Homeಮುಖಪುಟಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

- Advertisement -
- Advertisement -

ಕೊರೊನಾ ಪ್ರಕರಣ ಹೆಚ್ಚಳದ ಕಾರಣ ನೀಡಿ ದಕ್ಷಿಣ ಕನ್ನಡ ಮತ್ತು ಕೇರಳದ ಗಡಿಯನ್ನು ಬಂದ್ ಮಾಡುವ ರಾಜ್ಯದ ತೀರ್ಮಾನದ ವಿರುದ್ದ ಕೇರಳ ಸರ್ಕಾರ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳನ್ನು ಕರ್ನಾಟಕ ಹೇರುತ್ತಿದೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ತಮ್ಮ ನೆರೆಯ ರಾಜ್ಯವಾದ ಕರ್ನಾಟಕಕ್ಕೆ ಕೇರಳದ ಜನರು ಪ್ರಯಾಣಿಸುವಾಗ ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಉಲ್ಲೇಖಿಸಿದ್ದಾರೆ. ರಾಜ್ಯಗಳು ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ನೆರೆಯ ರಾಜ್ಯವನ್ನು ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ ಎಂದು ಹೇಳಿತ್ತು. ಪಾತೂರ್‌ ಮೂಲಕ ಮುಡಿಪು ಮತ್ತು ಸಾಲೆತ್ತೂರ್‌ ನಡುವೆ ಪ್ರಯಾಣಿಸುವ ಜನರು ಈಗ ಮಂಚಿ-ಇರಾ ಮೂಲಕ ಆರು ಕಿಲೋಮೀಟರ್ ದೂರ ಹೆಚ್ಚು ಪ್ರಯಾಣಿಸಬೇಕಾಗತ್ತದೆ. ಗಡಿ ಜಿಲ್ಲೆಗಳ ನಡುವೆ ಜನರ ಸಂಚಾರ ಬಹಳ ಹೆಚ್ಚಿರುವುದರಿಂದ ಕೇರಳದ ಹೆಚ್ಚಿನ ಗಡಿಗಳನ್ನು ಮುಚ್ಚುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌‌‌ಪ್ರೆಸ್ ವರದಿ ಮಾಡಿದೆ.

“ಇದು ಜನನಿಬಿಡ ಗಡಿಯಾಗಿದ್ದು, ಜಿಲ್ಲೆಗಳ ನಡುವೆ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಕೊರೊನಾ ನೆಗೆಟಿವ್‌‌‌ ವರದಿಯನ್ನು ಹದಿನೈದು ದಿನಕ್ಕೊಮ್ಮೆ ದೈನಂದಿನ ಪ್ರಯಾಣಿಕರಿಗೆ ಕಡ್ಡಾಯಗೊಳಿಸಲಾಗಿದ್ದರೂ, ಪ್ರವೇಶ ಗಡಿಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದರೆ ಇದನ್ನು ಕಾರ್ಯಗತಗೊಳಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ, ಕೆಲವು ಗಡಿ ಕೇಂದ್ರಗಳನ್ನು ಮುಚ್ಚಲೇಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಈ ನಿರ್ಧಾರನ್ನು ವಿರೋಧಿಸಿ ಡಿವೈಎಫ್‌ಐ ಮತ್ತು ಎವೈಎಫ್‌ಐ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ಮಾಡಿದ್ದು, ಗಡಿಗಳನ್ನು ತೆರೆಯುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ಕೊರೊನಾ – ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...