Homeಮುಖಪುಟಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

- Advertisement -
- Advertisement -

ರಾಜ್ಯ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ಸಿಟ್ಟಿಗೆದ್ದುರುವ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ರೈತರು ಗಂಡು ಕರುಗಳನ್ನು ಪೊಲೀಸ್ ಠಾಣೆ ಮುಂದೆ ಕರೆ ತಂದು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಗೋಹತ್ಯೆ ತಡೆ ಕಾಯ್ದೆಯನ್ನು ಜಾರಿ ಮಾಡಿದೆ. ಇದರಿಂದ ಗಂಡು ಕರುಗಳು, ಗೊಡ್ಡು ಹಸುಗಳು ಸೇರಿದಂತೆ ಅನುಪಯುಕ್ತ ರಾಸುಗಳನ್ನು ಮಾರದಂತೆ ನಿಷೇಧ ಹೇರಿದೆ. ಅವುಗಳನ್ನು ಸಾಕಿ ಸಲಹಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರೈತರು ದೂರಿದ್ದಾರೆ.

ಸರ್ಕಾರವು ಹೋಬಳಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಗೋಶಾಲೆಗಳನ್ನು ತೆರೆಯಬೇಕು. ಅನುಪಯುಕ್ತ ರಾಸುಗಳು ಹಾಗೂ ಸೀಮೆ ಹಸುವಿನ ಗಂಡು ಕರುಗಳ ಸಾಕಾಣಿಕೆ ಮಾಡಬೇಕು. ಹಾಗೆ ಮಾಡದೇ ಸುಮ್ಮನೆ ಗೋಹತ್ಯೆ ತಡೆ ಕಾಯ್ದೆ ತಂದರೆ ನಾವೇನು ಮಾಡಬೇಕು ಎಂದು ರೈತರು ಕಿಡಿಕಾರಿದ್ದಾರೆ.

ಈಗಾಗಲೇ ರೈತರು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೇ ನಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರ ತಂದಿರುವ ಈ ಕಾಯ್ದೆ ರೈತರ ಪಾಲಿಗೆ ಮರಣಶಾಸನವಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಕಾಯ್ದೆ ವಾಪಸ್ ಪಡೆಯಬೇಕು ಇಲ್ಲ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪೋಲಿಸರಿಗೆ ಮಾಹಿತಿ ನೀಡದೇ ಧಿಡೀರನೆ ಪೋಲಿಸ್ ಠಾಣೆಗೆ ರೈತರು ಮುತ್ತಿಗೆ ಹಾಕಿದ್ದರಿಂದ ಪೊಲೀಸರು ಮತ್ತು ರೈತ ಮುಖಂಡರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

ಇದೇ ಮಾದರಿಯ ಪ್ರತಿಭಟನೆಗಳು ರಾಜ್ಯದೆಲ್ಲೆಡೆ ವರದಿಯಾಗುತ್ತಿವೆ. ರಾಜ್ಯ ಸರ್ಕಾರದ ಈ ಕಾಯ್ದೆಯಿಂದ ಲಕ್ಷಾಂತರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊದಲು ಉಪಯೋಗಕ್ಕೆ ಬಾರದ ಗಂಡುಕರುಗಳು, ಊನ ದನಗಳನ್ನು ಸಂತೆಗಳಲ್ಲಿ ಮಾರಿ ಆ ಹಣದಿಂದ ಹೊಸ ದನಗಳನ್ನು ತರುತ್ತಿದ್ದರು. ಈಗಿನ ಕಾಯ್ದೆ ಮಾರುವುದನ್ನೇ ನಿಷೇಧಿಸಿದೆ ಎಂದು ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ವಿವಾದಿತ ಗೋಹತ್ಯೆ ನಿಷೇಧ ಕಾನೂನು ಜನವರಿ 18 ರಿಂದ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...