Homeಕರ್ನಾಟಕಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್...

ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ಟಿಪ್ಪು ಸುಲ್ತಾನ್ ಜಯಂತಿ ಕುರಿತು ವಿವಾದಾತ್ಮಕ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಬಿಜೆ‍ಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2017ರಲ್ಲಿ ರಾಜ್ಯ ಸರ್ಕಾರ ಆಯೋಜಿಸಿದ್ದ ಟಿಪ್ಪು ಜಯಂತಿ ಸಂದರ್ಭದಲ್ಲಿ ಆಚರಣೆಯನ್ನು ಬಹಿಷ್ಕರಿಸುವ ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರು. ಜೊತೆಗೆ 18 ನೇ ಶತಮಾನದ ಮೈಸೂರು ರಾಜ ಟಿಪ್ಪು ಸುಲ್ತಾನ್ ವಿರುದ್ಧ ಮಾಡಿದ ಆರೋಪಗಳಿಗೆ ಸಂಬಂಧಿಸಿದ್ದ ದೂರನ್ನು ಕೆಳ ನ್ಯಾಯಾಲಯವು ಈ ಹಿಂದೆ ವಜಾಗೊಳಿಸಿತ್ತು.

ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ಎ.ಆಲಂ ಪಾಷಾ, ಶಾಸಕರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ದೂರಗೆ ಸಾಕ್ಷಿಯಾಗಿ ನವೆಂಬರ್ 10, 2017 ರಂದು ನಿಗದಿಯಾಗಿದ್ದ ಟಿಪ್ಪು ಜಯಂತಿ ಆಚರಣೆ ಬಗ್ಗೆ ಅಕ್ಟೋಬರ್ 22, 2017 ರಂದು ಹೆಗಡೆ ಮತ್ತು ಸಿ.ಟಿ ರವಿ ಅವರ ವಿವಾದಾತ್ಮಕ ಟ್ವೀಟ್‌ಗಳನ್ನು ಒಳಗೊಂಡಿರುವ ಸುದ್ದಿ ವರದಿಯನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಈ ಹೇಳಿಕೆಗಳು ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಅಪರಾಧಗಳಾಗಿವೆ ಎಂದು ಪಾಷಾ ತನಿಖೆಗೆ ಕೋರಿದ್ದರು. ಆದರೆ, 10 ನೇ ಎಸಿಎಂ ನ್ಯಾಯಾಲಯ ನವೆಂಬರ್ 4, 2017 ರಂದು ದೂರನ್ನು ತಳ್ಳಿಹಾಕಿತ್ತು.

ಆ ಸಮಯದಲ್ಲಿ ಹೆಗಡೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಪಿಸಿಆರ್ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್, ಅರ್ಜಿದಾರರು ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ವಿಚಾರಣೆಗೆ ಅರ್ಹವಲ್ಲ ಎಂದು ಅರ್ಜಿ ತಿರಸ್ಕರಿಸಿತ್ತು.

‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (ಸಿ) ಪ್ರಕಾರ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಈ ವಿಷಯವನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ರವಾನಿಸಲಾಗಿದೆ. ಕಾನೂನಿನ ಪ್ರಕಾರ ಹೊಸ ದೂರನ್ನು ಪರಿಗಣಿಸುವಂತೆ ತಿಳಿಸಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ಪೀಠ ತಿಳಿಸಿದೆ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ ಸದಸ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯಕ್ಕೆ ಇದೊಂದು ಆಶಾದಾಯಕ ಬೆಳೆವಣಿಗೆ. ಇತಿಹಾಸ ಪುರುಷರನ್ನು ಅವಹೇಳನ ಮಾಡುವುದು ಇನ್ನಾದರೂ ನಿಲ್ಲಲಿ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...