Homeಮುಖಪುಟಡ್ರಗ್ಸ್‌ ಪ್ರಕರಣ: ಪಮೇಲಾ ಗೋಸ್ವಾಮಿ ಆರೋಪ - ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ನೋಟಿಸ್

ಡ್ರಗ್ಸ್‌ ಪ್ರಕರಣ: ಪಮೇಲಾ ಗೋಸ್ವಾಮಿ ಆರೋಪ – ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ನೋಟಿಸ್

- Advertisement -
- Advertisement -

ಕಲ್ಕತ್ತಾ ಡ್ರಗ್ಸ್‌ ಪ್ರಕರಣದಲ್ಲಿ ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇತ್ತೀಚೆಗೆ ಈ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾದ ನಾಯಕಿ ಪಮೇಲಾ ಗೋಸ್ವಾಮಿ ಮತ್ತು ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಕೊಕೆನ್ ಸಾಗಾಣೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಧನದ ನಂತರ ಪಮೇಲಾ ಗೋಸ್ವಾಮಿ ಬಿಜೆಪಿ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ ರಾಕೇಶ್‌ ಸಿಂಗ್‌ಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಫೆಬ್ರವರಿ 23 ರಂದು ತನಿಖಾ ಅಧಿಕಾರಿಗಳ ಮುಂದೆ ಹಾಜರಾಗುವಂತೆ ರಾಕೇಶ್‌ ಸಿಂಗ್‌ಗೆ ನೋಟಿಸ್ ನೀಡಲಾಗಿದೆ” ಎಂದು ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಪಮೇಲಾ ಗೋಸ್ವಾಮಿ ನನ್ನ ಹೆಸರನ್ನು ಪ್ರಸ್ತಾಪಿಸಿರುವುದರಿಂದ ಇದರ ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ರಾಕೇಶ್‌ ಸಿಂಗ್ ಈ ಹಿಂದೆ ನಗರ ಪೊಲೀಸ್ ಆಯುಕ್ತ ಸೌಮೆನ್ ಮಿತ್ರಾಗೆ ಈಮೇಲ್ ಬರೆದಿದ್ದರು.

ಸಾರ್ವಜನಿಕವಾಗಿ ನನ್ನನ್ನು ಈ ಪ್ರಕರಣದಲ್ಲಿ ಆರೋಪಿಸಿರುವುದರಿಂದ ಅಕೆಯ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಈಮೇಲ್‌ನಲ್ಲಿ ಬರೆದಿದ್ದಾರೆ. ಇದರ ಪ್ರತಿಗಳನ್ನು ನ್ಯೂ ಅಲಿಪೋರ್ ಪೊಲೀಸ್ ಠಾಣೆಯ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ಉಸ್ತುವಾರಿ ಅಧಿಕಾರಿಗೂ ಕಳುಹಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

ಬಂಧನದ ನಂತರ, “ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿತೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, “ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು” ಎಂದು ಹೇಳಿದ್ದಾರೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸ್ಪೋಟ | ಜಿಲೆಟಿನ್ ಸ್ಪೋಟದಿಂದ ಅಲ್ಲ, ಯಡಿಯೂರಪ್ಪ ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿದ್ದಾರೆ- ಸಿದ್ದರಾಮಯ್ಯ

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಗಿತ್ತು.


ಇದನ್ನೂ ಓದಿ: ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...