೀತ), ವಿಕಾಸ್ಶೀಲ್ ಇನ್ಸಾನ್ ಪಾರ್ಟಿ ಮತ್ತು ಪಕ್ಷೇತರ ಸಚಿವರ ವಿರುದ್ಧ ಕೂಡಾ ಗಂಭೀರ ಅಪರಾಧ ಪ್ರಕರಣಗಳು ಬಾಕಿ ಉಳಿದಿವೆ.

ಎಡಿಆರ್ ಮತ್ತು ಎಲೆಕ್ಷನ್ ವಾಚ್‌ನ ಹಿಂದಿನ ವಿಶ್ಲೇಷಣೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾದ 241 ವಿಧಾನಸಭಾ ಸದಸ್ಯರಲ್ಲಿ 163 (68%) ಕೊಲೆ ಯತ್ನದಂತಹ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂಂದು ಹೇಳಿದೆ. 2015 ರಲ್ಲಿ ಆಯ್ಕೆಯಾದ 243 ಸದಸ್ಯರಲ್ಲಿ 142 (58%) ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿ ಹೇಳಿತ್ತು.

28 ಮಂತ್ರಿಗಳಲ್ಲಿ ಇಪ್ಪತ್ತಾರು ಜನರು (93%) ಸರಾಸರಿ ಆಸ್ತಿ 4.46 ಕೋಟಿ ರೂ. ಎಂದು ಅದು ಹೇಳಿದೆ. ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ ಅವರು ರೂ .22.37 ಕೋಟಿ ಆಸ್ತಿಯನ್ನು ಹೊಂದಿದ್ದಾರೆ. ಜೆಡಿಯುನ ಜಮಾ ಖಾನ್ 30.04 ಲಕ್ಷ ಆಸ್ತಿಯನ್ನು ಹೊಂದಿರುವ ಅತಿ ಕಡಿಮೆ ಆಸ್ತಿಯಿರುವ ಸಚಿವರಾಗಿದ್ದಾರೆ. 16 ಮಂದಿ ಪದವೀಧರರು ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಉಳ್ಳವರಾಗಿದ್ದು, ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...