Homeಮುಖಪುಟದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ಅವರಿಗೆ ಜಾಮೀನು ನೀಡುವ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಅಭಿವ್ಯಕ್ತಿ ಸ್ವಾತಂತ್ರ್ಯ, ಅಸಮ್ಮತಿ, ಭಿನ್ನಧ್ವನಿಯ ಹಕ್ಕುಗಳ ಕುರಿತು ಹಲವು ಉಲ್ಲೇಖಗಳನ್ನು ಮಾಡಿದ್ದಾರೆ.

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ನಡೆದ “ಟೂಲ್‌ಕಿಟ್” ಪ್ರಕರಣದಲ್ಲಿ ಬೆಂಗಳೂರಿನಿಂದ ಬಂಧಿಸಲ್ಪಟ್ಟ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿ ನ್ಯಾಯಾಲಯವು ಅವಳ ಜಾಮೀನು ನೀಡುವಾಗ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದೇಶದಲ್ಲಿ ಭಿನ್ನಾಭಿಪ್ರಾಯದ ಹಕ್ಕಿನ ಪರವಾಗಿ ಬಲವಾದ ಹೇಳಿಕೆಗಳನ್ನು ನೀಡಿದೆ.

ಪ್ರಕರಣದಲ್ಲಿ ನ್ಯಾಯಾಧೀಶರ ಉಲ್ಲೇಖಗಳು ಇಲ್ಲಿವೆ

  • ಜಾಮೀನು ಮನವಿಗೆ ದೆಹಲಿ ಪೊಲೀಸರ ವಿರೋಧವು ಕೇವಲ ಅಲಂಕಾರಿಕವಾಗಿದೆ ಎಂದು ತೋರುತ್ತದೆ… ದಾಖಲೆಯಲ್ಲಿ ಲಭ್ಯವಿರುವ ಅಲ್ಪ ಮತ್ತು ಹುರುಳೇ ಇಲ್ಲದ ಸೂಕ್ಷ್ಮ ಪುರಾವೆಗಳನ್ನು ಗಮನಿಸಿದರೆ, 22 ವರ್ಷದ ಯುವತಿಯ ವಿರುದ್ಧ ‘ಜಾಮೀನು’ ಎಂಬ ಸಾಮಾನ್ಯ ನಿಯಮವನ್ನು ಉಲ್ಲಂಘಿಸಲು ಯಾವುದೇ ಸ್ಪಷ್ಟವಾದ ಕಾರಣಗಳು ಕಂಡುಬಂದಿಲ್ಲ.
  • ಸಂಪೂರ್ಣವಾಗಿ ಯಾವುದೇ ಕ್ರಿಮಿನಲ್ ಕಳಂಕವಿಲ್ಲದ, ಸಮಾಜದಲ್ಲಿ ಸುಭದ್ರ ಸ್ಥಾನಮಾನವನ್ನು ಹೊಂದಿರುವ ಯುವತಿಯನ್ನು ಮತ್ತೆ ಜೈಲಿಗೆ ಕಳುಹಿಸಲು ಯಾವುದೇ ಕಾರಣಗಳು ಕಾಣುತ್ತಿಲ್ಲ.
  • ಆರೋಪಿಗಳು ಪೊಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸಂಸ್ಥಾಪಕರೊಂದಿಗೆ ಸೇರಿ ಜನವರಿ 26 ರಂದು ಹಿಂಸಾಚಾರ ಹುಟ್ಟುಹಾಕಲು ಪ್ರಯತ್ನಿಸಿದ್ದಾರೆ ಅಥವಾ ಅದಕ್ಕಾಗಿ ಟೂಲ್ಕಿಟ್ ಹಂಚಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಇಲ್ಲದೆ ಇರುವುದರಿಂದ, ಅವರು ಪ್ರತ್ಯೇಕತಾವಾದಿ ಪ್ರವೃತ್ತಿಯನ್ನು ಅಥವಾ ಗಣರಾಜ್ಯೋತ್ಸವದಂದು ಉಂಟಾದ ಹಿಂಸಾಚಾರವನ್ನು ಬೆಂಬಲಿಸಿದರು ಎಂಬುದನ್ನು ಒಪ್ಪಲಾಗದು.

ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು

  • ಅವರು ಕಾನೂನುಗಳನ್ನು ವಿರೋಧಿಸಲು ಬೇಕಾಗಿ ಜನರೊಂದಿಗೆ ಒಂದು ವೇದಿಕೆಯನ್ನು ಹಂಚಿಕೊಂಡಿದ್ದಾರೆ ಅಷ್ಟೇ.
  • ಜನವರಿ 26 ರ ಹಿಂಸಾಚಾರದ ದುಷ್ಕರ್ಮಿಗಳು ಮತ್ತು ಪಿಜೆಎಫ್ ಹಾಗೂ ಆರೋಪಿಗಳ ನಡುಬಿನ ಸಂಪರ್ಕವಿರುವ ಯಾವ ಸಾಕ್ಷ್ಯಾಧಾರಗಳೂ ಕೂಡಾ ಇಲ್ಲ. “ಟೂಲ್ಕಿಟ್”ನಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ನೆರವಾಗುವ ಕರೆಯನ್ನು ನೀಡಿಲ್ಲ.
  • ಯಾವುದೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ನಾಗರಿಕರು ಸರ್ಕಾರದ ಆತ್ಮಸಾಕ್ಷಿಯ ಪಾಲಕರು. ಸರ್ಕಾರದ ನೀತಿಗಳನ್ನು ಒಪ್ಪುವುದಿಲ್ಲ ಎಂದ ಮಾತ್ರಕ್ಕೆ ಅವರನ್ನು ಜೈಲಲಿನಲ್ಲಿ ಇಡಲಾಗುವುದಿಲ್ಲ.
  • ನಮ್ಮ ಸಂವಿಧಾನದ ಕರ್ತೃರು ಸಹ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ ಭಿನ್ನತೆಗೆ ಸರಿಯಾದ ಗೌರವವನ್ನು ನೀಡಿದರು.
  • ಭಿನ್ನಾಭಿಪ್ರಾಯದ ಹಕ್ಕನ್ನು ಭಾರತದ ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ದೃಢವಾಗಿ ಪ್ರತಿಪಾದಿಸಲಾಗಿದೆ.
  • ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಜಾಗತಿಕ ಬೆಂಬಲ ಪಡೆಯು ಹಕ್ಕನ್ನು ಒಳಗೊಂಡಿದೆ.
  • ವಿಚಾರ ವಿನಿಮಯಕ್ಕೆ ಯಾವುದೇ ಭೌಗೋಳಿಕ ಅಡೆತಡೆಗಳು ಇಲ್ಲ. ಕಾನೂನು ಚೌಕಟ್ಟಿನೊಳಗಡೆ ವಿದೇಶದಲ್ಲಿರುವವರೊಂದಿಗೂ ವಿಚಾರ ವಿನಿಮಯ ಮಾಡುವುದು ನಾಗರಿಕರ ಮೂಲಭೂತ ಹಕ್ಕಾಗಿದೆ.

ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...