ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರೆಸ್ಸೆಸ್ ಮತ್ತು ಬಿಜೆಪಿಯೇ ಕಾರಣ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜನರಿಗೆ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ
“ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ತ್ಯಾಗ, ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.
ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ? 4/7#ಕಾಂಗ್ರೆಸ್_ಪಾದಯಾತ್ರೆ
— Siddaramaiah (@siddaramaiah) February 22, 2021
“ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?” ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ
“ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮ ಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ ಇಲ್ಲ. ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ?’’ ಎಂದು ಕೇಳಿದ್ದಾರೆ.
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ? 6/7#ಕಾಂಗ್ರೆಸ್_ಪಾದಯಾತ್ರೆ
— Siddaramaiah (@siddaramaiah) February 22, 2021
“ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.
“ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ


