Homeಕರ್ನಾಟಕಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಅನಿವಾರ್ಯ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 10 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡ 6 ಬ್ಲಾಕ್‌ಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ.

1,500 ನಿವಾಸಿಗಳೊಂದಿಗೆ ಒಂಬತ್ತು ಬ್ಲಾಕ್‌ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ 10 ಕೋವಿಡ್ ಪ್ರಕರಣಗಳು ಫೆಬ್ರವರಿ 15 ಮತ್ತು 22 ರ ನಡುವೆ ಕಂಡುಬಂದಿವೆ ಎಂದು ಬಿಬಿಎಂಪಿಯ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ದಿನದ ಹಿಂದೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಸಂಕೀರ್ಣವನ್ನು 113 ಪಾಸಿಟಿವ್ ಕೇಸ್ ಕಂಡು ಬಂದ ನಂತರ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿತ್ತು.
ಕೋವಿಡ್ ಸುರಕ್ಷತಾ ನಿರ್ಬಂಧಗಳನ್ನು ಅನುಸರಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಮಾತ್ರ ಉಳಿದಿರುವ ಆಯ್ಕೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು, ವೈದ್ಯರು ಮತ್ತು ಜಂಟಿ ಮತ್ತು ವಿಶೇಷ ಆಯುಕ್ತರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಒಂದು ನರ್ಸಿಂಗ್ ಕಾಲೇಜ್ ಮತ್ತು ಇನ್ನೆರಡು ವಸತಿ ಸಂಕೀರ್ಣಗಳು ಸೇರಿ ಒಟ್ಟು ಮೂರು ಕೋವಿಡ್ ಕ್ಲಸ್ಟರ್‌ಗಳನ್ನು ಗುರುತಿಸಿದೆ.

ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್ ಹಾಕುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು, “ಕೋವಿಡ್ ಪ್ರೋಟೋಕಾಲ್‌ಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚಿನ ಸಂಖ್ಯೆಯ ಮಾರ್ಷಲ್‌ಗಳನ್ನು ತೊಡಗಿಸಿಕೊಳ್ಳಲು ನಾನು ನಮ್ಮ ಎಲ್ಲ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಪಾಸಿಟಿವ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಇದು ಶೇಕಡಾ 1.27 ರಷ್ಟಿದೆ, ಇದು ಆತಂಕಕಾರಿಯಲ್ಲ ಈ ಸಮಯದಲ್ಲಿ, ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ” ಎಂದಿದ್ದಾರೆ.

ಕೊವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಬೆಂಗಳೂರು ಮತ್ತೆ ತೊಂದರೆಗೆ ಒಳಗಾಗಬಹುದು ಎಂದು ಬಿಬಿಎಂಪಿ ಆಯುಕ್ತ ಸೋಮವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.
“ನಗರದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆಯಿದ್ದು, ನಾವು ದಿನಕ್ಕೆ 200 ರಿಂದ 300 ರಷ್ಟು ಪ್ರಕರಣಗಳ ಏರಿಕೆಯನ್ನು ನೋಡುತ್ತಿದ್ದೇವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಪ್ರಕರಣಗಳಲ್ಲಿ ಹೆಚ್ಚಳವಿದೆ ಮತ್ತು ಈ ಎರಡು ರಾಜ್ಯಗಳೊಂದಿಗೆ ನಾವು ಗಡಿಗಳನ್ನು ಹಂಚಿಕೊಂಡಿದ್ದೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಣನೀಯ ಸಂಖ್ಯೆಯಲ್ಲಿ ಗಡಿ ಪ್ರದೇಶಗಳಿಂದ ಬಂದವರಿದ್ದಾರೆ. ನಗರದ ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿಲ್ಲ. ಜನರು ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ತೊಂದರೆಯಲ್ಲಿರಲಿದ್ದೇವೆ ಎಂದು ನಾವು ಒತ್ತಿ ಹೇಳುತ್ತಿದ್ದೇವೆ “ಎಂದು ಅವರು ಹೇಳಿದರು.
ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಶೇ 70 ರಷ್ಟು ಏರಿಕೆ ಕಂಡಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...