Homeಮುಖಪುಟದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

ದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

- Advertisement -
- Advertisement -

2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ನಂತರ ದಾಖಲಾದ 53 ಕೊಲೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು 38 ರಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ ಮತ್ತು 17 ರಲ್ಲಿ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ಪ್ರಾರಂಭವಾಗಿವೆ. ಹೆಚ್ಚಿನ ಕೊಲೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ, ಆದರೆ ಹಿಂಸಾಚಾರ ನಡೆಸಿದ ಗುಂಪಿನ ಭಾಗವಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿಶೇಷ ವರದಿ ತಿಳಿಸಿದೆ.

44 ಪ್ರಕರಣಗಳಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಪಡೆಯಲಾಗಿದ್ದು, ಗಲಭೆಯ ನಂತರ ಕನಿಷ್ಠ 12 ಸಂತ್ರಸ್ತ ಕುಟುಂಬಗಳು ವಾಸಸ್ಥಳ ತೊರೆದಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ 15 ಗಲಭೆ ಸಂತ್ರಸ್ತರ ಕುಟುಂಬಗಳನ್ನು ಪತ್ತೆಹಚ್ಚಿ ಮಾತನಾಡಿದ ನಂತರ ಈ ಮಾಹಿತಿ ಕಂಡುಬಂದಿದೆ.

PC: Prajavani

ಕೋಮು ಹಿಂಸಾಚಾರವು 2020 ರ ಫೆಬ್ರವರಿ 24 ಮತ್ತು 26 ರ ನಡುವೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿತ್ತು. 53 ಜನ ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಮತ್ತು ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹಿಂಸಾಚಾರದ ನಂತರ ಹಲವಾರು ಕುಟುಂಬಗಳು ತಿಂಗಳುಗಟ್ಟಲೆ ತಾತ್ಕಾಲಿಕ ಶಿಬಿರಗಳಲ್ಲಿ ನೆಲೆಸಬೇಕಾಗಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

’ಒಟ್ಟು 755 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 400 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಇಲ್ಲಿಯವರೆಗೆ 1,753 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ 933 ಮುಸ್ಲಿಮರು ಮತ್ತು 820 ಹಿಂದೂಗಳು ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

53 ಕೊಲೆಗಳು ಸೇರಿದಂತೆ ಅರವತ್ತೆರಡು ಪ್ರಕರಣಗಳನ್ನು ಅಪರಾಧ ಶಾಖೆಯ ಮೂರು ವಿಶೇಷ ತನಿಖಾ ತಂಡಗಳು ನಿರ್ವಹಿಸುತ್ತಿವೆ. ಈ ಪೈಕಿ 46 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮೂರು ಎಸ್‌ಐಟಿಗಳು 390 ಜನರನ್ನು ಬಂಧಿಸಿವೆ – 178 ಹಿಂದೂಗಳು ಮತ್ತು 212 ಮುಸ್ಲಿಮರು. ದೊಡ್ಡ ಪಿತೂರಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕವು, 21 ಜನರನ್ನು ಬಂಧಿಸಿದೆ, ಇದರಲ್ಲಿ 19 ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು ಇದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ವಿಶೇಷ ಸಿಪಿ ಅಪರಾಧ ಶಾಖೆ ಪ್ರವೀರ್ ರಂಜನ್, “38 ಕೊಲೆ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ ಮತ್ತು 17 ರಲ್ಲಿ ಆರೋಪದ ಮೇಲೆ ವಾದಗಳು ಪ್ರಾರಂಭವಾಗಿವೆ” ಎಂದಿದ್ದಾರೆ.

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ದದ ದೂರುಗಳ ನಿರ್ಲಕ್ಷ್ಯ; ತನಿಖಾ ವರದಿ
ಪೋಟೋ ಕೃಪೆ: ದಿ ಕ್ವಿಂಟ್

