Homeಕರ್ನಾಟಕಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಪೌರಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಕೂಡದು ಎಂಬ ನಿಯಮವಿದೆ. ಆದರೆ ಅದನ್ನು ಮೀರಿದ ಅಧಿಕಾರಿಗಳು ನಾರಾಯಣ ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

- Advertisement -
- Advertisement -

ಪುರಸಭೆ ಅಧಿಕಾರಿಗಳು ಕಿರುಕುಳ ನೀಡಿತ್ತಿದ್ದಾರೆ ಎಂದು ಆರೋಪಿಸಿರುವ ಪೌರ ಕಾರ್ಮಿಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಮೃತರಿಗೆ ಮೂರು ಜನ ಮಕ್ಕಳಿದ್ದು, ಹೆಂಡತಿ ಕಳೆದ 5 ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು.

ಪುರಸಭೆ ಪೌರಕಾರ್ಮಿಕರಾದ ನಾರಾಯಣ ಎಂಬುವವರು ನೇಣಿಗೆ ಶರಣಾಗಿದ್ದಾರೆ. ಇದಕ್ಕೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಘಟನೆಯ ವಿವರ:

ಪೌರಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಕೂಡದು ಎಂಬ ನಿಯಮವಿದೆ. ಆದರೆ ಅದನ್ನು ಮೀರಿದ ಅಧಿಕಾರಿಗಳು ನಾರಾಯಣ ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ನಾರಾಯಣ ಅವರನ್ನು ಕರೆದು ಬೆದರಿಕೆ ಹಾಕಿದ್ದಾರೆ. “ತಾನು ಮ್ಯಾನ್‌ಹೋಲ್‌ಗೆ ಇಳಿಯಲು ಅಧಿಕಾರಿಗಳು ಕಾರಣವಲ್ಲ; ನಾನೇ ಸ್ವಯಿಚ್ಚೆಯಿಂದ ಇಳಿದಿದ್ದೇನೆ” ಎಂದು ಆತನಿಂದ ಹೇಳಿಕೆ ಕೊಡಿಸಿದ್ದಾರೆ.

ಈ ಘಟನೆಯ ಕುರಿತು ನಾರಾಯಣ ಅವರ ಅತ್ತೆ ಸಂಪೂರ್ಣ ವಿವರ ನೀಡಿದ್ದಾರೆ. ವೀಡಿಯೋ ನೋಡಿ.

ನಂತರ 2018 ರಲ್ಲಿ ಒಮ್ಮೆ ಆರೋಗ್ಯ ಅಧಿಕಾರಿ ಹೇಳಿದ ಕೆಲಸವನ್ನು ಮಾಡಲು ನಿರಾಕರಿಸಿದ ನಾರಾಯಣ ಅವರನ್ನು ಅಧಿಕಾರಿ ಹೊಡೆದಿದ್ದರು. ಈ ಘಟನೆಯಿಂದ ನೊಂದ ನಾರಾಯಣ ದೂರು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಕೌನ್ಸಿಲರ್ ಸೇರಿದಂತೆ ಕೆಲವರು ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಜೊತೆಗೆ ಆರೋಗ್ಯ ಆಧಿಕಾರಿ ನಾರಾಯಣ ಅವರ ಬಳಿ ಕ್ಷಮೆ ಕೇಳುವಂತೆ ಆದೇಶಿಸಿದ್ದಾರೆ. ಹಾಗಾಗಿ ಅಧಿಕಾರಿ ಕ್ಷಮೆ ಕೂಡ ಕೇಳಿದ್ದರು. ಆದರೆ ಇದನ್ನೇ ಗುರಿಯಾಗಿಸಿಕೊಂಡು ಅಂದಿನಿಂದ ಆ ಅಧಿಕಾರಿ ನಾರಾಯಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಗೋಡ್ಸೆ ಬಗ್ಗೆ ಸುಳ್ಳು ಹೇಳಿ ತಪ್ಪುದಾರಿಗೆಳೆದಿದ್ದರು: ಕಾಂಗ್ರೆಸ್ ಸೇರಿದ ಹಿಂದೂ ಮಹಾಸಭಾ ಸದಸ್ಯ

