Homeಕರ್ನಾಟಕಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

- Advertisement -
- Advertisement -

ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ‘ತನ್ನ ಅಂತ್ಯಕ್ರಿಯೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್‌ ಬರಬೇಕು’ ಎಂದು ಆತ್ಮಹತ್ಯೆ ನೋಟ್‌ ಬರೆದಿಟ್ಟು ಸಾವನಪ್ಪಿದ್ದ 25 ವರ್ಷದ ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ – ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ ಎಂದು ನಂತರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ ಎಂದು ಅವರು ವಿ‍ಷಾಧ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್‌ ಬಂಕ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಎಂಬಾತ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ತನ್ನ ಸಾವಿಗೂ ಮುನ್ನ ಆತ್ಮಹತ್ಯೆ ನೋಟ್‌ ಬರೆದಿಟ್ಟಿದ್ದು,  ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೇನೆ. ನನ್ನಿಂದ ಅಮ್ಮ-ಅಪ್ಪ-ಸ್ನೇಹಿತರಿರೊಂದಿಗೆ ಉತ್ತಮನಾಗಿ ಇರಲು ಸಾಧ್ಯವಾಗಲಿಲ್ಲ. ತನ್ನ ಪ್ರೇಯಸಿಯೊಂದಿಗೂ ಬದುಕಲು ಆಗಲಿಲ್ಲ. ಹಾಗಾಗಿ ಎಲ್ಲರಿಂದಲೂ ದೂವಾಗುತ್ತಿದ್ದೇನೆ ಎಂದು ಬರೆದಿದ್ದ.

ಅಲ್ಲದೆ, ತನ್ನ ಕೊನೆಯ ಅಸೆಯನ್ನೂ ಬರೆದಿರುವ ಕೃಷ್ಣ, ನಾನು ಸಿದ್ದರಾಮಯ್ಯ ಹಾಗೂ ಯಶ್‌ ಅವರ ಅಪ್ಪಟ ಅಭಿಮಾನಿ. ನನ್ನ ಅಂತ್ಯಕ್ರಿಯೆಗೆ ಅವರಿಬ್ಬರೂ ಬರಬೇಕು. ದಯವಿಟ್ಟು ನನ್ನ ಕೊನೆ ಆಸೆ ಈಡೇರಿಸಿ‌ ಎಂದು ಬರೆದಿದ್ದನು.


ಇದನ್ನೂ ಓದಿ: ಧರ್ಮೇಗೌಡರ ಸಾವಿನಿಂದ ತೆರವಾಗಿದ್ದ ವಿಧಾನ ಪರಿಷತ್‌‌ ಸ್ಥಾನಕ್ಕೆ ಚುನಾವಣೆ ನಿಗದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...