Homeಕರ್ನಾಟಕಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

- Advertisement -
- Advertisement -

ರಾಜ್ಯದ್ಯಂತ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ರಾಯಚೂರಿನಲ್ಲಿ ಹೋರಾಟ ನಡೆಯುತ್ತಿದ್ದು, ಇಂದು ಭಾನುವಾರ (ಫೆ.28) ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #StopIllegalLiquorSale, #ImplementHCOrder ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.

ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಯ ಸತ್ಯಾಗ್ರಹ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಬಕಾರಿ ಇಲಾಖೆ ಯಾವುದೇ ಮಾತುಕತೆಗೆ ಮುಂದಾಗಿರದ ಕಾರಣ ಪ್ರತಿಭಟನಾ ನಿರತರು ಟ್ವಿಟರ್ ಅಭಿಯಾನ ಕೈಗೊಂಡಿದ್ದಾರೆ.

ಹಕ್ಕೊತ್ತಾಯಗಳೇನು?

1. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
2. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ಅಭಿಯಾನದಲ್ಲಿ ನೂರಾರು ಮಂದಿ ಟ್ವೀಟ್ ಮಾಡುವ ಮೂಲಕ ಭಾಗಿಯಾಗಿದ್ದಾರೆ.  ಅನೇಕ ಸಂಘ ಸಂಸ್ಥೆಗಳು, ಯುಜನರು ಈ ಅಭಿಯಾನದ ಭಾಗವಾಗಿದ್ದಾರೆ.

ಸ್ವರಾಜ್ ಇಂಡಿಯಾದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಈ ಅಭಿಯಾನವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸಲು, ಹೈಕೋರ್ಟ್ ಆದೇಶ ಅನುಷ್ಟಾನ ಮಾಡುವಂತಹ ಮೂಲಭೂತವಾದದ್ದನ್ನು ಕೇಳಲು ಅಥವಾ ಮಹಿಳಾ ನಿಯೋಗವನ್ನು ಸಿಎಂ ಭೇಟಿ ಮಾಡಬೇಕೆಂದು ಒತ್ತಾಯಿಸುವುದಕ್ಕೆ ಕರ್ನಾಟಕದಲ್ಲಿ ಪ್ರತಿಭಟನೆ ಬೇಕೇ..? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

 

ರಾಜ್ಯ ಸರ್ಕಾರವು  ಸಂವಿಧಾನದ ಮದ್ಯಪಾನ ತಡೆ ಕಾಯ್ದೆ 47 ರ  ನೀತಿಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಅವುಗಳ ಆಶಯದ ಕಡೆಗೆ ಹೆಜ್ಜೆಹಾಕಬೇಕು. ಮದ್ಯಮಾರಾಟವನ್ನು ನಿಲ್ಲಿಸುವ ಕುರಿತು ಗ್ರಾಮಸಭೆಗಳ ನಿರ್ಣಯ, ಪರವಾನಗಿ ಹೊಂದಿರುವ ಮಳಿಗೆಗಳಿಗೂ ಸೇರಿದಂತೆ ಅಂತಿಮವಾಗಬೇಕು. 5 ರಿಂದ 7 ಮಹಿಳೆಯರ ಕಾವಲು ಪಡೆಯನ್ನು ಪ್ರತಿ ಹಳ್ಳಿಗಳಲ್ಲಿ ರಚಿಸುವ ಮೂಲಕ ಅಕ್ರಮ ಮದ್ಯ‌ ಮಾರಾಟವನ್ನು ತಡೆಯಬೇಕು ಎಂದು ಟ್ವಿಟರ್‌ ಅಭಿಯಾನದಲ್ಲಿ ಮದ್ಯ ನಿಷೇದ ಆಂದೋಲನ ಕರ್ನಾಟಕ ಹೇಳಿದೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಮತ್ತೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಕಳೆದ 6 ವರ್ಷಗಳಿಂದ ಕರ್ನಾಟಕದ ಗ್ರಾಮೀಣ ಮಹಿಳೆಯರು ಅಕ್ರಮ ಮದ್ಯ ಮಾರಾಟವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ಹೊರತಾಗಿಯೂ, ಸರ್ಕಾರವು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುತ್ತಿಲ್ಲ. ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

ಸಾಕಷ್ಟು ಯುವಜನತೆ ಕೂಡ ಮದ್ಯ ನಿಷೇದ ಆಂದೋಲನಕ್ಕೆ ಸಾಥ್ ನೀಡಿದ್ದು, ತಮ್ಮ ಟ್ವಿಟರ್‌ ಅಕೌಂಟ್‌ಗಳಲ್ಲಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಯಾಕೆ ಮುಖ್ಯಮಂತ್ರಿಗಳು ಮಹಿಳಾ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಮತ್ತು ಪ್ರಧಾನಿಯವರನ್ನು ಟ್ಯಾಗ್ ಮಾಡಿ ಫಣೀಶ್ ಕೃಷ್ಣ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...