Homeಮುಖಪುಟಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ರಿಪಬ್ಲಿಕ್‌ ಟಿವಿಯ ಟಿಆರ್‌ಪಿ ರೇಟಿಂಗ್‌ ಅನ್ನು‌ ಬದಲಾಯಿಸಿದ್ದಕ್ಕಾಗಿ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ನೀಡಿದ್ದರು- ಪಾರ್ಥೋ ದಾಸ್‌ಗುಪ್ತಾ

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಬಂಧನವಾಗಿದ್ದು ಪ್ರಮುಖ ಆರೋಪಿ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ (BARC) ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ. ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪಾರ್ಥೋ ದಾಸ್‌ಗುಪ್ತಾ ಅವರನ್ನು ಬಂಧಿಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ಈ ಹಿಂದೆ  BARC ನ ಮತ್ತೋರ್ವ ಮಾಜಿ ಮುಖ್ಯಸ್ಥ ರೊಮಿಲ್‌ ರಾಮ್‌ಗರ‍್ಹಿಯಾ, ರಿಪಬ್ಲಿಕ್‌ ಮೀಡಿಯಾ ನೆಟ್‌ವರ್ಕ್‌ನ ಸಿಇಒ ವಿಕಾಸ್‌ ಖಾನ್‌ಚಂದಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ನೇಷನ್ ವಾಂಟ್ಸ್ ಟು ಸೀ ಅರ್ನಬ್ಸ್ ಚಾಟ್ ಅಕೌಂಟ್!

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದರು.

ಎರಡು ರಜಾ ದಿನಗಳಲ್ಲಿ ರಿಪಬ್ಲಿಕ್‌ ಟಿವಿಯ ರೇಟಿಂಗ್‌ ಉತ್ತಮವಾಗಿರುವಂತೆ ಟಿಆರ್‌ಪಿಯನ್ನು‌ ಬದಲಾಯಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ತಮಗೆ ಕೊಟ್ಟಿರುವುದಾಗಿ ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಕೈಬರಹದಲ್ಲಿ ಹೇಳಿಕೆ ನೀಡಿದ್ದಾಗಿ ಮುಂಬೈ ಪೊಲೀಸರು ಹೇಳಿದ್ದರು.

ದಾಸ್‌ಗುಪ್ತಾ ಅವರ ಹೇಳಿಕೆಯು ಹೀಗಿದೆ: “ನನಗೆ ಅರ್ನಾಬ್ ಗೋಸ್ವಾಮಿ ಅವರು 2004 ರಿಂದ ಪರಿಚಿತರು. ನಾವು ಟೈಮ್ಸ್ ನೌನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ನಾನು 2013 ರಲ್ಲಿ BARCನ ಸಿಇಒ ಆಗಿ ಸೇರಿಕೊಂಡೆ. ಅರ್ನಾಬ್ ಗೋಸ್ವಾಮಿ ಅವರು 2017 ರಲ್ಲಿ ರಿಪಬ್ಲಿಕ್ ಅನ್ನು ಪ್ರಾರಂಭಿಸಿದರು. ರಿಪಬ್ಲಿಕ್ ಟಿವಿಯನ್ನು ಪ್ರಾರಂಭಿಸುವ ಮೊದಲೇ ಅವರು ನನ್ನೊಂದಿಗೆ ಬ್ರಾಡ್‌ಕಾಸ್ಟಿಂಗ್‌ (ಪ್ರಸಾರ) ಯೋಜನೆಗಳ ಬಗ್ಗೆ ಮಾತನಾಡಿದ್ದರು. ಟಿಆರ್‌ಪಿ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿದೆ ಎಂದು ಗೋಸ್ವಾಮಿಗೆ ಚೆನ್ನಾಗಿ ತಿಳಿದಿತ್ತು. ಹಾಗಾಗಿ ಅವರ ಚಾನಲ್‌ಗೆ ಉತ್ತಮ ರೇಟಿಂಗ್ ಪಡೆಯಲು ಸಹಾಯ ಮಾಡಬೇಕು ಎಂಬುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡುತ್ತಿದ್ದರು. ಭವಿಷ್ಯದಲ್ಲಿ ನನಗೆ ಸಹಾಯ ಮಾಡಲು ಅವರು ಪ್ರಸ್ತಾಪಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...