Homeಚಳವಳಿಬಿಜೆಪಿಯವರನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ- ನರೇಶ್ ಟಿಕಾಯತ್

ಬಿಜೆಪಿಯವರನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ- ನರೇಶ್ ಟಿಕಾಯತ್

ಬಿಜೆಪಿ ಮುಖಂಡರು ಮತ್ತು ಬಿಜೆಪಿ ರೈತರ ಮಾತನ್ನು ಕೇಳುತ್ತಿಲ್ಲ ಆದ್ದರಿಂದ ರೈತರು ಕೂಡ ಕೇಸರಿ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಬಾರದು - ನರೇಶ್ ಟಿಕಾಯತ್

- Advertisement -
- Advertisement -

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್‌ ಯಾವುದೇ ಕಾರ್ಯಕ್ರಮಗಳಿಗೆ ಬಿಜೆಪಿ ನಾಯಕರನ್ನು ಆಹ್ವಾನಿಸಬೇಡಿ ಎಂದು ರೈತರಿಗೆ ಸಲಹೆ ನೀಡಿದ್ದಾರೆ.

ಒಂದು ವೇಳೆ ನೀವು ಬಿಜೆಪಿ ಮುಖಂಡರನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಿದರೆ ಮರುದಿನ 100 ಜನರಿಗೆ ಆಹಾರವನ್ನು ನೀಡಲು ಸಿದ್ಧರಾಗಿರಿ ಎಂದು ಉತ್ತರ ಪ್ರದೇಶದ ಸಿಸೋಲಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಟಿಕಾಯತ್ ಹೇಳಿದರು.

ಬಿಜೆಪಿ ಮುಖಂಡರು ಮತ್ತು ಬಿಜೆಪಿ ರೈತರ ಮಾತನ್ನು ಕೇಳುತ್ತಿಲ್ಲ ಆದ್ದರಿಂದ ರೈತರು ಕೂಡ ಕೇಸರಿ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಬಾರದು ಎಂದು ನರೇಶ್ ಟಿಕಾಯತ್ ರೈತರಿಗೆ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತಡೆಗೆ ಹಲವು ಕುತಂತ್ರಗಳು, ಜಗ್ಗದ ಅನ್ನದಾತರು: ವಿಶೇಷ ವರದಿ

“ನೀವು ಇದನ್ನು ನನ್ನ ಆದೇಶ ಅಥವಾ ಸಲಹೆ ಎಂದು ಬೇಕಾದರೆ ತೆಗೆದುಕೊಳ್ಳಿ. ಬಿಜೆಪಿಯವರನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ. ಒಂದು ವೇಳೆ ಯಾರಾದರೂ ಆಹ್ವಾನಿಸಿದರೆ ಅವರಿಗೆ ಹೇಳಿ, ಮಾರನೇ ದಿನ 100 ಜನರಿಗೆ ಊಟ ಕಳಿಸಲು ಸಿದ್ದರಿರಬೇಕು” ಎಂದು ನರೇಶ್ ಟಿಕಾಯತ್ ಹೇಳಿದ್ದಾಗಿ ಎಎನ್‌ಐ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ ’ಬಿಜೆಪಿ ನಾಯಕರು ತಮ್ಮ ಸ್ವಂತ ಮನೆಗಳಲ್ಲಿ ಸಂತೋಷವಾಗಿರಬೇಕು ಎಂದು ನಾನು ಹೇಳಿದೆ. ನೀವು ಇದನ್ನು ಬಹಿಷ್ಕಾರವೆಂದು ಪರಿಗಣಿಸಬಹುದು. ಬಿಜೆಪಿ ತಮ್ಮ ಸಂಘಟನೆಯಿಂದ ಕೆಲವು ಜನರನ್ನು ಮಾನಸಿಕವಾಗಿ ಬಂಧಿಸಿದೆ ಎಂದು ಹೇಳಿದ್ದಾರೆ.

ನರೇಶ್ ಟಿಕಾಯತ್, ಹಿರಿಯ ದಿವಂಗತ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್ ಅವರ ಹಿರಿಯ ಮಗ. ಟಿಕಾಯತ್ ಸಹೋದರರು ನವೆಂಬರ್‌ 26 ರಿಂದ ರೈತ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ರೈತ ಹೋರಾಟಕ್ಕಾಗಿ, ಮಹಾಪಂಚಾಯತ್‌ಗಳ ಮೂಲಕ ರೈತರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...