Homeಮುಖಪುಟಮಹಾರಾಷ್ಟ್ರ: ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್‌ನ 14 ಸದಸ್ಯರ ಬಂಧನ

ಮಹಾರಾಷ್ಟ್ರ: ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್‌ನ 14 ಸದಸ್ಯರ ಬಂಧನ

ಟ್ರಕ್‌ಗಳಲ್ಲಿ ತಲಾ 35 ರಿಂದ 40 ಲೀಟರ್ ಡೀಸೆಲ್ ತುಂಬಿದ ಸುಮಾರು 40 ಕಂಟೇನರ್‌ಗಳು ಪತ್ತೆಯಾಗಿವೆ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಕನ್ನಡ ತಾಲ್ಲೂಕಿನಲ್ಲಿ ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್‌ನ 14 ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರವರಿ 17 ರಂದು ನಡೆದ ಕಾರ್ಯಾಚರಣೆಯಲ್ಲಿ ನಾಲ್ಕು ಲಾರಿಗಳು, ಡೀಸೆಲ್ ತುಂಬಿದ್ದ ಸುಮಾರು 40 ಕಂಟೇನರ್‌ಗಳು,‌ ನಗದು ಸೇರಿ ಒಟ್ಟಾರೆಯಾಗಿ 98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 16 ರಂದು ಚಿಟೆಗಾಂವ್‌ನ ಪೆಟ್ರೋಲ್ ಪಂಪ್‌ನಿಂದ 3,480 ಲೀಟರ್ ಡೀಸೆಲ್ ಕಳವು ಮಾಡಲಾಗಿದೆ ಎಂದು ಚಿಕಲ್ಥಾನ ಪೊಲೀಸ್ ಠಾಣೆಯಲ್ಲಿ ದಾಳಲಾಗಿದ್ದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಕಳ್ಳರ ಗ್ಯಾಂಗ್ ಇದರಲ್ಲಿ ಭಾಗಿಯಾಗಿದೆ ಎಂದು ಸ್ಥಳೀಯ ಅಪರಾಧ ವಿಭಾಗಕ್ಕೆ ಮಾಹಿತಿ ಸಿಕ್ಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮೋಕ್ಷದಾ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಈ ಗ್ಯಾಂಗ್ ಸದಸ್ಯರು ಗುಜರಾತ್‌ನ ಟ್ಯಾಪಿ ಜಿಲ್ಲೆಯಿಂದ ಮರಳು ತುಂಬಿಸಿಕೊಂಡು ಉಸ್ಮಾನಾಬಾದ್‌ನಲ್ಲಿ ಮಾರಾಟ ಮಾಡುತ್ತಾರೆ ಎಂದು ಪೊಲೀಸರಿಗೆ ತಿಳಿದಿತ್ತು. ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.

“ಈ ಗ್ಯಾಂಗ್ ಸದಸ್ಯರು ರಾತ್ರಿಯಲ್ಲಿ ವಿವಿಧ ಪೆಟ್ರೋಲ್ ಪಂಪ್‌ಗಳ ಬಳಿ ಟ್ರಕ್ ನಿಲ್ಲಿಸುತ್ತಿದ್ದರು. ಬಂಕ್‌ನಲ್ಲಿನ ಹ್ಯಾಂಡ್ ಪಂಪ್‌ಗಳನ್ನು ಬಳಸಿಕೊಂಡು ಟ್ಯಾಂಕ್‌ಗಳಿಂದ ಡೀಸೆಲ್ ಕದಿಯುತ್ತಿದ್ದರು. ಕದ್ದ ಡೀಸೆಲ್ ಅನ್ನು ತಮ್ಮ ವೈಯಕ್ತಿಕ ಬಳಕೆಗಾಗಿ ಬಳಸಿದ ನಂತರ, ಉಳಿದ ಇಂಧನವನ್ನು ಇತರ ಟ್ರಕ್ ಚಾಲಕರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು’ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್‌ನಿಂದ ಬರುತ್ತಿದ್ದ ಟ್ರಕ್‌ಗಳನ್ನು ಪರಿಶೀಲಿಸುವಾಗ ಪೊಲೀಸರು ಮರಳು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಹಿಡಿದಿದ್ದರು. ಈ ಟ್ರಕ್‌ಗಳಲ್ಲಿ ತಲಾ 35 ರಿಂದ 40 ಲೀಟರ್ ಡೀಸೆಲ್ ತುಂಬಿದ ಸುಮಾರು 40 ಕಂಟೇನರ್‌ಗಳು ಪತ್ತೆಯಾಗಿವೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

“ಈ ಹದಿನಾಲ್ಕು ಜನರಿಂದ ನಾಲ್ಕು ಟ್ರಕ್, 1,540 ಲೀಟರ್ ಡೀಸೆಲ್, ಮೂರು ಹ್ಯಾಂಡ್ ಪಂಪ್ ಜೊತೆಗೆ 220 ಅಡಿ ಪೈಪ್, 42,700 ರೂ. ನಗದು ಮತ್ತು ಎಂಟು ಮೊಬೈಲ್ ಪೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೊತ್ತ 98. 49 ಲಕ್ಷ ರೂಪಾಯಿಗಳು” ಮತ್ತೊಬ್ಬ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಇದೇ ರೀತಿಯ ದೂರುಗಳು ದಾಖಲಾಗಿವೆ. ಡೀಸೆಲ್ ಕಳ್ಳತನದ 36 ಅಪರಾಧಗಳಲ್ಲಿ ತಾವು ಭಾಗಿಯಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಗ್ಯಾಂಗ್ ಕಳೆದ ಐದು ವರ್ಷಗಳಿಂದ ಡೀಸೆಲ್ ಕದಿಯುತ್ತಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...