Homeಮುಖಪುಟದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

- Advertisement -
- Advertisement -

ಶನಿವಾರ (ಫೆಬ್ರವರಿ 13) ದೇಶದ್ರೋಹ ಆರೋಪದ ಮೇಲೆ ಬಂಧನವಾಗಿರುವ ಬೆಂಗಳೂರು ಮೂಲದ ಪರಿಸರ ಹೋರಾಟಗಾರ್ತಿ ದಿಶಾ ರವಿಯವರ ಮೇಲೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದರು ಮತ್ತು ಬಂಧನಕ್ಕೆ ಸಂಪೂರ್ಣ ಸಿದ್ಧರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಆಕೆಯನ್ನು ವಿಮಾನ ಹತ್ತಿಸುವ ತನಕವೂ ಬೆಂಗಳೂರಿನ ಸ್ಥಳಿಯ ಪೊಲೀಸರಿಗಾಗಲೀ, ರಾಜ್ಯ ಸರ್ಕಾರಕ್ಕಾಗಲೀ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂಬುದು ಈ ಬಹು ಚರ್ಚಿತ ವಿಷಯವಾಗಿದೆ. ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ಮತ್ತು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಕ್ರಮ ತೆಗೆದುಕೊಂಡಿರುವ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹಲವರು ಟೀಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ರಾಜ್ಯಸರ್ಕಾರ ಇನ್ನೂ ಈ ವಿಚಾರಕ್ಕೆ ಪ್ರತಿಕ್ರಿಯಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸದಸ್ಯರ ಪೊಲೀಸ್ ತಂಡ ಬೆಂಗಳೂರಿಗೆ ಆಗಮಿಸಿದೆ ಎಂದು ನಗರ ಪೊಲೀಸ್ ಮೂಲಗಳು ತಿಳಿಸಿವೆ. ತಂಡವು ನೇರವಾಗಿ ದಿಶಾ ವಾಸಿಸುತ್ತಿರುವ ಬೆಂಗಳೂರು ಉತ್ತರದ ಅಬ್ಬಿಗರೆ, ಚಿಕ್ಕಬಾಣಾವರ ಪ್ರದೇಶಕ್ಕೆ ತೆರಳಿತು. ಆದರೆ ಅವರು ತಕ್ಷಣ ದಿಶಾ ಮನೆಗೆ ಪ್ರವೇಶಿಸಲಿಲ್ಲ. ಆಕೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡುವ ಮೂಲಕ ದಿಶಾ ಮನೆಯಲ್ಲಿದ್ದಾಳೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

“ಮೊದಲು, ಕಾರಿನಲ್ಲಿದ್ದ ಮೂವರು ಈ ಪ್ರದೇಶಕ್ಕೆ ಭೇಟಿ ನೀಡಿದ್ದು, ಹೊರಡುವ ಮೊದಲು ಮನೆ ಮತ್ತು ಸುತ್ತಮುತ್ತಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ” ಎಂದು ಮೂಲಗಳು ತಿಳಿಸಿವೆ. ನಂತರ ಈ ಮೂವರು ಇಬ್ಬರು ಮಹಿಳಾ ಪೊಲೀಸರೊಂದಿಗೆ ಮತ್ತೆ ದಿಶಾಳ ಮನೆಗೆ ಬಂದಿದ್ದಾರೆ. ಮಹಿಳಾ ಪೊಲೀಸರು ಬಾಗಿಲು ಬಡಿದು ಮನೆಯೊಳಗೆ ಪ್ರವೇಶಿಸುವಾಗ ಮೂವರು ಹೊರಗೆ ನಿಂತಿದ್ದರು. ಸ್ವಲ್ಪ ಸಮಯದ ನಂತರ, ಇಬ್ಬರು ಪುರುಷರೂ ಮನೆಯೊಳಗೆ ಪ್ರವೇಶಿಸಿ ಸಂಜೆ 5 ರೊಳಗೆ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ದೆಹಲಿಯ ಸ್ಥಳೀಯ ನ್ಯಾಯಾಲಯವೊಂದು ನೀಡಿದ ಐಡಿ ಕಾರ್ಡ್‌ಗಳು ಮತ್ತು ಬಂಧನದ ವಾರಂಟ್‌ ಪ್ರತಿಯನ್ನು ತೋರಿಸಿದ ನಂತರವೇ ದಿಶಾ ಮತ್ತು ಆಕೆಯ ತಾಯಿ ಪೊಲೀಸರನ್ನು ಮನೆಯ ಒಳಗೆ ಅನುಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಿಶಾಳನ್ನು ವಶಕ್ಕೆ ಪಡೆದ ನಂತರ ತಂಡದ ಇಬ್ಬರು ಆಕೆಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಬಂದಿದ್ದಾರೆ. ಇನ್ನೊಬ್ಬ ಪೊಲೀಸ್ ಸಂಪೂರ್ಣ ವಿಚಾರಣೆಯನ್ನು ದಾಖಲಿಸಿದ್ದಾರೆ. ನಂತರ ದಿಶಾಳ ತಾಯಿ ಮಂಜುಳಾ ಅವರ ಬಳಿ ಈ ಪ್ರಕರಣ ಮತ್ತು ಬಂಧನದ ಬಗ್ಗೆ ಖಚಿತಪಡಿಸುವ ದಾಖಲೆಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌…

“ಸಂಜೆ 5.30 ರ ಸುಮಾರಿಗೆ ಪೊಲೀಸರ ತಂಡವು ದಿಶಾಳೊಂದಿಗೆ ವಿಮಾನ ನಿಲ್ದಾಣಕ್ಕೆ ತಲುಪಿತು. ಮಹಿಳಾ ಪೊಲೀಸರು ದಿಶಾಳ ತಾಯಿಗೆ ಆಕೆಯ ಕೆಲವು ಬಟ್ಟೆಗಳನ್ನು ಪ್ಯಾಕ್ ಮಾಡಿಸಿಕೊಂಡರು. ಆಕೆಯ ತಾಯಿ ಕೆಲವು ಹಣ್ಣುಗಳು ಮತ್ತು ದಿಶಾ ಬಳಸುವ ಇತರ ಔಷಧಿಗಳನ್ನು ಸಹ ಪ್ಯಾಕ್ ಮಾಡಿಕೊಟ್ಟಿದ್ದಾರೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ನಂತರ ಪೊಲೀಸರ ತಂಡವು ಎರಡು ಭಾಗಗಳಾಗಿ ವಿಭಜಿತಗೊಂಡು, ಒಂದು ತಂಡವು ದಿಶಾಳನ್ನು ಕರೆದುಕೊಂಡು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಮತ್ತೊಂದು ತಂಡವು ಸೋಲದೇವನಹಳ್ಳಿ ವ್ಯಾಪ್ತಿಯ  ಪೊಲೀಸರನ್ನು ಭೇಟಿ ಮಾಡಿ ಬಂಧನದ ಬಗ್ಗೆ ಅಧಿಕೃತವಾಗಿ ತಿಳಿಸಲು ಹೊರಟರು. ಈ ವಿಷಯ ತಿಳಿದ ನಂತರ ದಿಶಾಳ ಮನೆಯ ಬಳಿಯ ಪರಿಸ್ಥಿಯನ್ನು ಗಮನಿಸಲು ಸ್ಥಲೀಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುವ ಹೊಯ್ಸಳ ತಂಡವನ್ನು ಕಳುಹಿಸಿದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: 3ರಲ್ಲಿ 2 ಪ್ರಕರಣಗಳಲ್ಲಿ ಜಾಮೀನು ಪಡೆದ ದಲಿತ ಹೋರಾಟಗಾರ್ತಿ ನೊದೀಪ್ ಕೌರ್

ಅಂದರೆ ದಿಶಾಳ ಬಂಧನವೆಲ್ಲಾ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ತೆರಳುವಾಗಲಷ್ಟೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟೆ ಅಲ್ಲದೇ ಈ ಪ್ರಕರಣದಲ್ಲಿ ಯಾವುದೇ ನೋಟಿಸ್ ಆಗಲೀ ಅಥವಾ ವಾರೆಂಟ್ ಆಗಲಿ ನೀಡಿರುವುದಿಲ್ಲ. ಹಾಗಾಗಿ ಈ ಬಂಧನವು ಕಾನೂನು ಬಾಹಿರವೆಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದಿಶಾಳನ್ನು ಬಂಧಿಸರು ದೆಹಲಿ ಪೊಲೀಸರು ತೆಗೆದುಕೊಂಡ ಶ್ರಮವನ್ನು ನೋಡಿದರೆ ಒಬ್ಬ ಭಯೋತ್ಪಾದಕನನ್ನು ಹೊಂಚುಹಾಕಿ ಹಿಡಿಯುವ ರೀತಿಯಲ್ಲಿ ಯೋಜನೆಯನ್ನು ರೂಪಿಸಿದ್ದಾರೆ ಎಂದು ಹಲವಾರು ಜನ ಆರೋಪಿಸಿದ್ದಾರೆ. ಹಾಗಾಗಿ ದಿಶಾ ಬಂಧನವಾಗಿಲ್ಲ ಬದಲಿಗೆ ಅಪಹರಿಸಲ್ಪಟ್ಟಿದ್ದಾಳೆ ಎಂದು ದೂರಿದ್ದಾರೆ.

ಅಷ್ಟಕ್ಕೂ ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿಯ ಪೊಲೀಸರು ಬೇರೊಂದು ರಾಜ್ಯದಲ್ಲಿ ಹೀಗೆ ನಿಯಮಬಾಹಿರವಾಗಿ ವ್ಯಕ್ತಿಯೊಬ್ಬನ್ನು ಬಂದಿಸಿರುವುದು, ಸರ್ವಾಧಿಕಾರ ಕಾಲಿಕ್ಕಿರುವುದಕ್ಕೆ, ಅಧಿಕೃತ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....