Homeಕರೋನಾ ತಲ್ಲಣಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!

ಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!

ಕೊರೊನಾದಿಂದ ರಾಜ್ಯದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಲೆ ಏರಿಕೆ ಜನ ಸಾಮಾನ್ಯರನ್ನು ಹಿಂಸಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಕಾರು ಖರೀದಿಯ ಮೊತ್ತ ಹೆಚ್ಚಿಸಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಇಡೀ ವಿಶ್ವವೇ ತಲ್ಲಣಿಸಿದೆ. ರಾಜ್ಯ ಕೂಡ ಆರ್ಥಿಕ ಬಿಕ್ಕಟಿನಲ್ಲಿದೆ ಎಂದು ಸರ್ಕಾರ ಹೇಳಿಕೊಂಡಿದೆ . ಈ ನಡುವೆಯೇ ಕರ್ನಾಟಕ ಸರ್ಕಾರ ತನ್ನ 32 ಮಂತ್ರಿಗಳು ಮತ್ತು 28 ಸಂಸದರಿಗೆ ಕಾರು ಖರೀದಿಸಲು ನೀಡುತ್ತಿದ್ದ ಹಣವನ್ನು 23 ಲಕ್ಷಕ್ಕೆ ಏರಿಕೆ ಮಾಡಿದೆ.

ಸಿಬ್ಬಂದಿ ಮತ್ತು ಆಡಳಿತ ಸೇವೆಗಳ ಇಲಾಖೆ (ಡಿಪಿಎಆರ್) ಹೊರಡಿಸಿರುವ ಆದೇಶದ ಪ್ರಕಾರ, ರಾಜ್ಯದ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮಂತ್ರಿಗಳು ಮತ್ತು ಸಂಸದರಿಗೆ ವಾಹನಗಳನ್ನು ಖರೀದಿಸುವ ಭತ್ಯೆಯನ್ನು 22 ಲಕ್ಷ ರೂ.ಗಳಿಂದ 23 ಲಕ್ಷ ರೂ.ಗೆ ಹೆಚ್ಚಿಸಿದೆ.

ಕೊರೊನಾ ಸಂಕಷ್ಟದಿಂದ ಈಗಾಗಲೇ ರಾಜ್ಯದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಲೆ ಏರಿಕೆ ಎಂಬುದು ಜನ ಸಾಮಾನ್ಯರನ್ನು ಹಿಂಸಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಕಾರು ಖರೀದಿಯ ಮೊತ್ತವನ್ನು ಹೆಚ್ಚಿಸಿದೆ. ಕಾರು ಖರೀದಿಗೆ ಮೊತ್ತವನ್ನು ಹೆಚ್ಚು ಮಾಡಬೇಕೆಂದು ಸಂಸದರು, ಶಾಸಕರು ಒತ್ತಡ ಹೇರಿದ್ದ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಸರ್ಕಾರದ ಈ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸಿವೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ’ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷಕ್ಕೆ ನಿರ್ಧಾರವನ್ನು ಮುಂದೂಡಬೇಕಾಗಿತ್ತು, ಸರ್ಕಾರ ಈಗಾಗಲೇ 85,000 ಕೋಟಿ ರೂ.ಗಳ ಸಾಲವನ್ನು ತೆಗೆದುಕೊಂಡಿದೆ’ ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೆಖಿಸಿದೆ.

ಇನ್ನು ನಿಯಮಗಳ ಪ್ರಕಾರ, ಮಂತ್ರಿಗಳು ಅಥವಾ ಚುನಾಯಿತ ಪ್ರತಿನಿಧಿಗಳು ತಮ್ಮ ಕಾರುಗಳನ್ನು ಒಂದು ಲಕ್ಷ ಕಿ.ಮೀ ಓಟವನ್ನು ಪೂರ್ಣಗೊಳಿಸಿದ ನಂತರ ಅಥವಾ ಖರೀದಿಸಿದ ಏಳು ವರ್ಷಗಳ ನಂತರ ಮಾತ್ರ ಬದಲಾಯಿಸಬಹುದು. ಅದರ ನಂತರ, ಈ ಕಾರನ್ನು ಸಾಮಾನ್ಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಇರಿಸಲಾಗುತ್ತದೆ. ವಿಐಪಿಗಳು ಜಿಲ್ಲೆಗಳಿಗೆ ಭೇಟಿ ನೀಡುವಾಗ ಅವರ ಪ್ರಯಾಣದ ಅವಶ್ಯಕತೆಗಳಿಗಾಗಿ ಇವುಗಳನ್ನು ಬಳಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂದಾಜು 33 ಲಕ್ಷ ರೂ ಬೆಲೆಬಾಳುವ ಟೊಯೋಟಾ ಫಾರ್ಚೂನರ್ ಎಂಬ ಐಷಾರಾಮಿ ಕಾರು ಖರೀದಿಸಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ರಾಜ್ಯಸಭಾ ಸದಸ್ಯ ದೇವೇಗೌಡರು ರಾಜ್ಯಸಭಾ ಸದಸ್ಯರಾದ ನಂತರ ರಾಜ್ಯ ಸರ್ಕಾರ 60 ಲಕ್ಷ ರೂ. ಬೆಲೆಯ ವೋಲ್ವೋ ಹೊಸ ಕಾರನ್ನು ಖರೀದಿಸಿ ನೀಡಿದೆ.

ಸಾಂಕ್ರಾಮಿಕ ರೋಗ ಕೊರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ನೆನೆಗುದಿಗೆ ಬಿದ್ದಿದೆ. ಇದರ ನೆಪದಲ್ಲಿ ರಾಜ್ಯದಲ್ಲಿ ಅನೇಕ ಮೂಲಭೂತ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಕಡಿತಗೊಳಿಸಲಾಗಿದೆ. ಆದರೆ ಜನಪ್ರತಿನಿಧಿಗಳ ದುಂದುವೆಚ್ಚಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...