Homeಮುಖಪುಟ3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ...

3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ.. ಅಂದಿನಿಂದ ಊರಿಗೆ ಹೋಗಿಲ್ಲ ಅನ್ನುತ್ತಾರೆ ಸಂದೀಪ್ ಸಿಂಗ್..

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ 86 ದಿನಗಳಿಂದ ಹಗಲು ರಾತ್ರಿ ಎನ್ನದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ ದೆಹಲಿ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಹೇಳಲು ಬಹಳಷ್ಟು ವಿಷಯಗಳಿವೆ, ಆದರೆ ಸಮಯ ಕಡಿಮೆಯಿದೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ 84 ದಿನಗಳಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಅಂದಿನಿಂದ ಒಮ್ಮೆಯೂ ರಜೆ ತೆಗೆದುಕೊಂಡಿಲ್ಲ ಮಾತ್ರವಲ್ಲ ನಾನು ಊರಿಗೆ ಹೋಗಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...