ಪುಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 23 ವರ್ಷದ ಯುವತಿ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಥೋಡ್‌ಗೂ ಈ ಪ್ರಕರಣಕ್ಕೂ ಸಂಬಂಧವಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದರಿಂದ, ಸಚಿವ ಸಂಜಯ್ ರಾಥೋಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
“ಕೊಳಕು ರಾಜಕೀಯ” ದಿಂದಾಗಿ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.
ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ
ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದಾರೆ.
ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ
“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.
“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.
ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ


