ಮಂಗಳವಾರ ಚಿಕ್ಕಬಳ್ಳಾಪುರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಸ್ಪೋಟಗೊಂಡಿದ್ದು ಆರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. “ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪ ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಅವರು, “ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯನ್ನು ಒತ್ತಾಯಿಸುವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ
“ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿಯವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?” ಎಂದು ಅವರು ಪ್ರಶ್ನಿಸಿದ್ದಾರೆ.
“ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಸ್ಪೋಟ- ಪ್ರಧಾನಿ ಮೋದಿ ಸೇರಿದಂತೆ ಹಲವರ ಸಂತಾಪ


