Homeಕರ್ನಾಟಕಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ.

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ. ನಗರ ಭೂಸಾರಿಗೆ ನಿರ್ದೇಶನಾಲಯ ಮತ್ತು ಬಿಬಿಎಂಪಿ ಜಂಟಿಯಾಗಿ ಇದನ್ನು ಅನುಷ್ಠಾನಗೊಳಿಸುವ ಹೊಣೆ ಹೊತ್ತಿವೆ.

ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಾಹನ ಕೊಳ್ಳುವಾಗಲೇ ತೆರಿಗೆ ಕಟ್ಟಿರುತ್ತೇವೆ ಹಾಗಿದ್ದೂ ಮತ್ತೆ ಮತ್ತೆ ಶುಲ್ಕ ಸಂಗ್ರಹಿಸುವ ಮೂಲಕ ಸರ್ಕಾರ ಹಗಲು ದರೋಡೆಗಿಳಿದಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲು ಹೊರಟಿರುವ ಬಿಬಿಎಂಪಿಯ ಅವೈಜ್ಞಾನಿಕ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರಿಯಾದ ಮೂಲ ಸೌಕರ್ಯಗಳನ್ನೇ ನೀಡದೆ ತರಲು ಹೊರಟಿರುವ ಈ ನಿರ್ಧಾರ ಮೂರ್ಖತನದ್ದು, ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡುತ್ತಿರುವುದು ವಾಸ್ತವ. ಈ ಸಮಸ್ಯೆಗಳಿಗೆ ಬಿಬಿಎಂಪಿಯ ವೈಫಲ್ಯವೇ ಕಾರಣ, ಏಕೆಂದರೆ ರಸ್ತೆ ಬದಿಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುವ ತನಕ ಕಣ್ಣು ಮುಚ್ಚಿಕೊಂಡು ಕೂತ ಕಾರಣ ಇಂದು ಈ ಸಮಸ್ಯೆಯನ್ನು ಎದುರಿಸಬೇಕಿದೆ. ದೊಡ್ಡ ದೊಡ್ಡ ಕಟ್ಟಡಗಳು ತಮ್ಮ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲೇ ಬೇಕು ಎನ್ನುವ ನಿಯಮವಿದೆ. ನೆಲ ಮಾಳಿಗೆಯಲ್ಲೂ ಬಾಡಿಗೆಗೆ ಮಳಿಗೆಗಳನ್ನು ನೀಡಿ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ದ ಬಿಬಿಎಂಪಿ ಇದುವರೆಗೂ ಯಾವ ಕ್ರಮ ತೆಗೆದುಕೊಂಡ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ.

ಶುಲ್ಕ ಪಾವತಿ ಮಾಡಿ ರಸ್ತೆ ಬದಿ ವಾಹನ ನಿಲ್ಲಿಸುವ ನಿಯಮದಿಂದ ರಸ್ತೆಗಳ ಮೇಲಿನ ಒತ್ತಡ ಕಡಿಮೆ ಆಗುತ್ತದೆ ಎನ್ನುವುದು ಸದ್ಯಕ್ಕೆ ದೂರವಾದ ಮಾತು. ಇದು ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡುವ ತಂತ್ರ, ಸಮಸ್ಯೆಯನ್ನು ನಿಜವಾಗಿ ಬಗೆಹರಿಸುವ ಯಾವುದೇ ಆಲೋಚನೆ ಬಿಬಿಎಂಪಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆ ಲಾರಿಗಳು ಸೇರಿದಂತೆ ಇತರೇ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ವಾಹನಗಳಿಂದ ರಸ್ತೆಗಳ ಮೇಲೆ ಹೆಚ್ಚು ಹೊರೆಯಾಗುತ್ತಿದೆ. ಇಂತಹ ವಾಹನಗಳ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ವಾಹನ ನಿಲುಗಡೆಗೆ ಪ್ರತ್ಯೇಕ ಡಿಪೋ ಸ್ಥಾಪನೆ, ಬಿಬಿಎಂಪಿಯಿಂದ ಪಾರ್ಕಿಂಕ್ ಲಾಟ್‌ಗಳನ್ನು ಸ್ಥಾಪಿಸದ ಹೊರತು ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವುದು ಅಸಾಧ್ಯ ಎಂದರು.

ಕಟ್ಟಡ ನಿರ್ಮಾಣ ಮಾಡುವಾಗಲೇ ವಾಹನ ನಿಲುಗಡೆಗೂ ಸೂಕ್ತ ಸ್ಥಳವಾಕಾಶ ಬಿಡದ ಕಟ್ಟಡಗಳಿಗೂ ಅನುಮತಿ ನೀಡಿದ ಬಿಬಿಎಂಪಿ ತನ್ನ ವೈಫಲ್ಯವನ್ನು ಜನರ ಮೇಲೆ ಹಾಕಲು ಹೊರಟಿದೆ. ಈ ಕೂಡಲೇ ತನ್ನ ಅವೈಜ್ಞಾನಿಕ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ಮನೆ ಮನೆಯಲ್ಲಿ ಕಸಕ್ಕೂ ಶುಲ್ಕ ವಿಧಿಸಲು ಹೊರಟಿತ್ತು. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟಿತು. ಈಗ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸಲು ಹೊರಟಿದೆ. ಇದನ್ನು ಸಾರ್ವಜನಿಕರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....