Homeಚಳವಳಿರೈಲ್ ರೋಕೋ: ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ- ರೈಲ್ವೆ ಇಲಾಖೆ

ರೈಲ್ ರೋಕೋ: ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ- ರೈಲ್ವೆ ಇಲಾಖೆ

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ 20 ಹೆಚ್ಚುವರಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆಗಳನ್ನು ರೈಲು ಇಲಾಖೆ ನಿಯೋಜಿಸಿತ್ತು

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ಗುರುವಾರ (ಫೆ.18) ರಂದು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನಡೆಸಿದ “ರೈಲು ರೋಕೊ” ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಕೆಲವು ವಲಯಗಳಲ್ಲಿ ಯಾವುದೇ ರೈಲು ನಿಲ್ಲಿಸಲಾಗಿಲ್ಲ, ಆದರೆ, ಉತ್ತರ ವಲಯದಲ್ಲಿ ಸುಮಾರು 25 ರೈಲುಗಳನ್ನು ನಿಯಂತ್ರಿಸಲಾಗಿದೆ ಎಂದು ವಲಯ ರೈಲ್ವೆ ವಕ್ತಾರರು ಮಾಹಿತಿ ನೀಡಿದ್ದಾರೆ.

“ಇಲ್ಲಿಯವರೆಗೆ ಸುಮಾರು 25 ರೈಲುಗಳನ್ನು ನಿಯಂತ್ರಿಸಲಾಗಿದೆ. ಆಂದೋಲನದಿಂದಾಗಿ ರೈಲು ಸೇವೆಗಳ ಮೇಲೆ ಕನಿಷ್ಠ ಪರಿಣಾಮ ಬೀರಿದೆ” ಎಂದು ಉತ್ತರ ರೈಲ್ವೆ ವಕ್ತಾರ ದೀಪಕ್ ಕುಮಾರ್ ಹೇಳಿದ್ದಾರೆ.

25 ರೈಲುಗಳಲ್ಲಿ ಕೆಲವನ್ನು ರದ್ದುಗೊಳಿಸಲಾಗಿದೆ. ಮತ್ತೆ ಕೆಲವನ್ನು ಬೇರೆ ಮಾರ್ಗಕ್ಕೆ ಮರು ಹೊಂದಿಸಿಲಾಗಿದೆ. ಆದರೂ ಕೂಡ ಇಂದಿನ ರೈಲ್ ರೋಕೋ ಚಳವಳಿ ರೈಲ್ವೆ ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ ಎಂದು ಎನ್‌ಡಿಟಿವಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

ರೈತ ಹೋರಾಟದ ಮುಂದಾಳತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚ್ ಫೆಬ್ರವರಿ 10 ರಂದು ಪತ್ರಿಕಾ ಹೇಳಿಕೆಯಲ್ಲಿ ಫೆಬ್ರವರಿ 18 ರಂದು ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸಲು ಕರೆ ನೀಡಿತ್ತು. ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರೈಲು ತಡೆ ನಡೆಸಲು ತಿಳಿಸಲಾಗಿತ್ತು.

ದೆಹಲಿಯ ಸಮೀಪವಿರುವ ನಿಲ್ದಾಣಗಳಲ್ಲಿಯೂ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಪ್ರತಿಭಟನೆ ನಡೆಸಿದರು. ಗಾಜಿಪುರ ಗಡಿ ಬಳಿಯ ಮೋದಿ ನಗರ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಹರಿಯಾಣದ ಕುರುಕ್ಷೇತ್ರದಲ್ಲಿ “ರೈಲು ರೋಕೊ” ಚಳವಳಿ ನಡೆಯುತ್ತಿದ್ದರೂ ಚಲಿಸಲು ಮುಂದಾಗಿದ್ದ ಗೀತಾ ಜಯಂತಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಹತ್ತಿ ರೈತರು ಪ್ರತಿಭಟನೆ ನಡೆಸಿದರು. ಇನ್ನೂ ಚಾರ್ಖಿ ದಾದ್ರಿ ರೈಲ್ವೆ ನಿಲ್ದಾಣದಲ್ಲಿ ರೈಲು ಹಳಿಗಳನ್ನು ಬಂದ್ ಮಾಡಿ, ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳಿಗೆ ರೈತರು ಜಿಲೇಬಿ, ಚಹಾ ಮತ್ತು ತಿಂಡಿಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಪಂಜಾಬ್‌ನಲ್ಲಿ ದೆಹಲಿ-ಲೂಧಿಯಾನ-ಅಮೃತಸರ ರೈಲ್ವೆ ಮಾರ್ಗದಲ್ಲಿ ಪ್ರತಿಭಟನಾಕಾರರು ಅನೇಕ ಸ್ಥಳಗಳಲ್ಲಿ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಜಲಂಧರ್‌ನ ಜಲಂಧರ್ ಕ್ಯಾಂಟ್-ಜಮ್ಮು ರೈಲು ಹಳಿಗಳನ್ನು ನಿರ್ಬಂಧಿಸಿದಲಾಗಿತ್ತು. ಮೊಹಾಲಿ ಜಿಲ್ಲೆಯಲ್ಲಿಯೂ ರೈಲ್ ರೋಕೋ ಪ್ರತಿಭಟನೆ ನಡೆಸಲಾಗಿತ್ತು.

ಹರಿಯಾಣ ಮತ್ತು ಪಂಜಾಬ್ ಎರಡು ರಾಜ್ಯಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ರೈಲ್ವೆ ಪೊಲೀಸ್ ಮತ್ತು ರಾಜ್ಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ 20 ಹೆಚ್ಚುವರಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ಪಡೆಗಳನ್ನು ರೈಲು ಇಲಾಖೆ ನಿಯೋಜಿಸಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ರೈಲ್ ರೋಕೋಗೆ ರಾಜ್ಯದಲ್ಲಿಯೂ ಭಾರಿ ಬೆಂಬಲ ವ್ಯಕ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾದರೆ, ಮತ್ತೆ ಕೆಲವು ಕಡೆ 12 ಗಂಟೆಗೆ ಚಳವಳಿ ಆರಂಭವಾಗಿತ್ತು.


ಇದನ್ನೂ ಓದಿ: ರೈತ ಹೋರಾಟ: ರೈಲ್ ರೋಕೋ ಚಳವಳಿಗೆ ರಾಜ್ಯದಲ್ಲಿ ಭಾರಿ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...