ಫೆ.22 ರಂದು ನಾರಾಯಣ ಅವರಿಗೆ ಕೋವಾಕ್ಸಿನ್ ಲಸಿಕೆ ನೀಡಲಾಗಿತ್ತು. ನಂತರ ಸ್ವಲ್ಪ ಚಳಿ-ಜ್ವರ ಕಾಣಿಸಿಕೊಂಡಿದ್ದರಿಂದ ಅವರು ಕೆಲಸಕ್ಕೆ ಹೋಗಲು ಸಾಧ್ಯವಾಗಿಲ್ಲ. ಮರುದಿನ ಕೆಲಸಕ್ಕೆ ಹೋದಾಗ ಮುಖ್ಯ ಅಧಿಕಾರಗಳಿಂದ ಅನುಮತಿ ಪಡೆದು ಕೆಲಸಕ್ಕೆ ಬರಬೇಕು ಎಂದು ಮೇಸ್ತ್ರಿಗಳು ಹೇಳಿಕಳುಹಿಸಿದ್ದಾರೆ. ಆಗ ನಾರಾಯಣ ಆರೋಗ್ಯ ಅಧಿಕಾರಿಗಳ ಬಳಿ ಹೋದಾಗ, ಅಲ್ಲಿ ಅವರು “ನೀನು ಟ್ರ್ಯಾಕ್ಟರ್ ಕೆಲಸಕ್ಕೆ ಹೋಗು” ಎಂದು ಹೇಳಿದ್ದಾರೆ. ಇದು ತುಂಬಾ ಕಷ್ಟದ ಕೆಲಸವಾಗಿರುವುದರಿಂದ, ಜೊತೆಗೆ ತನಗೆ ಆರೋಗ್ಯ ಸರಿಯಿಲ್ಲದಿರುವುದರಿಂದ ಬೇರೆ ಕೆಲಸ ಕೊಡಿ ಎಂದು ನಾರಾಯಣ ಕೇಳಿದ್ದಾರೆ. ಈ ಹಿಂದೆಯೂ ನಾರಾಯಣ ಇದೇ ಕೆಲಸವನ್ನು ಮಾಡಿದ್ದಾರೆ. ಆದರೆ ಅಂದು ಆರೋಗ್ಯ ಸರಿಯಿಲ್ಲದಿದ್ದುದರಿಂದ ಈ ಕೆಲಸ ಮಾಡಲು ನಿರಾಕರಿಸಿದ್ದಾರೆ. ಆದರೆ ಕಿರುಕುಳ ನೀಡುತ್ತಿದ್ದ ಅಧಿಕಾರಿ ಈ ಅವಕಾಶವನ್ನು ಬಳಸಿಕೊಂಡು, “ಮಾಡಿದರೆ ಈ ಕೆಲಸ ಮಾಡು; ಇಲ್ಲದಿದ್ದರೆ ಮನೆಗೆ ಹೋಗು” ಎಂದು ನಿಂದಿಸಿ ಕಳುಹಿಸಿದ್ದಾರೆ.

ಇದರಿಂದ ಮನನೊಂದ ನಾರಾಯಣ, ತನ್ನ ಮನೆಗೆ ಬಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ, “ಪುರಸಭೆಯ ಮುಖ್ಯ ಅಧಿಕಾರಿ ಮತ್ತು ಆರೋಗ್ಯ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ. ಅವರು ನನಗೆ ಕಿರುಕುಳ ನೀಡಿದ್ದಾರೆ” ಎಂದು ಬರೆದಿದ್ದಾರೆ.

ಈ ವಿಷಯ ತಿಳಿದ ಅಧಿಕಾರಿಗಳು ಇತರ ಪೌರ ಕಾರ್ಮಿಕರಿಗೂ ಬೆದರಿಕೆ ಹಾಕಿದ್ದು, ಯಾರೂ ಕೂಡ ಅಲ್ಲಿಗೆ ಹೋಗಕೂಡದು ಎಂದು ಒತ್ತಾಯಿಸಿದ್ದಾರೆ. ನಂತರ ಈ ಪ್ರಕರಣವನ್ನು ಮುಚ್ಚಿಹಾಕಲು ಪುರಸಭೆಯ ಇತರ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳು ಸೇರಿ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ವಿಷಯ ಸಮಾಜ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಚರ್ಚೆಗೆ ಬಂದು ಪುರಸಭೆಯ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕಾಂಗ್ರೆಸ್-ಡಿಎಂಕೆ ಸರ್ಕಾರ ಪತನ ಹಿನ್ನೆಲೆ – ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...