Homeಕರ್ನಾಟಕಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

- Advertisement -
- Advertisement -

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಮಂಗಳವಾರ (ಮಾ.2) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಹಲವರು ಮಹಿಳಾ ಕಾರ್ಯಕರ್ತರು ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಮುಖಂಡರು ವಾಗ್ದಾಳಿ ನಡೆಸಿದರು.

ಜನ ಸಾಮಾನ್ಯರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬೆಳಿಗ್ಗೆ 10:30ಕ್ಕೆ ಸಿಟಿ ರೈಲ್ವೆ ನಿಲ್ದಾಣದ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಪಾದಯಾತ್ರೆ ಹೊರಟು, ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆವರೆಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

Image
PC:Twitter@KPCCPresident

ಪ್ರತಿಭಟನೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಎತ್ತಿಕೊಂಡ ಮಹಿಳೆಯರು, ಕೊರಳಿಗೆ ತರಕಾರಿ ಹಾರಗಳನ್ನು ಹಾಕಿಕೊಂಡು ಘೋಷಣೆಗಳನ್ನು ಕೂಗುತ್ತ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನು ರಸ್ತೆ ಮಧ್ಯದಲ್ಲಿ ಒಲೆ ಉರಿಸಿ ಇಡ್ಲಿ ಪಾತ್ರೆಯಿಟ್ಟು, ರಸ್ತೆಯಲ್ಲೆ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಹಿಳೆಯರೊಂದಿಗೆ ಅಡುಗೆ ಮಾಡುತ್ತಾ, ಸರ್ಕಾರ ಇಂಧನ ದರ ಹೆಚ್ಚಿಸಿರುವುದನ್ನು ಖಂಡಿಸಿದ್ದಾರೆ. ಪ್ರತಿಭಟನೆ ಆಯೋಜಿಸಿದ್ದ ಮಹಿಳಾ ಘಟಕವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಕುರಿ, ಮೇಕೆಗಳು ಸತ್ತರೆ ಪರಿಹಾರ ನೀಡುವ ‘ಅನುಗ್ರಹ’ ಯೋಜನೆ ಮರುಜಾರಿಗೊಳಿಸಿ: ಸಿದ್ದರಾಮಯ್ಯ

Image
PC:Twitter@KPCCPresident

ಇತ್ತ ಫ್ರೀಡಂ ಪಾರ್ಕ್‌ನಲ್ಲಿ ಗೌರವ ಧನ ಹೆಚ್ಚಳ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ. ಇದರ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಗಳ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಇಂದು ಏಕಕಾಲದಲ್ಲಿ ಒಂದು ಕಡೆ ಸಾರಿಗೆ ನೌಕರರ ಪ್ರತಿಭಟನೆ, ಮತ್ತೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ನಡೆಯುತ್ತಿದೆ. ಇದು ಬಿಜೆಪಿ ದುರಾಡಳಿತಕ್ಕೆ ಹಿಡಿದ ಕನ್ನಡಿ. ಬೇಜವಾಬ್ದಾರಿ ಬಿಜೆಪಿಯಿಂದ ಜನ ನೆಮ್ಮದಿ ಕಳೆದುಕೊಂಡಿದ್ದಾರೆ ಎಂದಿದೆ.


ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...