ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟಿನ ನಡುವೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ತೆಗೆದುಹಾಕಿದ್ದರು.
ಸದ್ಯ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ತೆಲಂಗಾಣದ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ನೇಮಿಸಲಾಗಿದೆ. ಉನ್ನತ ಹುದ್ದೆಯಿಂದ ತೆಗೆದುಹಾಕಿದ ನಂತರ ಕಿರಣ್ ಬೇಡಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು, ಇದು ಜೀವಮಾನದ ಅನುಭವ ಎಂದಿದ್ದಾರೆ.
“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನನ್ನ ಕೆಲಸದ ಭಾಗವಾಗಿದ್ದ ಎಲ್ಲರಿಗೂ ಮತ್ತು ಎಲ್ಲಾ ಪುದುಚೇರಿಯ ಜನರಿಗೂ, ಸಾರ್ವಜನಿಕ ಅಧಿಕಾರಿಗಳಿಗೂ ಧನ್ಯವಾದಗಳು” ಎಂದು 71 ವರ್ಷದ ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ
Thank all those who were a part my journey as Lt Governor of Puducherry—
The People of Puducherry and all the Public officials. ? pic.twitter.com/ckvwJ694qq— Kiran Bedi (@thekiranbedi) February 17, 2021
“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಜೀವಮಾನದ ಅನುಭವಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಟೀಮ್ ರಾಜ್ ನಿವಾಸ್ (ರಾಜ್ ನಿವಾಸ್ ತಂಡ) ಸಾರ್ವಜನಿಕ ಹಿತಾಸಕ್ತಿಗಾಗಿ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂದು ಕಿರಣ್ ಬೇಡಿ ತಮ್ಮ ಧನ್ಯವಾದದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಏನೇ ಮಾಡಿದ್ದರು ಅದು ಪವಿತ್ರ ಕರ್ತವ್ಯ. ನನ್ನ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಎಂದಿದ್ದಾರೆ.
ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಜನವರಿಯಲ್ಲಿ ಆರೋಪಿಸಿದ್ದರು. “ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು. ಪುದುಚೇರಿಯಲ್ಲಿ ಜಾತ್ಯತೀತ ಪಕ್ಷಗಳ ಜನರು, ಕೋಮುವಾದಿ ಅಂಶಗಳನ್ನು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮತ್ತೊಮ್ಮೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!
Last 4 years were turbulent for our govt. Kiran Bedi had been creating problems with her interference in day-to-day administration. Our constant efforts against her actions have paid off. People like secular parties in Puducherry, communal elements not allowed: CM V Narayanasamy pic.twitter.com/HDbh6hKuyf
— ANI (@ANI) February 17, 2021
ಇನ್ನು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ವಿ.ನಾರಾಯಣ ಸಾಮಿ, “ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸುವ ಸಲುವಾಗಿ ನಮ್ಮ ಶಾಸಕರನ್ನು ಬೇಟೆಯಾಡುತ್ತಿದೆ. 3 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಯೋಜನೆಯ ಬಗ್ಗೆ ಜನರಿಗೆ ತಿಳಿದಿದೆ, ಮತದಾರರು 2021 ರ ಚುನಾವಣೆಯ ಸಮಯದಲ್ಲಿ ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದಿದ್ದಾರೆ.
ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ನಾಲ್ಕು ಕಾಂಗ್ರೆಸ್ ನಾಯಕರು ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.
ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ


