Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...