Homeಮುಖಪುಟಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!

ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!

ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ- ಗೊಗೊಯ್

- Advertisement -
- Advertisement -

“ನೀವು ಕುಸಿದಿರುವ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿದ್ದೀರಿ” ಎಂದು ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತದ ಸಿಜೆಐ ಆಗಿ ನಿವೃತ್ತಿಯಾದ 15 ತಿಂಗಳ ಬಳಿಕ ಗೊಗೋಯ್ ನೀಡಿರುವ ಈ ಹೇಳಿಕೆಯು ರಾಷ್ಟ್ರದ ಕಾನೂನು ವ್ಯವಸ್ಥೆಯ ವಾಸ್ತವಾಂಶವನ್ನು ತೆರೆದಿಟ್ಟಿದೆ.

“ನಾನು ಸಮಸ್ಯೆಗಳನ್ನು ಹೇಳಿಕೊಂಡು ನ್ಯಾಯಾಲಯಕ್ಕೆ ಹೋಗುವುದಿಲ್ಲ. ಏಕೆಂದರೆ ತೀರ್ಪಿಗಾಗಿ ಕೊನೆಯಿಲ್ಲದೆ ಕಾಯಬೇಕಾಗುತ್ತದೆ” ಎಂಬುದಾಗಿ ರಂಜನ್ ಗೊಗೊಯ್ ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ಗೊಗೋಯ್ ಅವರ ಹೇಳಿಕೆಯು ನ್ಯಾಯಾಂಗದ ಸಾಮರ್ಥ್ಯ ಹಾಗೂ ಪರಿಣಾಮಕಾರಿತ್ವವನ್ನು ಸೂಕ್ಷ್ಮ ಪರಿಶೀಲಿಸುವಂತೆ ಮಾಡಿದೆ. ತೀರ್ಪುಗಳ ವಿಳಂಬದಲ್ಲಿ ಭಾರತದ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಏಷ್ಯದ ಮೂರನೇ ಅತಿ ದೊಡ್ಡ ಆರ್ಥಿಕತೆಯ ನ್ಯಾಯಾಲಯದ ವ್ಯವಸ್ಥೆಗಳು 43 ದಶಲಕ್ಷಕ್ಕೂ ಅಧಿಕ ಪ್ರಕರಣಗಳಿಂದ ಮುಚ್ಚಿಹೋಗಿವೆ. ನ್ಯಾಯಾಧೀಶರ ಕೊರತೆಯಿಂದ ಕೆಲವು ಪ್ರಕರಣಗಳು ಪರಿಹಾರವನ್ನು ಕಂಡುಕೊಳ್ಳಲು ಹಲವು ವರ್ಷಗಳು, ದಶಕಗಳವರೆಗೆ ಕಾಯಬೇಕಾಗುತ್ತದೆ. ಭಾರತದಲ್ಲಿ ಹೂಡಿಕೆ ಮಾಡುವ ಕಂಪೆನಿಗಳು ಒಮ್ಮೆ ಕಾನೂನು ವಿವಾದದಲ್ಲಿ ಸಿಲುಕಿಕೊಂಡರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ದಿ ಪ್ರಿಂಟ್ ವರದಿಯಲ್ಲಿ ಹೇಳಿದೆ.

2019ರ ನವೆಂಬರ್ ನಲ್ಲಿ ದೇಶದ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಗೊಗೋಯ್ ಸದ್ಯ ಸಂಸತ್ತಿನ ಮೇಲ್ಮನೆಯ ಸದಸ್ಯರಾಗಿದ್ದಾರೆ. ಇದಕ್ಕೂ ಮುನ್ನ ಇವರು ದಶಕಗಳ ಅಯೋಧ್ಯೆ ವಿವಾದಕ್ಕೆ ಅಂತಿಮ ತೀರ್ಪು ನೀಡಿದ್ದರು.


ಇದನ್ನೂ ಓದಿ: ‘ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ’ – ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. After all thesevic throughout life did not bothered to do anything but after retirement and after taking help from the ruling govt and joining to the power speaking about judiciary he had no lockstandi to speak

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...