Homeಮುಖಪುಟಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

- Advertisement -
- Advertisement -

ಫೆಬ್ರವರಿ 22 ರಂದು ದಾದ್ರಾ ಮತ್ತು ನಗರ್ ಹವೇಲಿಯ ಪಕ್ಷೇತರ ಸಂಸದರೊಬ್ಬರು ಮುಂಬೈನ ಮರೀನ್ ಡ್ರೈವ್ ಪ್ರದೇಶದ ಹೋಟೆಲ್‍ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಕ್ಕಿರುವ ಡೆತ್‌ನೋಟ್‌ನಲ್ಲಿ ಬಿಜೆಪಿ ಮುಖಂಡನ ಹೆಸರಿದೆ ಎಂದು ಮಹಾರಾಷ್ಟ್ರದ ಗೃಹ ಸಚಿವರು ಆರೋಪಿಸಿದ್ದಾರೆ.

“ಸಂಸದ ಮೋಹನ್ ದೇಲ್ಕರ್ ಅವರ ಸುಸೈಡ್ ನೋಟ್‍ನಲ್ಲಿ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಬಿಜೆಪಿಯ ಪ್ರಫುಲ್ ಪಟೇಲ್ ಅವರ ಹೆಸರು ಉಲ್ಲೇಖಗೊಂಡಿದೆ. ಪ್ರಫುಲ್ ಪಟೇಲ್ ಅವರು ದೇಲ್ಕರ್ ಮೇಲೆ ಒತ್ತಡ ಹೇರುತ್ತಿದ್ದುದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ” ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

“ಮುಂಬೈಯಲ್ಲಿ ತಮಗೆ ನ್ಯಾಯ ದೊರಕುವ ಭರವಸೆ ಅವರಿಗಿದ್ದುದರಿಂದ ಅವರು ಇಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರಬಹುದು” ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

ದೇಲ್ಕರ್ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿತ್ತು ಎಂಬುದು ಅವರ 16 ಪುಟಗಳ ಡೆತ್ ನೋಟ್‍ನಿಂದ ತಿಳಿಯುತ್ತದೆ ಎಂದು ದೇಶಮುಖ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗದ ನೇತೃತ್ವ ವಹಿಸಿದ್ದ ಸಚಿನ್ ಸಾವಂತ್ ಹೇಳಿದ್ದಾರೆ.

“ಡೆತ್‌ ನೋಟ್‍ನಲ್ಲಿ ಕೆಲವು ಐಪಿಎಸ್ ಹಾಗೂ ಇತರ ಅಧಿಕಾರಿಗಳ ಹೆಸರುಗಳೂ ಇದ್ದವು. ಅವರ ಆತ್ಮಹತ್ಯೆಯ ಹಿಂದೆ ‘ಬಿಜೆಪಿ ಪಾತ್ರ’ದ ಕುರಿತು ತನಿಖೆ ನಡೆಸುವ ಭರವಸೆ ಸಚಿವರಿಂದ ದೊರಕಿದೆ” ಎಂದು ಅವರು ಹೇಳಿದರು.

ದೇಲ್ಕರ್ ವಿರುದ್ಧ ಹಲವು ಸುಳ್ಳು ಪ್ರಕರಣಗಳು ದಾಖಲಾಗಿದ್ದವು ಹಾಗೂ ಅವರ ಬೆಂಬಲಿಗರಿಗೆ ಕಿರುಕುಳ ನೀಡಲಾಗಿತ್ತು ಎಂದೂ ಸಾವಂತ್ ಆರೋಪಿಸಿದ್ದಾರೆ.


ಇದನ್ನೂ ಓದಿ: ನಾಳೆ ಯುವ ಕಿಸಾನ್ ದಿನ: ದೆಹಲಿಯ ರೈತ ವೇದಿಕೆಗೆಳು ಯುವಜನರಿಗೆ ಮೀಸಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...