Homeಮುಖಪುಟದಿಶಾ ರವಿ ಬಂಧನ ಖಂಡಿಸಿದ 'ಭಾರತದ ಗ್ರೇಟಾ ಥನ್‌ಬರ್ಗ್' ರಿಧಿಮಾ ಪಾಂಡೆ

ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

13 ವರ್ಷದ ಈಕೆ ಬಿಬಿಸಿಯ 2020 ರ ಜಗತ್ತಿನ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

- Advertisement -
- Advertisement -

ದಿಶಾ ರವಿಯ ಬಂಧನಕ್ಕೆ ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಖಂಡನೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ‘ಭಾರತದ ಗ್ರೆಟಾ ಥನ್‌ಬರ್ಗ್’ ಎಂದು ಕರೆಯಲ್ಪಡುವ ಯುವ ಹವಾಮಾನ ಕಾರ್ಯಕರ್ತೆ ರಿಧಿಮಾ ಪಾಂಡೆ (13), ದಿಶಾ ರವಿಯ ಬಂಧನವನ್ನು ಅನಗತ್ಯ ಎಂದು ಕರೆದಿದ್ದಾರೆ.

“ದಿಶಾ ಅವರು ಪರಿಸರ ಮತ್ತು ಪರಿಸರ ವಿಜ್ಞಾನಕ್ಕಾಗಿ ಪಟ್ಟುಬಿಡದೆ ಕೆಲಸ ಮಾಡುತ್ತಿದ್ದಾರೆ. ಆಕೆ ರಾಷ್ಟ್ರ ವಿರೋಧಿ ಆಗಲು ಸಾಧ್ಯವಿಲ್ಲ. ಇದಕ್ಕೆ ತದ್ವಿರುದ್ಧವಾಗಿ ಅವರು ದೇಶದ ಬಲವರ್ಧನೆಗೆ ಕೊಡುಗೆ ನೀಡಲು ಯುವಜನತೆಯನ್ನು ಪ್ರೇರೇಪಿಸುತ್ತಿದ್ದಾರೆ” ಎಂದು ಸರ್ಕಾರದ ಧೋರಣೆಯನ್ನು ಖಂಡಿಸಿರುವ ರಿಧೀಮಾ ಪಾಂಡೆ ದಿಶಾ ರವಿಗೆ ಬೆಂಬಲ ಸೂಚಿಸಿದ್ದಾರೆ.

ರೈತರ ಪ್ರತಿಭಟನೆ ಮತ್ತು ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆಗೆ ಸಂಬಂಧಿಸಿದ ‘ಟೂಲ್‌ಕಿಟ್’ ಅನ್ನು ಹಂಚಿಕೊಂಡಿದ್ದಕ್ಕಾಗಿ ಯುವ ಪರಿಸರ ಹೋರಾಟಗಾರ್ತಿ ದಿಶಾಳನ್ನು ಬಂಧಿಸಲಾಗಿದೆ.

ರಿಧಿಮಾ ಪಾಂಡೆ ಬಿಬಿಸಿಯ 2020 ರ ಜಗತ್ತಿನ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಬಿಬಿಸಿಯು ರಿಧಿಮಾಳನ್ನು “ಹವಾಮಾನ ಕಾರ್ಯಕರ್ತೆ” ಎಂದು ಬಣ್ಣಿಸಿತ್ತು. ಆಕೆ ತನ್ನ ಒಂಬತ್ತನೇ ವಯಸ್ಸಿನಲ್ಲಿಯೇ, ಹವಾಮಾನ ಬದಲಾವಣೆಯನ್ನು ತಗ್ಗಿಸುವಲ್ಲಿನ ನಿಷ್ಕ್ರಿಯತೆಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಪ್ರಪಂಚವನ್ನು ಪೀಡಿಸುತ್ತಿರುವ ಪರಿಸರದ ಸಮಸ್ಯೆಗಳ ಕುರಿತು ವಿಶ್ವಸಂಸ್ಥೆಗೆ ಮನವಿ ಸಲ್ಲಿಸಿರುವ ಜಗತ್ತಿನಾದ್ಯಂತ ಇರುವ 16 ಮಕ್ಕಳಲ್ಲಿ ರಿಧಿಮಾ ಪಾಂಡೆ ಕೂಡಾ ಒಬ್ಬರು.

ಡೆಹ್ರಾಡೂನ್ ವಿಮಾನ ನಿಲ್ದಾಣವನ್ನು ವಿಸ್ತರಿಸಲು 10,000 ಕ್ಕೂ ಹೆಚ್ಚು ಮರಗಳನ್ನು ಕಡಿಯುವ ಉತ್ತರಾಖಂಡ ಸರ್ಕಾರದ ಕ್ರಮವನ್ನು ವಿರೋಧಿಸಿರುವ ರಿಧಿಮಾ ಪಾಂಡೆ, ಸೇವ್ ಥಾನೋ ಫಾರೆಸ್ಟ್ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.


ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...