Homeಮುಖಪುಟಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್...

ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಭಾಗಿ

ಅದೇ ರೀತಿಯಲ್ಲಿ ಮಾರ್ಚ್ 21 ರಂದು ಹಾವೇರಿ ಮತ್ತು ಮಾರ್ಚ್ 22 ರಂದು ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್ ನಡೆಸಲು ನಿರ್ಧರಿಸಲಾಗಿದೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿದ್ದು ಕೇಂದ್ರ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿವೆ. ಈಗ ಅದೇ ಮಾದರಿಯಲ್ಲಿ ರಾಜ್ಯದ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮಾರ್ಚ್ 20 ರಂದು ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ಅದೇ ರೀತಿಯಲ್ಲಿ ಮಾರ್ಚ್ 21 ರಂದು ಹಾವೇರಿ ಮತ್ತು ಮಾರ್ಚ್ 22 ರಂದು ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್ ನಡೆಸಲು ನಿರ್ಧರಿಸಲಾಗಿದೆ. ಎಲ್ಲಾ ರೈತ, ಪ್ರಗತಿಪರ ಸಂಘಟನೆಗಳು ಒಗ್ಗೂಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ನಿರ್ಣಯ ಕೈಗೊಂಡಿದ್ದಾರೆ.

ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ಸೂಡದ ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂ (ಅಂಬೇಡ್ಕರ್ ವಾದ) ದ ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಸುದ್ದಿ ಸಾಗರದ ಸಂಪಾದಕರಾದ ಚಾರ್ವಾಕ ರಾಘವೇಂದ್ರ, ದಸಸಂ ದ ಜಿಲ್ಲಾಸಂಚಾಲಕರಾದ ದೂಗೂರು ಪರಮೇಶ್ವರ್‌ರವರು ಈಗಾಗಲೇ ದೆಹಲಿಯ ಹೋರಾಟದ ಸ್ಥಳಗಳಿಗೆ ತಲುಪಿದ್ದಾರೆ. ಅಲ್ಲಿನ ಸಂಯುಕ್ತ ಕಿಸಾನ್ ಮೋರ್ಚಾದ ಡಾ. ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ರವರಿಗೆ ಶಿವಮೊಗ್ಗದ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ.

ಕರ್ನಾಟಕದಲ್ಲಿ ಮೂರು ದಿನ ನಡೆಯುವ ಈ ಮೂರು ಮಹಾಪಂಚಾಯತ್‌ಗಳಿಲ್ಲಿ ಭಾಗವಹಿಸಲು ದೆಹಲಿ ಹೋರಾಟದ ರೈತ ಮುಖಂಡರುಗಳಾದ ಡಾ. ದರ್ಶನ್ ಪಾಲ್, ಯೋಗೇಂದ್ರ ಯಾದವ್, ಜಗಮೋಹನ್ ಸಿಂಗ್, ರಾಕೇಶ್ ಟಿಕಾಯತ್‌ರವರು ಒಪ್ಪಿದ್ದಾರೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್ ಅಶೋಕ್ ತಿಳಿಸಿದ್ದಾರೆ.

ಈ ರೈತ ಮಹಾಪಂಚಾಯತ್‌ಗಳಲ್ಲಿ ಕರ್ನಾಟಕದ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ನೂರಾರು ಪ್ರಗತಿಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಎಲ್ಲಾ ರೈತ ಮುಖಂಡರು, ದಲಿತ ಮುಖಂಡರು, ಎಡಪಕ್ಷಗಳ ಮುಖಂಡರು, ಕಾರ್ಮಿಕ ಮುಖಂಡರು, ಮಹಿಳಾ ಮುಖಂಡರು, ಯುವಜನರು ಮಹಾಪಂಚಾಯತ್‌ನಲ್ಲಿ ಮಾತನಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಇದನ್ನೂ ಓದಿ; ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು – ಮನ್‌ಕಿ ಬಾತ್‌ಗೆ ಡಿಸ್‌ಲೈಕ್‌ಗಳ ಸುರಿಮಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...