Homeಮುಖಪುಟಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ಬಟಿಂಡಾ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಲೇ ಇದೆ. ಇಂದಿಗೂ ಅಲ್ಲಿನ ಟೋಲ್ ಪ್ಲಾಜಾ, ರೈಲು ನಿಲ್ದಾಣದಳ ಬಳಿ ಪ್ರತಿಭಟನೆ ನಡೆಯುತ್ತಿದೆ.

- Advertisement -
- Advertisement -

ರೈತ ಹೋರಾಟದ ನಾಯಕತ್ವ ವಹಿಸಿರುವ ಪಂಜಾಬ್ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಏಣಿಕೆ ನಡೆದು ಫಲಿತಾಂಶ ಪ್ರಕಟವಾಗುತ್ತಿದೆ. ವಿವಾದಿತ ಕೃಷಿ ಕಾನೂನುಗಳು ಕೇಂದ್ರದ ಆಡಳಿತರೂಢ ಬಿಜೆಪಿಗೆ ಭಾರಿ ಹಿನ್ನಡೆ ಉಂಟುಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅದ್ಭುತ ಸಾಧನೆ ಮಾಡಿದೆ.

ಪಂಜಾಬಿನ ಮೊಗ್ಗ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್ ಮತ್ತು ಬಟಿಂಡಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬರ್ಜರಿ ಯಶಸ್ಸು ಪಡೆದಿದೆ. ಇವುಗಳಲ್ಲಿ ಬಟಿಂಡಾ ಜಿಲ್ಲೆಯಲ್ಲಿ ಕಳೆದ 53 ವರ್ಷಗಳ ನಂತರ ಕಾಂಗ್ರೆಸ್ ಪಾಲಿಗೆ ಮೇಯರ್ ಸ್ಥಾನ ಒಲಿದಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಂದು ಅದ್ಭುತ ಗೆಲುವು ಎಂದು ಬಿಂಬಿಸಲಾಗುತ್ತಿದೆ.

ಬಟಿಂಡಾ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಲೇ ಇದೆ. ಇಂದಿಗೂ ಅಲ್ಲಿನ ಟೋಲ್ ಪ್ಲಾಜಾ, ರೈಲು ನಿಲ್ದಾಣದಳ ಬಳಿ ಪ್ರತಿಭಟನೆ ನಡೆಯುತ್ತಿದೆ. ಅಕ್ಕ ಪಕ್ಕದ ಹಳ್ಳಿಯ ಜನರು ಜಿಲ್ಲಾ ಕೇಂದ್ರ ಮತ್ತು ರಾಮಪುರ ಪುಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಬಟಿಂಡಾದಲ್ಲಿ ಕಾಂಗ್ರೆಸ್‌ಗೆ ಗೆದ್ದ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ” ಇಂದು ಇತಿಹಾಸ ಸೃಷ್ಟಿಯಾಗಿದೆ. 53 ವರ್ಷಗಳಲ್ಲಿ ಮೊದಲ ಬಾರಿಗೆ ಬಟಿಂಡಾ ಕಾಂಗ್ರೆಸ್ ಮೇಯರ್ ಪಡೆಯಲಿದೆ. ಅದ್ಭುತ ಗೆಲುವು ನೀಡಿದ ಬಟಿಂಡಾ ಜನರಿಗೆ ಅಭಿನಂದನೆಗಳು. ಈ ದಿನಕ್ಕಾಗಿ ಶ್ರಮಿಸಿದ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರಿಗೆ ಶುಭಾಷಯಗಳು” ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಮತ್ತು ಪಂಜಾಬ್ ರಾಜ್ಯ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ಬಟಿಂಡಾ ನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮನ್‌ಪ್ರೀತ್ ಸಿಂಗ್ ಬಾದಲ್ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಸೋದರಸಂಬಂಧಿಯಾಗಿದ್ದು, ಈ ಬಾರಿ ಪುರಸಭೆ ಚುನಾವಣೆಯನ್ನು ಪ್ರತಿಷ್ಠಿತ ಕಣವನ್ನಾಗಿಸಿಕೊಂಡಿದ್ದರು.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಬಟಿಂಡಾ ಲೋಕಸಭಾ ಕ್ಷೇತ್ರವನ್ನು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಹರ್ಸಿಮ್ರತ್ ಬಾದಲ್ ಪ್ರತಿನಿಧಿಸುತ್ತಿದ್ದಾರೆ. ಅಕಾಲಿದಳ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳಿಂದ ರಾಜ್ಯದ ರೈತರಲ್ಲಿ ಉಂಟಾದ ಪ್ರತಿಭಟನೆಯ ನಂತರ ತನ್ನ ದೀರ್ಘಕಾಲದ ಮಿತ್ರ ಬಿಜೆಪಿಯೊಂದಿಗೆ ಇತ್ತೀಚೆಗೆ ಬೇರ್ಪಟ್ಟಿದೆ.

PC: twitter@Manpreet Singh Badal

ಬಟಿಂಡಾ ಜಿಲ್ಲೆಯಲ್ಲಿ ಫೆಬ್ರವರಿ 7 ರಂದು ನಾನುಗೌರಿ.ಕಾಂ ತಂಡ ಕೆಲವು ಸ್ಥಳಿಯರೊಂದಿಗೆ ಮಾತುಕತೆ ನಡೆಸಿತ್ತು. ರಾಮಪುರ ಪುಲ್ ನಗರದ ರೈಲು ನಿಲ್ದಾಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಹಲವು ಮಂದಿ ರೈತರು ಹೇಳಿದ್ದು, ನಾವು ಈ ಬಾರಿ ಬಿಜೆಪಿಗೆ ಮತ ನೀಡುವುದಿಲ್ಲ. ನಮ್ಮ ಪರವಾಗಿ ನಿಂತವರಿಗೆ, ನಮ್ಮ ರೈತರ ನೋವುಗಳಿಗೆ ಜೊತೆಯಾದವರಿಗೆ ಮತ ನೀಡುತ್ತೇವೆ ಎಂದು ತಿಳಿಸಿದ್ದರು.

ಇದುವರೆಗಿನ ಚುನಾವಣಾ ಎಣಿಕೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಅನುಭವಿಸಿದ್ದು, ಮತ ಎಣಿಕೆಯಾಗುತ್ತಿರುವ 7 ಮುನ್ಸಿಪಲ್ ಕಾರ್ಪೋರೇಷನ್‌ಗಳಲ್ಲಿ 6 ನ್ನು ಕಾಂಗ್ರೆಸ್ ಗೆದ್ದುಕೊಂಡಿದ್ದು, ಒಂದು ಮುನ್ಸಿಪಲ್‌ ಕಾರ್ಪೋರೇಷನ್‌ನಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.


ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...