ಇಂಡಿಯನ್ ಎಕ್ಸ್ ಪ್ರೆಸ್ ಕಂಡುಕೊಂಡ ಪ್ರಕಾರ, ಹೆಚ್ಚಿನ ಸಂದರ್ಭಗಳಲ್ಲಿ, ಕುಟುಂಬಗಳು ತಮ್ಮ ಕುಟುಂಬದ ಪ್ರಮುಖ ಆದಾಯ ಗಳಿಸುವ ವ್ಯಕ್ತಿಯನ್ನು ಕಳೆದುಕೊಂಡಿವೆ. ಪರಿಹಾರವನ್ನು (ವಯಸ್ಕನ ಸಾವಿಗೆ 10 ಲಕ್ಷ ರೂ. ಮತ್ತು ಅಪ್ರಾಪ್ತ ವಯಸ್ಕನ ಸಾವಿಗೆ 5 ಲಕ್ಷ ರೂ.) 44 ಕುಟುಂಬಗಳಿಗೆ ಒದಗಿಸಲಾಗಿದ್ದು, ಹೆಚ್ಚಿನವರು ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯವನ್ನು ಭದ್ರಪಡಿಸಲು ಈ ಮೊತ್ತ ಯಾತಕ್ಕೂ ಸಾಲುವುದಿಲ್ಲ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಮೃತರಾದವರ ಹೆಂಡತಿಯರು, ವಯಸ್ಕ ಮಕ್ಕಳು ಇನ್ನೂ ಉದ್ಯೋಗವನ್ನು ಹುಡುಕುವಲ್ಲಿ ಯಶಸ್ವಿಯಾಗಲಿಲ್ಲ, ದಿನನಿತ್ಯದ ಖರ್ಚುಗಳಿಗಾಗಿ ಅವರ ಸಂಬಂಧಿಕರ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ದೆಹಲಿ ಸರ್ಕಾರದ ಪ್ರಕಾರ, ಇಲ್ಲಿವರೆಗೆ ಒಟ್ಟು 26.09 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. 1,100 ಕ್ಲೈಮ್‌ಗಳಲ್ಲಿ ವಾಣಿಜ್ಯ ಆಸ್ತಿಗೆ ಹಾನಿಯಾಗಿದ್ದಕ್ಕಾಗಿ 11.28 ಕೋಟಿ ರೂ. ಪರಿಹಾರ ನೀಡಲಾಗಿದೆ.
ಗಲಭೆಗೆ ಒಳಗಾದವರ ಹೆಚ್ಚಿನ ಕುಟುಂಬಗಳು ಕಳೆದ ವರ್ಷದಂತೆಯೇ ಅದೇ ಮನೆಯಲ್ಲಿಯೇ ಉಳಿದಿದ್ದರೆ, 12 ಕುಟಂಬಗಳು ದೆಹಲಿ-ಎನ್‌ಸಿಆರ್‌ನಲ್ಲಿ ಹೊಸ ಮನೆಗಳಿಗೆ ತೆರಳಿವೆ ಅಥವಾ ನಗರವನ್ನು ತೊರೆದಿವೆ. ಹಿಂತಿರುಗಿದವರಲ್ಲಿ ಅನೇಕರು ತಮ್ಮ ಬಳಿ ಹಣಕಾಸಿನ ಸಂಪನ್ಮೂಲಗಳಿಲ್ಲ ಎಂದು ಹೇಳಿದ್ದಾರೆ. ಪರಿಹರಿಸಿದ 400 ಪ್ರಕರಣಗಳಲ್ಲಿ 342 ರಲ್ಲಿ ಚಾರ್ಜ್‌ಶೀಟ್‌ಗಳು ಮತ್ತು ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಬಂಧಿತ 1,753 ಜನರಲ್ಲಿ 1,204 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು 544 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1,553 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದ್ದು, 200 ಮಂದಿಯ ಮೇಲೆ ಇನ್ನೂ ಚಾರ್ಜ್‌ಶೀಟ್ ಮಾಡಲಾಗಿಲ್ಲ. 342 ಚಾರ್ಜ್‌ಶೀಟ್ ಪ್ರಕರಣಗಳಲ್ಲಿ 250 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಗಳು ಸ್ವೀಕರಿಸಿವೆ ಮತ್ತು ಕೆಲವು ಪ್ರಕರಣಗಳಲ್ಲಿ, ಆರೋಪದ ಮೇಲಿನ ವಾದಗಳು ಪ್ರಾರಂಭವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳನ್ನು ಪರಿಹರಿಸಲು ಅವರು, “ವಿಶ್ವಾಸಾರ್ಹ, ವೈಜ್ಞಾನಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು” ಹೆಚ್ಚು ಅವಲಂಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೊಲೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹೆಚ್ಚಿನ ಆರೋಪಿಗಳು ನೇರವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ, ಆದರೆ ಕೊಲೆ ನಡೆದ ಜನಸಮೂಹದ ಭಾಗವಾಗಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌‌ಪ್ರೆಸ್

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...