ಪುರಸಭೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೌರ ಕಾರ್ಮಿಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಈ ಘಟನೆ ನಡೆದಿದೆ. ಪುರಸಭೆ ಪೌರಕಾರ್ಮಿಕರಾದ ನಾರಾಯಣ ಎಂಬುವವರು ನೇಣಿಗೆ ಶರಣಾಗಿದ್ದರು. ಇದಕ್ಕೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.
ಈ ಪ್ರಕರಣವನ್ನು ಮುಚ್ಚಿಹಾಕಲು ಪುರಸಭೆಯ ಇತರ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳು ಸೇರಿ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಈ ವಿಷಯ ಸಮಾಜ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಚರ್ಚೆಗೆ ಬಂದು ಪುರಸಭೆಯ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದರು. ನಂತರ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಇದನ್ನೂ ಓದಿ: ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ
ಘಟನೆಗೆ ಸಂಬಂಧಿಸಿದಂತೆ ಈಗ ಪೌರಡಳಿತ ನಿರ್ದೇಶನಾಲಯದ ನಿರ್ದೇಶಕ ಬಿ.ಬಿ.ಕಾವೇರಿ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


ಈ ಘಟನೆಯ ಕುರಿತು ನಾರಾಯಣ ಅವರ ಅತ್ತೆ ಸಂಪೂರ್ಣ ವಿವರ ನೀಡಿದ್ದಾರೆ. ವೀಡಿಯೋ ನೋಡಿ.
ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ: 104
ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ


