Homeಮುಖಪುಟರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

- Advertisement -
- Advertisement -

ಅನ್ನ ನೀಡುವ ರೈತರೆಂದು ದೇಶದ್ರೋಹಿಗಳಾಗಲು ಸಾಧ್ಯವಿಲ್ಲ. ಜನವರಿ 26ರ ಕೆಂಪು ಕೋಟೆಯ ಘರ್ಷಣೆಯು ಕೇಂದ್ರ ಸರ್ಕಾರದಿಂದ ಪೂರ್ವಯೋಜಿತವಾಗಿತ್ತು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, “ಈ ದೇಶದ ರೈತರು ಅಸಮಾಧಾನದಲ್ಲಿದ್ದಾರೆ. 90ಕ್ಕೂ ಹೆಚ್ಚು ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 250ಕ್ಕೂ ಹೆಚ್ಚು ಜನ ಪ್ರಾಣ ತೆತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಜನವರಿ 26ರ ಕೆಂಪು ಕೋಟೆಯ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಹೊರತು ರೈತರಲ್ಲ. ರೈತರಿಗೆ ದೆಹಲಿ ರಸ್ತೆಗಳ ಬಗ್ಗೆ ಹೆಚ್ಚಿನ ಪರಿಚಯವಿಲ್ಲ. ಆದರೆ ಕೇಂದ್ರ ಸರ್ಕಾರವೇ ರೈತರನ್ನು ದಾರಿ ತಪ್ಪಿಸಿತು. ದೆಹಲಿಯ ಮುಖ್ಯಮಂತ್ರಿಯಾಗಿ ಇದೆಲ್ಲದರ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಹೋರಾಟನಿರತ ರೈತರಿಗೆ ಕೇಂದ್ರ ಸರ್ಕಾರ ನೀಡಿದ ಕಿರುಕುಳಗಳನ್ನು ಬ್ರಿಟಿಷರೂ ಸಹ ನೀಡಿರಲಿಲ್ಲ. ಅಲ್ಲದೇ ಹೋರಾಟ ನಿರತ ರೈತರ ಮೇಲೆ ಸುಳ್ಳು ಕೇಸುಗಳನ್ನು ದಾಖಲು ಮಾಡಲಾಗಿದೆ. ನಮ್ಮ ರೈತರು ಏನಾದರೂ ಆಗಬಹುದು, ಆದರೆ ದೇಶದ್ರೋಹಿಗಳಾಗಲು ಸಾಧ್ಯವಿಲ್ಲ. ಆದರೂ ಅವರ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಂದು ಕಡೆ ರೈತರ ಮಕ್ಕಳು ಗಡಿಗಳಲ್ಲಿ ದೇಶ ಕಾಯುತ್ತಿದ್ದಾರೆ. ಆದರೆ ಇನ್ನೊಂದು ಕಡೆ ರೈತರನ್ನು ಅವಮಾನಿಸಲಾಗುತ್ತಿದೆ” ಎಂದು ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನಲ್ಲಿ ಮೋದಿಯವರು ಎಂಎಸ್‌ಪಿ ಇತ್ತು, ಎಂಎಸ್‌ಪಿ ಇದೆ ಮತ್ತು ಎಂಎಸ್‌ಪಿ ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ದಯವಿಟ್ಟು ಉತ್ತರಪ್ರದೇಶದ ಯಾವ ಮಂಡಿಯಲ್ಲಿ ಎಂಎಸ್‌ಪಿ ನೀಡಲಾಗುತ್ತದೆ ಎಂದು ನನಗೆ ತಿಳಿಸುವಿರಾ? ಮೋದಿ ಜೊತೆಗೆ ಯೋಗಿಯೂ ಸುಳ್ಳು ಹೇಳುತ್ತಿದ್ದಾರೆ ಎಂದು ಕೇಜ್ರಿವಾಲ್ ಕಿಡಿಕಾರಿದರು.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವುದಾಗಿ ಘೋಷಿಸಿದೆ. ಆ ಹಿನ್ನೆಲೆಯಲ್ಲಿ ಅದು ರಾಜ್ಯದ ಹಲವಾರು ಕಡೆಗಳಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಹಮ್ಮಿಕೊಂಡಿದೆ. ಅಲ್ಲದೇ ಪಂಜಾಬ್‌ನ ಮೊಗ್ಗ ಜಿಲ್ಲೆಯಲ್ಲಿಯೂ ಸಹ ಆಪ್ ವತಿಯಿಂದ ಮಾರ್ಚ್ 21 ರಂದು ಮಹಾಪಂಚಾಯತ್ ನಡೆಯಲಿದೆ.


ಇದನ್ನೂ ಓದಿ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...