ಕೊರೊನಾ ಕಾಲದಲ್ಲಿ ರಾಜ್ಯದ ಶಿಕ್ಷಣ ವ್ಯವಸ್ಥೆ ಹದಗೆಟ್ಟು ಹೋಗಿದೆ. ರಾಜ್ಯಸರ್ಕಾರದ ಅನಿಶ್ಚಿತ ನಿಲುವುಗಳು ಮತ್ತು ಹೊಂದಾಣಿಕೆಯ ರಾಜಕೀಯಕ್ಕೆ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಶಾಲಾ ಶುಲ್ಕವನ್ನು ಶೇ. 30 ರಷ್ಟು ಕಡಿತಗೊಳಿಸಬೇಕು ಎಂದು ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾವಿರಾರು ಖಾಸಗಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಬೆಂಗಳೂರಿನಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.
ಖಾಸಗಿ ಶಾಲೆಗಳು ಪೋಷಕರೊಂದಿಗೆ ಚರ್ಚಿಸಿಕೊಂಡು ಪರ್ಯಾಯ ಸೂತ್ರವೊಂದನ್ನು ತಂದರೆ ನಮ್ಮದು ಏನೂ ಅಭ್ಯಂತರವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ರವರು ಹೇಳಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಶುಲ್ಕ ಕಡಿತದ ಸರ್ಕಾರಿ ಆದೇಶವನ್ನು ಧಿಕ್ಕರಿಸಿರುವ ಖಾಸಗಿ ಶಾಲೆಗಳ ನಿಲುವಿನ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರು ಅಸಹಾಯಕತೆಯನ್ನು ವ್ಯಕ್ತಪಡಿಸಿರುವುದು ಅವರ ಅಸಾಮರ್ಥ್ಯವನ್ನಷ್ಟೇ ತೋರಿಸುತ್ತದೆ” ಎಂದು ಟೀಕಿಸಿದ್ದಾರೆ.
ಶುಲ್ಕ ಕಡಿತದ ಸರ್ಕಾರಿ ಆದೇಶವನ್ನು ಧಿಕ್ಕರಿಸಿರುವ ಖಾಸಗಿ ಶಾಲೆಗಳ ನಿಲುವಿನ ಬಗ್ಗೆ ಶಿಕ್ಷಣ ಸಚಿವ @nimmasuresh ಅಸಹಾಯಕತೆಯನ್ನು ವ್ಯಕ್ತಪಡಿಸಿರುವುದು ಅವರ ಅಸಾಮರ್ಥ್ಯವನ್ನಷ್ಟೇ ತೋರಿಸುತ್ತದೆ.
2/4— Siddaramaiah (@siddaramaiah) February 24, 2021
ಶಿಕ್ಷಣ ಸಚಿವರು ಖಾಸಗಿ ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ಪೋಷಕರ ಸಭೆ ಕರೆದು ಈಗಿನ ಬಿಕ್ಕಟ್ಟನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ವಿದ್ಯಾರ್ಥಿಗಳನ್ನು ಈಗಿನ ಅತಂತ್ರ ಸ್ಥಿತಿಯಿಂದ ಮುಕ್ತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೊರೊನಾ ಹಾವಳಿಯಿಂದಾಗಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳೆಲ್ಲರೂ ಕಷ್ಟ-ನಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೊಡು-ಕೊಳ್ಳುವಿಕೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಯಡಿಯೂರಪ್ಪ ಮತ್ತು ಸುರೇಶ್ ಕುಮಾರ್ ಒಂದು ವರ್ಗದ ಹಿತೈಷಿಯಂತೆ ವರ್ತಿಸಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: 30% ಶುಲ್ಕ ಕಡಿತ: ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು



ಮುಚ್ಚಿಸಿ ಖಾಸಗಿ ಶಾಲೆಗಳನ್ನು.. ಉದ್ಧರಿಸಿ ಸರ್ಕಾರಿ ಶಾಲೆಗಳನ್ನು…