Homeಮುಖಪುಟತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ತೈಲ ಬೆಲೆ ಹೆಚ್ಚಳ ಹಿನ್ನೆಲೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಬೀದಿಗಿಳಿದಿವೆ. ವಿಭಿನ್ನ ರೀತಿಯ ಪ್ರತಿಭಟನೆಗೆ ತೈಲ ದರ ಹೆಚ್ಚಳ ಕಾರಣವಾಗುತ್ತಿದ್ದು. ಶುಕ್ರವಾರ ಕೇರಳದಲ್ಲಿ ಸಂಸದ ಶಶಿ ತರೂರ್ ಆಟೋ ಎಳೆದರೆ, ಇತ್ತ ಬಿಹಾರದಲ್ಲಿ ತೇಜಸ್ವಿ ಯಾದವ್ ಸೈಕಲ್ ಸವಾರಿ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಕೇರಳದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. ಯುವ ಜನತೆ ವಿಭಿನ್ನ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಕೇರಳ ಸಚಿವಾಲಯದ ಹೊರಗೆ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಇತರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತೈಲ ದರ ಹೆಚ್ಚಾದ ಹಿನ್ನೆಲೆ ಆಟೋ ಚಾಲಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಆಟೋಗಳಿಗೆ ಹಗ್ಗ ಹಾಕಿ ಎಳೆದುಕೊಂಡು ಹೋಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಬಿಹಾರ ವಿಧಾನಸಭೆ ಬಜೆಟ್ ಅಧಿವೇಶನದ 6 ನೇ ದಿನವಾದ ಶುಕ್ರವಾರ, ವಿರೋಧ ಪಕ್ಷದ ನಾಯಕ, ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅಧಿವೇಶನದಲ್ಲಿ ಭಾಗವಹಿಸಲು ಸೈಕಲ್ ಮೂಲಕ ವಿಧಾನಸಭೆಯನ್ನು ತಲುಪಿದರು. ಸೋಮವಾರ ಕೂಡ ತೇಜಸ್ವಿ ಅಸೆಂಬ್ಲಿಗೆ ಟ್ಯ್ರಾಕ್ಟರ್‌ನಲ್ಲಿ ಬಂದಿದ್ದರು. ಇಂಧನ ಬೆಲೆ ಹೆಚ್ಚಳದ ವಿರುದ್ಧ ತೇಜಸ್ವಿ ಯಾದವ್ ಪ್ರತಿಭಟನೆ ನಡೆಸುತ್ತಿರುವ ಪರಿ ಇದಾಗಿದೆ.

ನಂತರ ಟ್ವೀಟ್ ಮಾಡಿರುವ ತೇಜಶ್ವಿ ಯಾದವ್, “ಹೆಚ್ಚುತ್ತಿರುವ ತೈಲ ಬೆಲೆಗಳನ್ನು ವಿರೋಧಿಸಿ, ಅಸೆಂಬ್ಲಿಗೆ ಇಂದು ಸೈಕ್ಲಿಂಗ್ ಮೂಲಕ ತಲುಪಿದೆ. ಬಡವರ ರಕ್ತ ಹೀರಿಕೊಂಡ ಶ್ರೀಮಂತರ ಪ್ರೀತಿಯ ಸರ್ಕಾರ ಪೆಟ್ರೋಲ್, ಡೀಸೆಲ್, ಅನಿಲದ ಬೆಲೆಯನ್ನು ಹೆಚ್ಚಿಸಿ, ಸಾಮಾನ್ಯ ಜನರನ್ನು ಸಾಯುವಂತೆ ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಬಡವರನ್ನು ಲೂಟಿ ಮಾಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಓಡಿಸಿಕೊಂಡು ತಮ್ಮ ಕಚೇರಿಗೆ ಹೋಗಿದ್ದಾರೆ. ಇಂಧನ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೂ ಅವರು ಎಲೆಕ್ಟ್ರಿಕ್ ಸ್ಕೂಟರ್‌ ಬಳಸಿ ಹೋಗಿದ್ದರು.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

PC: ANI

ಈ ಬಾರಿಯ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ವಿರುದ್ಧ ಸಿಗುವ ಯಾವುದೇ ಅವಕಾಶವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಟ್ಟು ಕೊಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ. ಈಗ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...