Homeಮುಖಪುಟರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? - ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP...

ರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? – ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP ಮುಖಂಡ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಹಣ ಸಂಗ್ರಹಿಸುವ ಕಾರ್ಯ ಆರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿದಂತೆ ಬಹುತೇಕರು “90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ಅಡ್ವಾಣಿ ನೇತೃತ್ವದಲ್ಲಿ 90 ರ ದಶಕದಲ್ಲಿ ಸಂಗ್ರಹವಾಗಿದ್ದ ಹಣದ ಲೆಕ್ಕ ನೀಡಿ ಎಂದು ದೇಶದಾದ್ಯಂತ ಬಹುಪಾಲು ಪ್ರಜ್ಞಾವಂತರು ಪ್ರಶ್ನೆ ಕೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎನ್‌ಡಿಟಿವಿ ಕೂಡ ವಿಶ್ವ ಹಿಂದೂ ಪರಿಷತ್‌ ಮುಖಂಡರು ಮತ್ತು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಅವರನ್ನು ಪ್ರಶ್ನಿಸಿದ್ದರು. ಆದರೆ ಅವರು ಇದಕ್ಕೆ ಸ್ಪಷ್ಟ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನಾಡಿ ನುಣುಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ಸಂದರ್ಶನದಲ್ಲಿ ಕೇಳಿದ ಪ್ರಶ್ನೆಯಿಂದ ಗಲಿಬಿಲಿಗೊಂಡ ಚಂಪತ್‌ ರಾಯ್‌, “ಇದು ನಿಮ್ಮ ಪ್ರಶ್ನೆ ಅಲ್ಲ, ಈ ಪ್ರಶ್ನೆಯನ್ನು ಕೇಳಲು ನಿಮಗೆ ಯಾರು ಹೇಳಿದ್ದಾರೋ, ಅವರು ಮೂರ್ಖರು, ಬುದ್ಧಿಯಿಲ್ಲದವರು” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಈ ಪ್ರಶ್ನೆಯು ಎನ್‌ಡಿಟಿವಿ ಕೇಳುತ್ತಿದೆ ಎಂದು ಸಂದರ್ಶಕಿ ಹೇಳಿದಾಗ, “ಈ ಪ್ರಶ್ನೆಯನ್ನು ಎನ್‌ಡಿಟಿವಿಯಲ್ಲಿನ ಯಾರು ಬರೆದು ನಿಮಗೆ ನೀಡಿದ್ದಾರೋ, ಅವರು ಮೂರ್ಖರು. ಅವರಿಗೆ ಸ್ವಲ್ಪವೂ ಬುದ್ಧಿಯಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಒಟ್ಟು 37,000 ಮಂದಿ ಕಾರ್ಯಕರ್ತರನ್ನು ಈ ಕಾರ್ಯಕ್ಕೆ ನಿಯೋಜನೆ ಮಾಡಿದ್ದೇವೆ. ಮೂರು ಪ್ರಮುಖ ಬ್ಯಾಂಕ್‌ ಗಳಲ್ಲಿ ಅವರು ಖಾತೆಯನ್ನು ಹೊಂದಿದ್ದಾರೆ. ಸಂಗ್ರಹವಾದ ದೇಣಿಗೆಗಳನ್ನು ಅವರು ಮಾತ್ರವೇ ಬ್ಯಾಂಕ್‌ ಗೆ ತಂದೊಪ್ಪಿಸಬಹುದಾಗಿದೆ. ನಾವು ಮನೆಯ ಮುಂದೆ ಸ್ಟಿಕ್ಕರ್‌ ಅಂಟಿಸುವಂತೆ ಯಾರನ್ನೂ ಕೇಳಿಕೊಂಡಿಲ್ಲ. ಇನ್ನು ರಾಜಕೀಯದವರು ಚುನಾವಣೆಯ ವೇಳೆ ಕರಪತ್ರ, ಸ್ಟಿಕ್ಕರ್‌, ಧ್ವಜಗಳನ್ನು ಹಾಕುತ್ತಾರೆ. ಇಲ್ಲಿಯೂ ಸ್ಟಿಕ್ಕರ್‌ ಹಾಕಿದರೆ ತಪ್ಪೇನಿಲ್ಲ” ಎಂದು ಸಂದರ್ಶನದಲ್ಲಿ ಚಂಪತ್‌ ರಾಯ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಹಾಗಾಗಿ ಈ ಪ್ರಶ್ನೆಗೆ ಸ್ಪಷ್ಟವಾದ ಉತ್ತರವನ್ನು ಯಾರು ಕೊಡುತ್ತಾರೆ ಎನ್ನುವ ಮತ್ತೊಂದು ಪ್ರಶ್ನೆ ಎದುರಾಗಿದೆ.

2017 ರಲ್ಲಿ ರಾಮ ಜನ್ಮಭೂಮಿ ವಿವಾದದ ಪ್ರಮುಖ ಸಂಘಟನೆಯಾದ ನಿರ್ಮೋಹಿ ಅಖಾಡ, “ರಾಮಮಂದಿರಕ್ಕೆ ಸಂಗ್ರಹವಾದ ಹಣವನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿದೆ” ಎಂದು ಆರೋಪಿಸಿತ್ತು.


ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರಶ್ನೆಗಳನ್ನು ಕೇಳುವ ಯಾರಿಗೂ ಬುದ್ದಿಯಿಲ್ಲ.
    ಬುದ್ದಿ ಎಲ್ಲ ಇರುವುದು ಇವನಿಗೆ ಮಾತ್ರ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...