Homeಮುಖಪುಟರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

- Advertisement -
- Advertisement -

ರೈತ ಪ್ರತಿಭಟನೆ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ‘ಟೂಲ್‌ಕಿಟ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದಿಶಾ ಅವರಿಗೆ ಜಾಗತಿಕ ಬೆಂಬಲ ವ್ಯಕ್ತವಾಗುತ್ತಿದೆ.

ಕಮಲಾ ಹ್ಯಾರಿಸ್ ಅವರ ಸಂಬಂಧಿ ಮತ್ತು ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ದಿಶಾ ರವಿಗೆ ಬೆಂಬಲ ಸೂಚಿಸಿದ್ದು, “ರೈತರ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರಿಂದ ಭಾರತೀಯ ಅಧಿಕಾರಿಗಳು ಮತ್ತೊಬ್ಬ ಯುವ ಮಹಿಳಾ ಕಾರ್ಯಕರ್ತೆ 21 ವರ್ಷದ ದಿಶಾ ರವಿ ಅವರನ್ನು ಬಂಧಿಸಿದ್ದಾರೆ. ಇಂತಹ ಹೋರಾಟಗಾರರನ್ನು ಸರ್ಕಾರ ಗುರಿಯಾಗಿಸಿಕೊಂಡು ಏಕೆ ಅವರ ಬಾಯಿಮುಚ್ಚಿಸುತ್ತಿದೆ ಎಂದು ಕೇಳಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ದಿಶಾ ರವಿಯವರಿಗೆ ಬಹುಭಾಷಾ ನಟ ಸಿದ್ದಾರ್ಥ್ ಬೆಂಬಲ ಸೂಚಿಸಿದ್ದು, “ದಿಶಾ ರವಿಯವರೊಂದಿಗೆ ಬೇಷರತ್ ನಿಲ್ಲುತ್ತೇವೆ. ನಿನಗೆ ಹೀಗಾಗಿರುವುದಕ್ಕೆ ನಮ್ಮನ್ನು ಕ್ಷಮಿಸು ಸಹೋದರಿ. ನಾವೆಲ್ಲರೂ ನಿನ್ನೊಂದಿಗೆ ಇದ್ದೇವೆ. ದೃಢವಾಗಿರು. ಈ ಅನ್ಯಾಯವೂ ಕಳೆದಹೋಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯಾಟವನ್ನೂ ಸೆರೆಹಿಡಿಯಿರಿ’-ಮೋದಿಗೆ ನೆಟ್ಟಿಗರ ತರಾಟೆ

ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, “ಇದು ದೌರ್ಜನ್ಯದ ಪರಮಾವಧಿ. ಇದು ಕಾನೂನುಬಾಹಿರ ಕಿರುಕುಳ ಮತ್ತು ಬೆದರಿಕೆಯಾಗಿದೆ. ದಿಶಾ ರವಿಯವರಿಗೆ ನನ್ನ ಸಂಪೂರ್ಣ ಬೆಂಬಲವಿದೆ” ಎಂದು ಬರೆದುಕೊಂಡಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಟ್ವೀಟ್ ಮಾಡಿ, “21 ವರ್ಷದ ದಿಶಾ ರವಿ ದೇಶಕ್ಕೆ ತೊಂದರೆಯುಂಟು ಮಾಡುತ್ತಾರೆ ಎನ್ನುವುದಾದರೆ, ದೇಶದ ಬುಡ ಗಟ್ಟಿಯಿಲ್ಲ ಎನಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

ಸಿಪಿಐ ನ ಮುಖಂಡರಾದ ಸೀತಾರಾಂ ಯೆಚೋರಿ ಟ್ವೀಟ್ ಮಾಡಿ, “ರೈತರ ಮೊಮ್ಮಗಳನ್ನು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದರೆ ಅದು ರೈತರ ಹೋರಾಟವನ್ನು ದುರ್ಬಲಗೊಳಿಸುತ್ತದೆ ಎಂದು ಮೋದಿ ಸರ್ಕಾರ ಎಣಿಸುತ್ತಿದೆ. ವಾಸ್ತವವಾಗಿ, ಇದು ದೇಶದ ಯುವಕರನ್ನು ಜಾಗೃತಗೊಳಿಸುತ್ತದೆ ಮತ್ತು ಪ್ರಜಾಪ್ರಭುತ್ವದ ಹೋರಾಟಗಳನ್ನು ಬಲಪಡಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, “ದಿಶಾ ರವಿಯ ಬಂಧನ ಪ್ರಜಾಪ್ರಭುತ್ವದ ಮೇಲಿನ ಅಸಾಂವಿಧಾನಿಕ ದಾಳಿಯಾಗಿದೆ. ರೈತರನ್ನು ಬೆಂಬಲಿಸುವುದು ಅಪರಾಧವಲ್ಲ” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಪರಿಸರ ಹೋರಾಟಗಾರ್ತಿ ದಿಶಾ ರವಿಯ ಬಂಧನ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವದಲ್ಲಿ ಬಿಟ್ಟಿರುವ ಬಿರುಕನ್ನು ತೋರಿಸುತ್ತಿದೆ. ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಹೇಗೆ ಬರುತ್ತದೆ. ದೆಹಲಿ ಪೊಲೀಸರ ರಾಜಕೀಯ ಪ್ರೇರಿತವಾದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ನೂರಾರು ಜನರು ದಿಶಾ ರವಿಯವರಿಗೆ ಬೆಂಬಲ ಸೂಚಿಸಿದ್ದಾರೆ. ರೈತ ಹೋರಾಟವನ್ನು ದುರ್ಬಲಗೊಳಿಸುವ ಸಲುವಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ಕೆಲಸಗಳನ್ನು ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ದಿಶಾ ರವಿ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.


ಇದನ್ನೂ ಓದಿ: ಜಮ್ಮುಕಾಶ್ಮೀರದಲ್ಲಿ ಮತ್ತೊಮ್ಮೆ ಗೃಹ ಬಂಧನ: ಮಾಜಿ ಮುಖ್ಯಮಂತ್ರಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...