Homeಕರ್ನಾಟಕಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ- ಕುಮಾರಸ್ವಾಮಿ

- Advertisement -
- Advertisement -

“ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ. ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್‌ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

“ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್‌ನವರಾಗಿದ್ದರು. ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

“ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ. ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಜೆಡಿಎಸ್‌ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್‌ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...